ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಹಾಗೂ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರಗೆ ಕೊರೊನಾ ವಕ್ಕರಿಸಿದೆ.
ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದೆ. ನನಗೆ ಕೊರೊನಾದ ಯಾವುದೇ ಲಕ್ಷಣಗಳು ಇಲ್ಲ. ಆದರೂ ವೈದ್ಯರ ಸಲಹೆಯಂತೆ ಕ್ವಾರಂಟೈನ್ನಲ್ಲಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಎಲ್ಲಾ ಮುನ್ನೆಚ್ಚರಿಕೆ ವಹಿಸಬೇಕು ಎಂದು ವಿನಂತಿಸಿಕೊಳ್ಳುತ್ತೇನೆ ಎಂದು ವಿಜಯೇಂದ್ರ ಟ್ವಿಟರ್ನಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಬಿಜೆಪಿ ರಾಷ್ಟೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಂಸದ ತೇಜಸ್ವಿ ಸೂರ್ಯ ಅವರನ್ನು ಬಿ.ವೈ ವಿಜಯೇಂದ್ರ ಸನ್ಮಾನ ಮಾಡಿದ್ದರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ತೇಜಸ್ವಿ ಸೂರ್ಯರ ಸನ್ಮಾನ ವೇಳೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕೂಡ ಉಪಸ್ಥಿತರಿದ್ದರು. ಈಗಾಗಲೇ ಒಂದು ಬಾರಿ ಕೊರೊನಾ ಸೋಂಕಿಗೆ ಗುರಿಯಾಗಿ ಚಿಕಿತ್ಸೆ ಪಡೆದಿರುವ ಬಿಎಸ್ವೈಗೂ ಈಗ ಆತಂಕ ಎದುರಾಗಿದೆ.