ರಾಜ್ಯದಲ್ಲಿ ಲಿಂಗಾಯತರಿಗೆ ಶೇ.16ರಷ್ಟು ಮೀಸಲಾತಿ ನೀಡಿ : ಎಂ.ಬಿ.ಪಾಟೀಲ್
ಬೆಂಗಳೂರು : ಮರಾಠಿ ಅಭಿವೃದ್ಧಿ ಪ್ರಾಧಿಕಾರ ರಚಿಸಿರುವ ರಾಜ್ಯ ಸರ್ಕಾರದ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.
ಇದರ ಬೆನ್ನಲ್ಲೇ ಕರ್ನಾಟಕದಲ್ಲಿ ಲಿಂಗಾಯತರಿಗೆ ಶೇ.16ರಷ್ಟು ಮೀಸಲಾತಿ ನೀಡುವಂತೆ ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಎಂ.ಬಿ.ಪಾಟೀಲ್, ಕರ್ನಾಟಕದಲ್ಲಿ ಒಟ್ಟು ಜನಸಂಖ್ಯೆಯ ಶೇ.16-18 ರಷ್ಟು ಲಿಂಗಾಯತರು ಇದ್ದು, ಇವರಿಗೆ ಶಿಕ್ಷಣ, ಉದ್ಯೋಗ ಸೇರಿದಂತೆ ಇತರೆ ಸೌಲಭ್ಯಗಳಲ್ಲಿ ಮೀಸಲಾತಿ ಕಲ್ಪಿಸಬೇಕೆಂಬುದು ಬಹು ದಿನಗಳ ಬೇಡಿಕೆಯಾಗಿದೆ.
ರಾಜ್ಯದ 6.5 ಕೋಟಿ ಜನಸಂಖ್ಯೆಯ ಪೈಕಿ ಲಿಂಗಾಯತರ ಜನಸಂಖ್ಯೆ ಒಂದು ಕೋಟಿಗಿಂತ ಹೆಚ್ಚಿದೆ.
ಮರಾಠ ಪ್ರಾಧಿಕಾರ ರಚನೆ | ಸಮಾಜ ಒಡೆಯೋ ಕೆಲಸ ಯಾಕೆ.?
ಇಷ್ಟು ದೊಡ್ಡ ಜನಸಂಖ್ಯೆಗೆ ಸದ್ಯ ಸಿಗುತ್ತಿರುವ ಮೀಸಲಾತಿ ಸೌಲಭ್ಯಗಳಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ.
ಆದ್ದರಿಂದ ನೆರೆಯ ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಕೂಡ ಲಿಂಗಾಯತರಿಗೆ ಶೇ.16-18ರಷ್ಟು ಮೀಸಲಾತಿಯನ್ನು ಶಿಕ್ಷಣ, ಉದ್ಯೋಗ, ಸ್ಕಾಲರ್ ಶಿಪ್ ಸೇರಿದಂತೆ ಎಲ್ಲ ಸೌಲಭ್ಯಗಳಲ್ಲಿ ನೀಡುವ ಮೂಲಕ ಲಿಂಗಾಯತರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಕೋರುತ್ತೇನೆ.
ಕೆಲವರ ಬೇಡಿಕೆಯಂತೆ ಲಿಂಗಾಯತರಿಗೆ ಅಭಿವೃದ್ಧಿ ನಿಗಮ ಸ್ಥಾಪಿಸಿ, 100-200ಕೋಟಿ ಅನುದಾನ ಒದಗಿಸಿದರೆ, ಹೆಚ್ಚಿನ ಪ್ರಯೋಜನವಾಗುವದಿಲ್ಲ.
ಈ ಅಭಿವೃದ್ಧಿ ಸ್ಥಾಪನೆ ಎಂಬುದು ಕೇವಲ ಕಣ್ಣೊರೆಸುವ ತಂತ್ರವಾಗುತ್ತದೆ. ನಿಜವಾಗಿ ಲಿಂಗಾಯತರ ಆರ್ಥಿಕ, ಸಾಮಾಜಿಕ ಪ್ರಗತಿ ಸಾಧಿಸಬೇಕಾದರೆ, ರಾಜ್ಯ ಸರ್ಕಾರ ಶೇ.16-18ರಷ್ಟು ಮೀಸಲಾತಿಯನ್ನು ಕಲ್ಪಿಸಬೇಕೆಂದು ವಿನಂತಿಸಿಕೊಂಡಿದ್ದಾರೆ.
ಚುನಾವಣೆಯಲ್ಲಿ ಸೋತವರಿಗೆ ಮಂತ್ರಿಸ್ಥಾನ ಯಾಕೆ : ರೇಣುಕಾಚಾರ್ಯ
ಇನ್ನು ನಿನ್ನೆ ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ, ಕರ್ನಾಟಕದಲ್ಲಿ ಲಿಂಗಾಯತರಿಗೆ ಶೇ.16 ರಷ್ಟು ಮೀಸಲಾತಿ ಒದಗಿಸುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಪತ್ರ ಬರೆದಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









