ಈ ಬಾರಿ ಆರ್ ಸಿಬಿ ಕಪ್ ಗೆಲ್ಲುತ್ತೆ ಅಂತಾ ಭಾವಿಸಬೇಡಿ
ಅಬುಧಾಬಿ : ಸತತ ನಾಲ್ಕು ಸೋಲುಗಳ ಮಧ್ಯೆಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊನೆಗೂ ಪ್ಲೇ ಆಪ್ ಹಂತ ತಲುಪಿದೆ.
ಆಡಿದ 14 ಪಂದ್ಯದಲ್ಲಿ 7 ಪಂದ್ಯಗಳನ್ನು ಗೆದ್ದು ನೆಟ್ ರನ್ ರೇಟ್ ಆಧಾರದ ಮೇಲೆ ಆರ್ ಸಿಬಿ ಪ್ಲೇ ಆಪ್ ಹಂತ ತಲುಪಿಸಿದ್ದು, ಅಭಿಮಾನಿಗಳು ನಿಟ್ಟುಸಿರು ಬಿಡುವಂತೆ ಆಗಿದೆ.
ಈ ಮಧ್ಯೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಐಪಿಎಲ್ ಗೆಲ್ಲುತ್ತದೆ ಎಂದು ಭಾವಿಸಬೇಡಿ ಎಂದು ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಮೈಕಲ್ ವಾನ್ ಹೇಳಿದ್ದಾರೆ.
ಕಾರ್ಯಕ್ರಮ ಒಂದರಲ್ಲಿ ಮಾತನಾಡಿರುವ ಮೈಕಲ್ ವಾನ್, ಆರಂಭದಿಂದಲೂ ನಾನು ಹೇಳುತ್ತಿದ್ದೇನೆ. ಬೆಂಗಳೂರು ತಂಡ ಈ ಬಾರಿ ಕಪ್ ಗೆಲ್ಲುವುದು ಅನುಮಾನ.
ಇದನ್ನೂ ಓದಿ : ಶೇನ್ ವಾಟ್ಸನ್ ಇನ್ನು ಐಪಿಎಲ್ ನಿಂದ ದೂರ ಬಲೂದೂರ..!
ಯಾಕೆಂದ್ರೆ ಆರ್ ಸಿಬಿ ಕಪ್ ಗೆಲ್ಲುವ ರೀತಿ ಪ್ರದರ್ಶನ ನೀಡಿಲ್ಲ ಎಂದಿದ್ದಾರೆ. ಜೊತೆಗೆ ಇದು 2020 ಈ ವರ್ಷ ಏನೂ ಬೇಕಾದರೂ ಆಹಬಹುದು.
ವಿರಾಟ್ ಕೊಹ್ಲಿಯವರು ಎಡಗೈನಲ್ಲಿ ಬ್ಯಾಟ್ ಮಾಡಿ ತಂಡವನ್ನು ಗೆಲ್ಲಿಸಬಹುದು ಆದರೆ ಅದು ಕಷ್ಟ ಎಂದು ವ್ಯಂಗ್ಯವಾಡಿದ್ದಾರೆ ಮೈಕಲ್ ವಾನ್.
ಇನ್ನು ಆರ್ ಸಿಬಿಯಲ್ಲಿ ಮೂರು ನಾಕೌಟ್ ಪಂದ್ಯಗಳಲ್ಲಿ ಒತ್ತಡದ ನಡುವೆಯೂ ಉತ್ತಮವಾಗಿ ಆಡುವ ಆಟಗಾರರು ಇದ್ದಾರೆ. ಆರ್‍ಸಿಬಿ ಬ್ಯಾಟಿಂಗ್ ಲೈನಪ್ ಬಲಿಷ್ಠವಾಗಿದೆ.
ಇದರ ಜೊತೆಗೆ ಒತ್ತಡದ ಜೊತೆಗೆ ಆಟವಾಡುವ ಅನುಭವಿ ಆಟಗಾರರು ಇದ್ದಾರೆ. ಬೆಂಗಳೂರು ಪರವಾಗಿ ಮಾತನಾಡಬೇಕು ಎಂದರೆ, ಅವರು ತಾಳ್ಮೆಯ ಜೊತೆಗೆ ಅಕ್ರಮಣಕಾರಿ ಆಟವನ್ನು ಆಡಬೇಕು.
ಐಪಿಎಲ್ 2020- ಸನ್ ರೈಸರ್ಸ್ ಭವಿಷ್ಯ ಬರೆಯಲಿರುವ ಮುಂಬೈ ಇಂಡಿಯನ್ಸ್..!
ಆಗ ಮಾತ್ರ ಆರ್ ಸಿಬಿ ಕಪ್ ಗೆಲ್ಲುವ ಸಾಧ್ಯತೆಗಳಿವೆ ಎಂದಿದ್ದಾರೆ ವಾನ್.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channe










