ಬೆಂಗಳೂರು : ಆರ್ ಆರ್ ನಗರ ಚುನಾವಣಾ ಕಣ ರಂಗೇರಿದೆ. ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ನಾನಾ ತಂತ್ರಗಳನ್ನು ರೂಪಿಸುತ್ತಿದ್ದಾರೆ. ಇದೀಗ ಚುನಾವಣಾ ಪ್ರಚಾರಕ್ಕೆ ಸಿನಿರಂಗು ಸಿಗುವ ಎಲ್ಲಾ ಸಾಧ್ಯತೆಗಳಿವೆ. ಹೌದು..! ಇದಕ್ಕೆ ಪುಷ್ಠಿ ನೀಡುವಂತೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ( D.K.Shivakumar ) ನಟ ನೆನಪಿರಲಿ ಪ್ರೇಮ್ ಅವರನ್ನು ಭೇಟಿ ಮಾಡಿದ್ದು, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನು ಬಿಜೆಪಿಯಿಂದ ಕಣಕ್ಕಿಳಿದಿರುವ ಮುನಿರತ್ನ ದರ್ಶನ್ ಅವರನ್ನು ಪ್ರಚಾರಕ್ಕೆ ಕರೆತರುವ ಸಾಧ್ಯತೆಗಳಿವೆ.
ಇದನ್ನೂ ಓದಿ : ತಮಿಳುನಾಡನ್ನ ಹೊಗಳಿದ ಸಿ.ಟಿ.ರವಿಗೆ ಕನ್ನಡಿಗರಿಂದ ತರಾಟೆ
ಹೀಗಾಗಿ ಮುನಿರತ್ನ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕುಸುಮಾ ಪರ ಪ್ರಚಾರಕ್ಕೆ ಬರುವಂತೆ ನಟ ಪ್ರೇಮ್ ಅವರನ್ನು ಡಿ.ಕೆ. ಶಿವಕುಮಾರ್ ಅವರು ಆಹ್ವಾನಿಸಿದ್ದಾರೆ ಎನ್ನಲಾಗಿದೆ.
ಈಗಾಗಲೇ ನಟಿ ಮಾಲಾಶ್ರೀ, ಸಾಧು ಕೋಕಿಲ, ಉಮಾಶ್ರೀ, ಜಯಮಾಲಾ ಸೇರಿದಂತೆ ಚಿತ್ರರಂಗದ ಹಲವು ಪ್ರಮುಖರು ಕಾಂಗ್ರೆಸ್ ಪಕ್ಷದಲ್ಲಿದ್ದಾರೆ.
ಇದನ್ನೂ ಓದಿ : ಮತ್ತೆ ಡಿಸಿಎಂ ಆಗೋ ಆಸೆ ಹೊರಹಾಕಿದ ಶ್ರೀ ರಾಮುಲು
ಹೀಗಾಗಿ ಪ್ರೇಮ್ ಅವರನ್ನೂ ಸ್ಟಾರ್ ಕ್ಯಾಂಪೇನರ್ ಎಂದು ಭಾಗಿಯಾಗಲು ಮನವಿ ಮಾಡಿದ್ದಾರೆ ಎನ್ನಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









