ರಾಯಚೂರು : ಭಾರಿ ಮಳೆಯಿಂದಾಗಿ ಭೀಮಾ ಉಕ್ಕಿ ಹರಿಯುತ್ತಿದೆ. ಪರಿಣಾಮ ಭೀಮಾ ನದಿಯ ನೀರು ರಾಯಚೂರು (Raichur ) ತಾಲೂಕಿನ ಗ್ರಾಮದ ಬಳಿಯ ಕೃಷ್ಣ ನದಿಗೆ ಸಂಗಮವಾಗುವುದರಿಂದ 17 ಗ್ರಾಮಗಳು ಪ್ರವಾಹ ಭೀತಿ ಎದುರಿಸುತ್ತಿವೆ.
ಸನ್ನತ್ತಿ ಬ್ರಿಡ್ಜ್ ಕಂ ಬ್ಯಾರೇಜ್ ನಿಂದ ಎಲ್ಲ ಗೇಟ್ ಗಳ ಮೂಲಕ ಬೆಳಗ್ಗೆ 6 ಗಂಟೆಗೆ 3.10 ಲಕ್ಷ ಕ್ಯೂಸೆಕ್ ನೀರು ಬಿಡಲಾಗಿದೆ.
ಇತ್ತ ನಾರಾಯಣಪುರ ಜಲಾಶಯದಿಂದ ಬೆಳಗ್ಗೆ 7ಕ್ಕೆ 1.23 ಲಕ್ಷ ಕ್ಯೂಸೆಕ್ ನೀರನ್ನ ನದಿಗೆ ಹರಿಸಲಾಗುತ್ತಿದೆ.
ಇದನ್ನೂ ಓದಿ : ಮುಂದಿನ ವಾರ ರಾಜ್ಯದಲ್ಲಿ ಎರಡು ದಿನ ಮಳೆ ಸಾಧ್ಯತೆ
ಇದರಿಂದ ಸನ್ನತ್ತಿ ಬ್ರಿಡ್ಜ್ ಕಂ ಬ್ಯಾರೇಜ್ ಹಾಗೂ ನಾರಾಯಣಪುರ ಜಲಾಶಯದಿಂದ ಲಕ್ಷಾಂತರ ಕ್ಯೂಸೆಕ್ ನೀರು ಹರಿದು ಬಿಟ್ಟಿದ್ದರಿಂದ ಎರಡು ನದಿಗಳ ನೀರು ಸಂಗಮವಾಗಿ ಪ್ರವಾಹ ಭೀತಿ ಎದುರಾಗಿದೆ.
ಪ್ರವಾಹದ ಹಿನ್ನೆಲೆಯಲ್ಲಿ ನದಿ ತೀರಕ್ಕೆ ಯಾರೂ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಜೊತೆಗೆ ಪ್ರವಾಹ ಎದುರಿಸಲು ಅಗತ್ಯ ಕ್ರಮ ಕೈಗೊಂಡಿದ್ದು, ಅಗತ್ಯ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಜುಲೈ 25 – ಸೆಪ್ಟೆಂಬರ್ 30 ರ ನಡುವೆ ಕರ್ನಾಟಕದಲ್ಲಿ ಮಳೆಯಿಂದಾಗಿ 15,108 ಕೋಟಿ ನಷ್ಟ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










