ಕ್ರೈಸ್ತ ಅಭಿವೃದ್ಧಿ ಮಂಡಳಿ ಸ್ಥಾಪಿಸಿ, ಇಲ್ಲ ಹೋರಾಟ ಎದುರಿಸಿ : ಡಿಸೋಜ
ಮಂಗಳೂರು : ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ರಾಜ್ಯದಲ್ಲಿ ಪರ ವಿರೋಧ ವಾದಗಳು ನಡೆಯುತ್ತಿವೆ.
ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಡಿಸೆಂಬರ್ 05 ರಂದು ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡುವ ಸಾಧ್ಯತೆಗಳಿವೆ.
ಏತನ್ಮಧ್ಯೆ ರಾಜ್ಯದಲ್ಲಿ ಕ್ರೈಸ್ತ ಸಮುದಾಯ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ವಿಧಾನಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಒತ್ತಾಯಿಸಿದ್ದಾರೆ.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸೋಜಾ, ಬಜೆಟ್ ನಲ್ಲಿ ಕ್ರೈಸ್ತ ಅಭಿವೃದ್ಧಿ ನಿಗಮ ಮಂಡಳಿ ಮಾಡಲು ಹಣ ಮೀಸಲಿಟ್ಟಿದ್ದನ್ನು ರದ್ದುಗೊಳಿಸಿ ಸಿಎಂ ಯಡಿಯೂರಪ್ಪನವರು ಕ್ರೈಸ್ತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ.

ಕೂಡಲೇ ಈ ಬಗ್ಗೆ ಪುನರ್ ಪರಿಶೀಲನೆ ನಡೆಸಿ, ಕ್ರೈಸ್ತ ಸಮುದಾಯ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು.
ಇಲ್ಲದಿದ್ದಲ್ಲಿ ರಾಜ್ಯದ ಕ್ರೈಸ್ತ ಸಮುದಾಯವನ್ನು ಎಬ್ಬಿಸಿ, ಬೀದಿಗಿಳಿದು ಹೋರಾಟ ಮಾಡುತ್ತೇವೆ. ಇದಕ್ಕೆ ರಾಜ್ಯ ಸರ್ಕಾರ ನೇರ ಹೊಣೆಯಾಗಲಿದೆ ಎಂದು ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ ಬೇರೆ ಬೇರೆ ಸಮುದಾಯದವರಿಗೆ ಅಭಿವೃದ್ಧಿ ಮಂಡಳಿ ಇದೆ. ಕ್ರೈಸ್ತ ಸಮುದಾಯದವರು ಸಾಕಷ್ಟು ವರ್ಷಗಳಿಂದ ಈ ಬಗ್ಗೆ ಬೇಡಿಕೆ ಇಟ್ಟಿದ್ದರೂ ಇನ್ನೂ ಕ್ರೈಸ್ತ ಅಭಿವೃದ್ಧಿ ಮಂಡಳಿ ಆಗಿಲ್ಲ.
ಯಡಿಯೂರಪ್ಪ ನನ್ನ ಹೆದರಿಸಬೇಡಿ, ನೀವು ನನಗಿಂತ ಜ್ಯೂನಿಯರ್ : ವಾಟಾಳ್
ಸರ್ಕಾರ ಕ್ರೈಸ್ತರ ಒಳ್ಳೆಯತನವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ ಡಿಸೋಜಾ, 2013-18 ರವರೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕ್ರೈಸ್ತ ಸಮುದಾಯದ ಮೇಲೆ ಸರಣಿ ದಾಳಿ ನಡೆದಿದೆ,
ಆದರೂ ಕ್ರೈಸ್ತರು ಸಹಿಸಿಕೊಂಡರು. ಇದರ ತನಿಖೆಗಾಗಿ ಆಯೋಗ ರಚನೆ ಮಾಡಲಾಯಿತು. ಆಯೋಗದ ತೀರ್ಮಾನ ಏನು ಎಂದು ಕೇಳಿದರೆ ಇಂದಿಗೂ ಗೊತ್ತಿಲ್ಲ.

ಬಡ ವರ್ಗದ ಕ್ರೈಸ್ತರಿಗೆ ಈ ರೀತಿ ಅನ್ಯಾಯ ಮಾಡುವುದು ಸರಿಯಲ್ಲ ಎಂದು ಹೇಳಿದರು.
ಇನ್ನು ಈ ಹಿಂದೆ ಕ್ರೈಸ್ತ ಸಮುದಾಯದವರು ವಿದೇಶಕ್ಕೆ ತೆರಳಿ ಉನ್ನತ ವ್ಯಾಸಂಗ ಮಾಡುವುದಾದರೆ 20 ಲಕ್ಷ ರೂ. ನೀಡಲಾಗುತ್ತಿತ್ತು.
ಅದನ್ನು ಈಗ ರದ್ದು ಮಾಡಲಾಯಿತು. ಇಂಜಿನಿಯರಿಂಗ್, ಮೆಡಿಕಲ್ ಓದುವವರಿಗೆ ವರ್ಷಕ್ಕೆ ನೀಡುವ 3.50 ಲಕ್ಷ ರೂ.ವನ್ನು ಎರಡು ಲಕ್ಷಕ್ಕೆ ಇಳಿಸಲಾಯಿತು.
ಗಂಗಾ ಕಲ್ಯಾಣ ಯೋಜನೆಯನ್ನು ರದ್ದುಗೊಳಿಸಲಾಯಿತು. ಕ್ರೈಸ್ತ ಅಭಿವೃದ್ಧಿ ನಿಗಮ ಮಂಡಳಿಯನ್ನು ರದ್ದು ಪಡಿಸಲಾಯಿತು. ಈ ಬಗ್ಗೆ ಸಿಎಂ ಉತ್ತರ ನೀಡಲಿ ಎಂದು ಐವನ್ ಡಿಸೋಜ ಒತ್ತಾಯಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








