ಈ ಬಾರಿ ನನಗೆ ಮಂತ್ರಿಸ್ಥಾನ ಖಚಿತ : ಆರ್.ಶಂಕರ್
ರಾಣೆಬೆನ್ನೂರು : ಶೀಘ್ರದಲ್ಲೇ ಮಂತ್ರಿಮಂಡಲ ವಿಸ್ತರಣೆ ಆಗಲಿದ್ದು, ಈ ಬಾರಿ ಮಂತ್ರಿ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ವಿಧಾನಪರಿಷತ್ ಸದಸ್ಯ ಆರ್.ಶಂಕರ್ ಹೇಳಿದ್ದಾರೆ.
ರಾಣೆಬೆನ್ನೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೈ ಎಲೆಕ್ಷನ್ ಚುನಾವಣೆ ಫಲಿತಾಂಶದ ಬಳಿಕ ಸಚಿವ ಸಂಪುಟ ವಿಸ್ತರಣೆ ಆಗಲಿದೆ.
ಈ ಬಾರಿ ನನಗೆ ಮಂತ್ರಿ ಸ್ಥಾನ ಸಿಗುವ ವಿಶ್ವಾಸವಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿ ಆದಾಗಲೆಲ್ಲ ಈ ಬಾರಿ ಮಂತ್ರಿ ಆಗ್ತೀರಿ ಎಂದು ನನಗೆ ಹೇಳಿ ಕಳಿಸಿದ್ದಾರೆ. ಹೀಗಾಗಿ ಆ ಭರವಸೆ ಈ ಸಾರಿ ಈಡೇರಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿದರು.
ಇದೇ ವೇಳೆ ಉಪಚುನಾವಣೆ ಫಲಿತಾಂಶದ ಬಳಿಕ ಸಿಎಂ ಬದಲಾಗುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಆರ್.ಶಂಕರ್, ಬದಲಾವಣೆ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಸತ್ಯಕ್ಕೆ ದೂರವಾದದ್ದು, ಯಡಿಯೂರಪ್ಪನವರನ್ನ ಶಾಸಕರೆಲ್ಲ ಸೇರಿ ಸಿಎಂ ಮಾಡಿದ್ದೇವೆ. ಅದು ಶಾಸಕರ ತೀರ್ಮಾನ, ಸಿದ್ದರಾಮಯ್ಯನವರ ತೀರ್ಮಾನ ಅಲ್ಲ ಎಂದು ಟಾಂಗ್ ನೀಡಿದರು.
ಸಿದ್ದು ಭ್ರಮೆಯಲ್ಲಿದ್ದರೆ, ಸಿಎಂ ಬಿಎಸ್‍ವೈ ಬದಲಾವಣೆ ಇಲ್ಲ: ರಮೇಶ್ ಜಾರಕಿಹೊಳಿ
ಇನ್ನು ಮುಖ್ಯಮಂತ್ರಿ ಯಾವುದೇ ಕಾರಣಕ್ಕೂ ಬದಲಾವಣೆ ಆಗೋದಿಲ್ಲ. ಯಡಿಯೂರಪ್ಪನವರು ತಮ್ಮ ಅಧಿಕಾರದ ಅವಧಿ ಪೂರ್ಣಗೊಳಿಸಲಿದ್ದಾರೆ. ಮುಂದಿನ ಚುನಾವಣೆ ಸಹ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ಹೈಕಮಾಂಡ್ ಸಿಎಂ ಬದಲಾವಣೆ ಮಾಡುವ ಚಿಂತನೆಯಲ್ಲಿದೆ.
ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯುವುದು ಅವರಿಗೆ ಇಷ್ಟ ಇಲ್ಲ. ನನಗೆ ತುಂಬು ನಂಬಿಕೆ ಇದೆ ಯಡಿಯೂರಪ್ಪ ಬದಲಾಗುತ್ತಾರೆ ಎಂಬುದು ಖಚಿತ. ದೆಹಲಿಯಿಂದ ನನಗೆ ಬಂದಿರುವ ಮಾಹಿತಿ ಆಧಾರದ ಮೇಲೆ ಈ ಮಾಹಿತಿ ನೀಡುತ್ತಿದ್ದೇನೆ.
ಮುಖ್ಯಮಂತ್ರಿಗಳ ಬದಲಾವಣೆಗೆ ನಾನು ಅವರ ಮೇಲೆ ಭ್ರಷ್ಟಾಚಾರದ ಆರೋಪವೂ ಕೂಡ ಒಂದು ಕಾರಣ ಇರಬಹುದು. ಹಲವು ದಿನದಿಂದ ಸಿಎಂ ಬದಲಾವಣೆ ಮಾಡುವ ಚಿಂತನೆಯಲ್ಲಿ ಬಿಜೆಪಿ ಇದೆ. ಹಾಗಾಗಿ ಉಪಚುನಾವಣೆ ಫಲಿತಾಂಶದ ನಂತರ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೇಳಗಿಳಿಯುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದರು.
ಬಿಜೆಪಿಯಲ್ಲಿ ನೈತಿಕತೆ ಅನ್ನೋದೇ ಇಲ್ಲ : ಪ್ರಮೋದ್ ಮುತಾಲಿಕ್
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










