ನವದೆಹಲಿ : 243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ (Bihar Election) ಮೊದಲ ಹಂತದ ಮತದಾನ ಇಂದು ಮುಂಜಾನೆಯಿಂದ ಆರಂಭವಾಗಿದೆ. ಮೊದಲ ಹಂತದಲ್ಲಿ 243 ಪೈಕಿ 71 ಸ್ಥಾನಗಳಿಗೆ ಮತದಾನ ನಡೆಯಲಿದ್ದು, 1066 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸುತ್ತಿದ್ದಾರೆ.
ಇಂದು ಮುಂಜಾನೆ ಏಳು ಗಂಟೆಗೆ ಮತದಾನ ಆರಂಭವಾಗಿದೆ. ಸದ್ಯ ಮತದಾನ ನಡೆಯುತ್ತಿರುವ 71 ಕ್ಷೇತ್ರಗಳ ಪೈಕಿ ಜೆಡಿಯು 35 ಹಾಗೂ ಬಿಜೆಪಿ 29 ಸ್ಥಾನಗಳಲ್ಲಿ ಸ್ಪರ್ಧಿಸಿವೆ. ಎಲ್ ಜೆಪಿ 35 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಆರ್ಜೆಡಿ 42 ಹಾಗೂ ಕಾಂಗ್ರೆಸ್ 20 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಆರು ಮಂದಿ ಹಾಲಿ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿ ಜಿತನ್ರಾಂ ಮಾಂಜಿಯವರ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಕೊರೊನಾ ಸಂಕಷ್ಟದ ಕಾಲಘಟ್ಟದಲ್ಲಿ ನಡೆಯುತ್ತಿರುವ ಚುನಾವಣೆ ಇದಾಗಿದ್ದು, ಚುನಾವಣಾ ಆಯೋಗ ವಿಸ್ತøತ ಸುರಕ್ಷಾ ಶಿಷ್ಟಾಚಾರಗಳನ್ನು ಪಾಲಿಸುವಂತೆ ಸೂಚನೆ ನೀಡಿದೆ. ಅದರಂತೆ ಪ್ರತಿ ಮತಗಟ್ಟೆ ಮತದಾರರ ಗರಿಷ್ಠ ಸಂಖ್ಯೆಯನ್ನು 1600ರಿಂದ 1000ಕ್ಕೆ ಇಳಿಸಲಾಗಿದೆ. 80 ವರ್ಷ ಮೀರಿದವರು ಮತ್ತು ಕೊರೋನಾ ಸೋಂಕಿತರಿಗೆ ಅಂಚೆ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಎಲ್ಲ ಇವಿಎಂಗಳನ್ನು ಸ್ಯಾನಿಟೈಸ್ ಮಾಡಲಾಗಿದ್ದು, ಥರ್ಮಲ್ ಸ್ಕ್ಯಾನರ್, ಸ್ಯಾನಿಟೈಸರ್, ಬಳಕೆ ಮತ್ತು ಕೈ ತೊಳೆಯಲು ನೀರಿನ ವ್ಯವಸ್ಥೆಯನ್ನು ಮತದಾರರಿಗೆ ಮಾಡಲಾಗಿದೆ.
ಇನ್ನು ಇಂದು ಬೆಳಿಗ್ಗೆ ಒಂದು ಕಡೆ ಮತದಾನ ಆರಂಭವಾಗಿದ್ದರೇ ಅತ್ತ ಔರಂಗಾವಾದ್ ನ ದಿಬ್ರಾದಲ್ಲಿ ಸಿಆರ್ ಪಿಎಫ್ ಸಿಬ್ಬಂದಿ ಎರಡು ಇಐಡಿ ( ಸುಧಾರಿತ ಸ್ಫೋಟಕ ಸಾಧನ)ಗಳನ್ನು ವಶಪಡಿಸಿಕೊಂಡಿದೆ. ಮತದಾನ ಆರಂಭ ಸಂದರ್ಭದಲ್ಲಿ ಲಕ್ಷ್ಮೀಸರಾಯ್ ದೇವಾಲಯಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಗಿರಿರಾಜ್ ಸಿಂಗ್, ಮತದಾನ ಪ್ರಜಾಪ್ರಭುತ್ವದ ದೊಡ್ಡ ಹಬ್ಬ. ಪ್ರತಿಯೊಬ್ಬರೂ ತಮ್ಮ ಹಕ್ಕು ಚಲಾಯಿಸಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ : ಬಿಹಾರ ಚುನಾವಣೆ : ಸಿ-ವೋಟರ್ ಸಮೀಕ್ಷೆ ಏನು ಹೇಳುತ್ತೆ?
ಎನ್ ಡಿಎ ಮೈತ್ರಿಕೂಟಕ್ಕೆ ಗೆಲುವು
ಬಿಹಾರದ ಮತದಾನಕ್ಕೂ ಮೊದಲು ನಡೆಸಿರುವ ಸಮೀಕ್ಷೆಗಳು ಎನ್ ಡಿಎ ಮೈತ್ರಿಕೂಟಕ್ಕೆ ಸರಳ ಬಹುಮತ ಸಿಗಲಿದೆ ಎಂದು ಹೇಳಿವೆ. 243 ವಿಧಾನಸಭಾ ಸ್ಥಾನಗಳ ಪೈಕಿ ಈ ಮೈತ್ರಿಕೂಟಕ್ಕೆ ಜನರು ಜೈ ಎನ್ನಲಿದ್ದು, 135-159 ಸೀಟುಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಸಮೀಕ್ಷೆ ತಿಳಿಸಿದೆ.
ಇನ್ನು 243 ವಿಧಾನಸಭಾ ಸ್ಥಾನಗಳ ಪೈಕಿ, ಆರ್ ಜೆಡಿ, ಕಾಂಗ್ರೆಸ್ ಮತ್ತು ಇತರೆ ಪಕ್ಷಗಳ ಮಹಾಮೈತ್ರಿ 77-98 ಸ್ಥಾನಗಳನ್ನು ಪಡೆಯುವ ಮೂಲಕ ಅಧಿಕಾರದಿಂದ ದೂರ ಉಳಿಯಲಿದೆ ಎಬಿಪಿ-ಸಿವೋಟರ್ ಸಮೀಕ್ಷೆ ಭವಿಷ್ಯ ನುಡಿದಿದೆ.
ಎಬಿಪಿ-ಸಿವೋಟರ್ ಸಮೀಕ್ಷೆ ಪ್ರಕಾರ, ಎನ್ ಡಿಎ ಮೈತ್ರಿಕೂಟ ಶೇ.43, ಕಾಂಗ್ರೆಸ್ ಮಹಾಮೈತ್ರಿಕೂಟ ಶೇ.35, ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ ಶೇ.4 ರಷ್ಟು, ಇತರರು ಶೇ.18ರಷ್ಟು ಮತಗಳನ್ನು ಗಳಿಸಲಿವೆ.
ಅದರಲ್ಲೂ ಈ ಚುನಾವಣೆಯಲ್ಲಿ ಬಿಜೆಪಿ 73 ರಿಂದ 81 ಸ್ಥಾನಗಳನ್ನು ಪಡೆಯುವ ಮೂಲಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದೆ ಎಬಿಪಿ-ಸಿವೋಟರ್ ಸಮೀಕ್ಷೆ ತಿಳಿಸಿದೆ.
ಇದನ್ನೂ ಓದಿ : ಇದು ಜನಪ್ರತಿನಿಧಿಗಳ ಸರ್ಕಾರವೇ ಅಲ್ಲ : ಸಿದ್ದರಾಮಯ್ಯ ವಾಗ್ದಾಳಿ
ಈ ಬಿಹಾರ ಚುನಾವಣೆಯಲ್ಲಿ ಮತ್ತೊಂದು ಪ್ರಮುಖ ಅಂಶವೆಂದರೆ, ಲೋಕ ಜನಶಕ್ತಿ ಪಕ್ಷದ ಮುಖ್ಯಸ್ಥ ರಾಮ್ವಿಲಾಸ್ ಪಾಸ್ವಾನ್ ಅವರ ಪುತ್ರ ಚಿರಾಗ್ ಪಾಸ್ವಾನ್ ಎನ್ಡಿಎಯಲ್ಲಿ ಬಂಡಾಯದ ಬಾವುಟ ಬೀಸಿರುವುದು. ನಿತೀಶ್ ಕುಮಾರ್ ವಿರುದ್ಧ ಪ್ರಚಾರದ ಚಿರಾಗ್ ಕಿಡಿಕಾರಿದ್ದು,ಇದಕ್ಕೆ ಬಿಜೆಪಿಯ ಕುಮ್ಮಕ್ಕು ಇದೆ ಎಂದೂ ಸಹ ಹೇಳಲಾಗುತ್ತಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









