ಸೂಕ್ತ ಸಂದರ್ಭದಲ್ಲಿ ಯತ್ನಾಳ್ ವಿರುದ್ಧ ಕ್ರಮ : ಸವದಿ
ರಾಯಚೂರು : “ಮುಂದಿನ ಮೂರು ವರ್ಷ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುತ್ತದೆ, ಆದರೆ, ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ನಾನು ಹೇಳುವುದಿಲ್ಲ” ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ರಾಜ್ಯ ಬಿಜೆಪಿಯಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಯತ್ನಾಳ್ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ಕಿಡಿಕಾರಿದ್ದು, ಇದೀಗ ಈ ಬಗ್ಗೆ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಪ್ರತಿಕ್ರಿಯೆ ನೀಡಿದ್ದಾರೆ.
ಕನ್ನಡ ರಾಜ್ಯೋತ್ಸವ ಹಿನ್ನೆಲೆ ರಾಯಚೂರಿನಲ್ಲಿ ಡಿಸಿಎಂ ಲಕ್ಷ್ಮಣ್ ಸವದಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತ ಸಿಎಂ ಬದಲಾವಣೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು.
ಮುಖ್ಯಮಂತ್ರಿ ಬದಲಾವಣೆ ಹೇಳಿಕೆ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪಕ್ಷದ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಬಿಜೆಪಿ ರಾಜ್ಯಾಧ್ಯಕ್ಷರು, ರಾಷ್ಟ್ರಾಧ್ಯಕ್ಷರು ಆ ಬಗ್ಗೆ ಸೂಕ್ತ ಸಂದರ್ಭದಲ್ಲಿ ಕ್ರಮಕೈಗೊಳ್ಳುತ್ತಾರೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದರು.
ಇದನ್ನೂ ಓದಿ : ಕಾಂಗ್ರೆಸ್ ಸಿಎಂ ಅಭ್ಯರ್ಥಿ ರೇಸ್ ಗೆ ಮತ್ತೊಬ್ಬ ನಾಯಕ ಎಂಟ್ರಿ..!
ಯತ್ನಾಳ್ ಹೇಳಿದ್ದು ಏನು..?
ವಿಜಯಪುರದಲ್ಲಿ ಮಾತನಾಡಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಮುಂದಿನ ಮೂರು ವರ್ಷ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುತ್ತದೆ, ಆದರೆ, ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ನಾನು ಹೇಳುವುದಿಲ್ಲ.
ಬೇರೆ ಸಚಿವರಂತೆ ಯಡಿಯೂರಪ್ಪ 3 ವರ್ಷ ಸಿಎಂ ಆಗಿರುತ್ತಾರೆ, ಸೂರ್ಯ ಚಂದ್ರರು ಇರುವ ತನಕ ಸಿಎಂ ಆಗಿರುತ್ತಾರೆ ಎಂದು ನಾನೇನೂ ಹೇಳುವುದಿಲ್ಲ. ಈ ಸರ್ಕಾರದಲ್ಲಿ ಬೆಂಗಳೂರಿಗೊಂದು ನ್ಯಾಯ, ಉತ್ತರ ಕರ್ನಾಟಕಕ್ಕೊಂದು ನ್ಯಾಯದ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಟೀಕಿಸಿದ್ದರು.
ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ದಕ್ಕೆ ಅನುದಾನ ಬಂತು..
ನಾನು ಈ ಹಿಂದೆ ಯಡಿಯೂರಪ್ಪ ಅವರನ್ನು ಹಲವಾರು ಬಾರಿ ಭೇಟಿಯಾಗಿದ್ದೆ. ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಆದರೆ, ಮಾಡಿರಲಿಲ್ಲ. ಆದರೆ, ಮೊನ್ನೆ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದರ ಫಲವಾಗಿ ಕೇವಲ 24 ಗಂಟೆಗಳಲ್ಲಿ ವಿಜಯಪುರ ಮಹಾನಗರ 125 ಕೋಟಿ ರೂ ಬಿಡುಗಡೆ ಮಾಡಿದ್ದಾರೆ ಎಂದು ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದರು.
ನಾನು ಮಾತನಾಡಿದ್ದು ಪಕ್ಷ ವಿರೋಧಿಯಲ್ಲ. ಮೊದಲು ನಾನೊಬ್ಬ ಜನಪ್ರತಿನಿಧಿ. ನಮಗೆ ದೇಶ ಮೊದಲು. ನಂತರ ಪಕ್ಷ. ನಂತರ ನಾನು ಎಂದು ಬಿಜೆಪಿ ಕಲಿಸಿಕೊಟ್ಟಿದೆ. ಇದರಲ್ಲಿ ಸ್ವಾರ್ಥವೇನಿದೆ? ಆಡಳಿತ ಪಕ್ಷದಲ್ಲಿದ್ದು ಪ್ರಶ್ನೆ ಮಾಡಬಾರದು ಎಂದು ಎಲ್ಲಿ ಹೇಳಲಾಗಿದೆ. ತಮ್ಮ ವಿರುದ್ಧ ಶಿಸ್ತುಕ್ರಮಕ್ಕೆ ಪತ್ರ ಬರೆಯುವರು ಬರೆಯಲಿ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿಕೆ ನೀಡಿದ್ದರು.
ಇದನ್ನೂ ಓದಿ : ಚಾಮುಂಡೇಶ್ವರಿಯಲ್ಲಿ ಸೋತ ಸಿದ್ದರಾಮಯ್ಯ ಯಾವ ನಾಯಿಯಾಗಿದ್ದಾರೆ? : ಹಳ್ಳಿಹಕ್ಕಿ
ಸಿಎಂ ನಮ್ಮ ಪಕ್ಷದವರಿದ್ದಾರೆಂದು ಸುಮ್ಮನಿರಲು ಸಾಧ್ಯವಿಲ್ಲ. 10 ಸಲ ಸಿಎಂ ಭೇಟಿಯಾಗಿ ಅನುದಾನ ಕೇಳಿದ್ದೆ. ಆದರೆ, ನೀಡಲಿಲ್ಲ. ಹೀಗಾಗಿ ನ್ಯಾಯಪರ ಧ್ವನಿ ಎತ್ತಿದ್ದೇನೆ. ಇದು ಪಕ್ಷದ ಶಿಸ್ತಿನ ಪ್ರಶ್ನೆಯಲ್ಲ. ನಾನು ಕೇಳಿದ್ದರಲ್ಲಿ ತಪ್ಪೇನಿದೆ ಎಂದು ಯತ್ನಾಳ್ ಪ್ರಶ್ನಿಸಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel