ADVERTISEMENT
Tuesday, March 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಭಾರತವೇನು ಕೇವಲ ಹಿಂದಿವಾಲಾಗಳ ದೇಶವೇ : ನಾರಾಯಣಗೌಡ ಗರಂ

Mahesh M Dhandu by Mahesh M Dhandu
November 1, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಭಾರತವೇನು ಕೇವಲ ಹಿಂದಿವಾಲಾಗಳ ದೇಶವೇ : ಕೇಂದ್ರದ ವಿರುದ್ಧ ನಾರಾಯಣಗೌಡ ಗರಂ

ಬೆಂಗಳೂರು : ಕೇಂದ್ರ ಸರ್ಕಾರದ ನಡವಳಿಕೆ ನೋಡಿದರೆ ದಕ್ಷಿಣ ಭಾರತೀಯರನ್ನು ಅವರು ದೇಶದ ನಾಗರಿಕರೆಂದು ಪರಿಗಣಿಸಿಯೇ ಇಲ್ಲವೆಂದು ತೋರುತ್ತದೆ. ಭಾರತವೇನು ಕೇವಲ ಹಿಂದಿವಾಲಾಗಳ ದೇಶವೇ? ದ್ರಾವಿಡ ಚಳವಳಿ ನೆನಪಿದೆಯೇ ಎಂದು ಕರವೇಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Related posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

March 3, 2026
ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

March 3, 2026

Narayana Gowda
ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವವನ್ನ ಸರಳವಾಗಿ ಆಚರಿಸಲಾಯಿತು. ಕರವೇ ಕಚೇರಿ ಮುಂಭಾಗ ಕನ್ನಡ ಧ್ವಜಾರೋಹಣ ನೆರವೇರಿಸಲಾಯಿತು. ಈ ವೇಳೆ ಮಾತನಾಡಿದ ಕರವೇಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ, ಕೇಂದ್ರ ಸರ್ಕಾರದ ನಡವಳಿಕೆ ನೋಡಿದರೆ ದಕ್ಷಿಣ ಭಾರತೀಯರನ್ನು ಅವರು ದೇಶದ ನಾಗರಿಕರೆಂದು ಪರಿಗಣಿಸಿಯೇ ಇಲ್ಲವೆಂದು ತೋರುತ್ತದೆ. ಭಾರತವೇನು ಕೇವಲ ಹಿಂದಿವಾಲಾಗಳ ದೇಶವೇ? ದ್ರಾವಿಡ ಚಳವಳಿ ನೆನಪಿದೆಯೇ? ಅಂಥ ಚಳವಳಿ ಮತ್ತೆ ಮರುಕಳಿಸಿದರೆ ಆಶ್ವರ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿಯವರಿಗೆ ಕರ್ನಾಟಕ ನೆನಪಿಲ್ಲವೇ ಎಂದು ಪ್ರಶ್ನಿಸಿದ ನಾರಾಯಣಗೌಡ, ಮೋದಿ ಯಾಕೆ ಕರ್ನಾಟಕದ ನೆರೆ ಸಂತ್ರಸ್ತ ಜಿಲ್ಲೆಗಳಿಗೆ ಭೇಟಿ ನೀಡುತ್ತಿಲ್ಲ. ಅವರ ದೃಷ್ಟಿಯಲ್ಲಿ ಉತ್ತರ ಭಾರತ ಮಾತ್ರ ಭಾರತವೇ? ದಕ್ಷಿಣ ಭಾರತವು ಭಾರತಕ್ಕೆ ಸೇರಿಲ್ಲವೇ?. ಜಿಎಸ್‍ಟಿ ಬಾಕಿ ಹಣ ಕೊಡಿ ಎಂದು ಕರ್ನಾಟಕ ಬೇಡುವ ಸ್ಥಿತಿ ತಲುಪಿದೆ. ನಾವು ಯಾರ ಹಣವನ್ನು ಕೇಳುತ್ತಿದ್ದೇವೆ. ಅದು ನಮ್ಮದೇ ಹಣ. ನಾವೇ ಕೊಟ್ಟ ತೆರಿಗೆಯ ಒಂದು ಭಾಗವನ್ನಷ್ಟೇ ಕೇಳುತ್ತಿದ್ದೇವೆ. ಕೇಂದ್ರ ಸರ್ಕಾರ ನಮ್ಮ ಹಣವನ್ನು ನಮಗೆ ಕೊಡದೆ ನಮ್ಮನ್ನು ಸಾಲಗಾರರನ್ನಾಗಿ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

ಇದನ್ನೂ ಓದಿ : ಸಿದ್ದರಾಮಯ್ಯ ಮೊದಲು `ಕೈ’ ಒಳಜಗಳ ಸರಿಪಡಿಸಿಕೊಳ್ಳಲಿ: ಬಿ.ಸಿ ಪಾಟೀಲ್ ತಿರುಗೇಟು

ಕರ್ನಾಟಕಕ್ಕೆ ನ್ಯಾಯಯುತವಾಗಿ ದಕ್ಕಬೇಕಿರುವ ಅನುದಾನಗಳನ್ನು ಕೇಳಲು, ಕರ್ನಾಟಕದ ಸಮಸ್ಯೆಗಳ ಬಗ್ಗೆ ಪ್ರಧಾನಿ ಜತೆ ಮಾತನಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಯ ಪಡುತ್ತಿದ್ದಾರೆ. ಒಬ್ಬ ಪ್ರಧಾನಿ ಜತೆ ಮಾತಾಡಲು ಒಬ್ಬ ಮುಖ್ಯಮಂತ್ರಿ ಭಯ ಪಡುವ ಸ್ಥಿತಿ ತಲುಪಿದರೆ ಏನರ್ಥ? ಇದನ್ನು ಒಕ್ಕೂಟವೆಂದು ಕರೆಯಲು ಸಾಧ್ಯವೇ? ಒಕ್ಕೂಟದ ಮೂಲತತ್ತ್ವಗಳು ಉಳಿದುಕೊಂಡಿವೆಯೇ? ಎಂದು ಪ್ರಶ್ನಿಸಿದರು.

ಇದೇ ವೇಳೆ ರಾಜ್ಯ ಬಿಜೆಪಿ ವಿರುದ್ಧವೂ ಕಿಡಿಕಾರಿದ ನಾರಾಯಣಗೌಡ, ಕನ್ನಡ ರಾಜ್ಯೋತ್ಸವವನ್ನು ಸಂಘ-ಸಂಸ್ಥೆಗಳು ಸರಳವಾಗಿ ಆಚರಿಸಬೇಕು ಎಂದು ಸರ್ಕಾರ ಹೇಳುತ್ತದೆ. ಆದರೆ ಸರ್ಕಾರ ನಡೆಸುವ ಪಕ್ಷ, ಉಪಚುನಾವಣೆಗಳಲ್ಲಿ ಹತ್ತಾರು ಸಾವಿರ ಜನರನ್ನು ಸೇರಿಸಿ, ಸಿನಿಮಾ ಕಲಾವಿದರನ್ನು ಕರೆಯಿಸಿ ರ್ಯಾಲಿಗಳನ್ನು ನಡೆಸುತ್ತದೆ. ನೀವು ಹೇಳುವ ನಿಯಮಗಳು ನಿಮಗೆ ಅನ್ವಯಿಸುವುದಿಲ್ಲವೇ ಎಂದು ಗುಡುಗಿದರು.

Narayana Gowda

ಕೊರೊನಾ ಮತ್ತು ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹದ ಹಿನ್ನೆಲೆಯಲ್ಲಿ ಈ ವರ್ಷ ಸರಳವಾಗಿ ರಾಜ್ಯೋತ್ಸವ ಆಚರಿಸಲು ನಾವು ಮೊದಲೇ ತೀರ್ಮಾನಿಸಿದ್ದೆವು. ಆದರೆ ರಾಜಕೀಯ ಪಕ್ಷಗಳು ಚುನಾವಣೆ ಹೆಸರಲ್ಲಿ ತಾವೇ ಮಾಡಿದ ನಿಯಮಗಳನ್ನು ತಾವೇ ಮುರಿಯುತ್ತಿವೆ. ರಾಜ್ಯೋತ್ಸವವೆಂದರೆ ಕೇವಲ ಸಂಭ್ರಮ, ಸಡಗರವಲ್ಲ. ಅಖಂಡ ಕರ್ನಾಟಕದ ಕನಸು ಕಂಡ ನಮ್ಮ ಹಿರಿಯರ ಶ್ರೇಯೋಭಿಲಾಷೆಯನ್ನು ಕಾಪಾಡುವ ಹೊಣೆಗಾರಿಕೆ ಮತ್ತು ಸವಾಲು. ನಾವು ನಮ್ಮ ಹಕ್ಕುಗಳಿಗೆ ಯಾರನ್ನು ಬೇಕಾದರೂ ಪ್ರಶ್ನಿಸುವ ಅವಕಾಶವನ್ನು ಸಂವಿಧಾನ ನಮಗೆ ನೀಡಿದೆ. ಕನ್ನಡಿಗರ ಹಕ್ಕೊತ್ತಾಯಗಳಿಗೆ ಕೇಂದ್ರ, ರಾಜ್ಯ ಸರ್ಕಾರಗಳನ್ನು ಪ್ರಶ್ನಿಸುತ್ತಿರೋಣ, ಹೋರಾಟ ನಡೆಸೋಣ ಎಂದು ಕರೆಕೊಟ್ಟರು.

ಇದೇ ವೇಳೆ ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡಲು ರಾಷ್ಟ್ರೀಯ ಪಕ್ಷಗಳು ವಿಫಲವಾಗಿವೆ ಎಂದ ನಾರಾಯಣಗೌಡ, ನಾವು ಈಗ ಪ್ರಾದೇಶಿಕ ಚಿಂತನೆಗಳನ್ನು ಬಿತ್ತಬೇಕಿದೆ. ಕೇಂದ್ರ ಸರ್ಕಾರ ಏನೇ ಸಮಸ್ಯೆ ಬಂದರೂ ಒಮ್ಮೆ ಚೀನಾ ಕಡೆ ಮತ್ತೊಮ್ಮೆ ಪಾಕಿಸ್ತಾನದ ಕಡೆ ತೋರಿಸಿ ನುಣುಚಿಕೊಳ್ಳುತ್ತದೆ. ಈ ಆಟ ಹೆಚ್ಚು ದಿನ ನಡೆಯದು. ಕನ್ನಡಿಗರು ಜಾಗೃತರಾಗಿದ್ದಾರೆ ಎಂದು ಹೇಳಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Kannada RajyothsavaNarayana GowdaNarendra modi
ShareTweetSendShare
Join us on:

Related Posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

by Shwetha
March 3, 2026
0

2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್–ಬಿಜೆಪಿ ಮೈತ್ರಿ ವಿಚಾರವಾಗಿ ರಾಜಕೀಯ ಸಂದೇಶಗಳು ಹೊರಬರುತ್ತಿರುವ ಹಿನ್ನೆಲೆ, ಬಿಜೆಪಿಯ ಜಿಲ್ಲಾ ಘಟಕದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ ಗೊಂದಲ ಹೆಚ್ಚಾಗಿದೆ...

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

by Shwetha
March 3, 2026
0

ರಾಜ್ಯ ರಾಜಕೀಯದಲ್ಲಿ ಬದಲಾದ ಸಮೀಕರಣಗಳ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ತಮ್ಮ ರಾಜಕೀಯ ಬಲವನ್ನು ಸಂಘಟಿಸಲು ಮುಂದಾಗಿರುವಂತೆ ಕಾಣುತ್ತಿದೆ. ತಮ್ಮ ತಂದೆ ಮತ್ತು ಹಿರಿಯ...

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

by Shwetha
March 3, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆ ಭಾರೀ ತಲ್ಲಣಕ್ಕೊಳಗಾಗಿದೆ. ಯುದ್ಧ ಭೀತಿ ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದ್ದು, ಮಾರುಕಟ್ಟೆಯಲ್ಲಿ ಮಾರಾಟದ...

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

by Shwetha
March 3, 2026
0

ಬೆಂಗಳೂರು: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಜೈನ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಗೆ ಕರ್ನಾಟಕ ಹೈಕೋರ್ಟ್ ಭಾರಿ ಆಘಾತ ನೀಡಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ...

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

by Shwetha
March 3, 2026
0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಮಾತುಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ವಿಧಾನಸೌಧದ ಪಡಸಾಲೆಯಲ್ಲಿ ಕೇಳಿಬರುತ್ತಿದ್ದ ಮಂತ್ರಿಗಿರಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram