ಸಂಪುಟ ಸರ್ಕಸ್ ನಲ್ಲಿ ರಾಜ್ಯದ ಆಡಳಿತ ದಿಕ್ಕೆಟ್ಟಿದೆ : ಸಿದ್ದರಾಮಯ್ಯ
ಬೆಂಗಳೂರು : ಸಂಪುಟ ಸರ್ಜರಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಫುಲ್ ಬ್ಯುಸಿ ಆಗಿದೆ. ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೆಹಲಿ ಯಾತ್ರೆಕೂಡ ಮುಗಿಸಿದ್ದಾರೆ. ಈ ಮಧ್ಯೆ ಇದೇ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ, ಸರ್ಕಾರ ವಿರುದ್ಧ ಟ್ವಿಟ್ಟರ್ ನಲ್ಲಿ ಕಿಡಿಕಾರಿದ್ದಾರೆ.
ಸಂಪುಟ ವಿಸ್ತರಣೆಯೋ, ಪುನಾರಚನೆಯೋ, ಮುಖ್ಯಮಂತ್ರಿ ಬದಲಾವಣೆಯೋ -ಇವೆಲ್ಲ ನಿಮ್ಮ ಪಕ್ಷದ ಹಣೆಬರಹ.
ಈ ಸರ್ಕಸ್ ನಲ್ಲಿ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದೆ. ಶೀಘ್ರವಾಗಿ ಏನಾದರೂ ನಿರ್ಧಾರ ಕೈಗೊಂಡು ಈಗಿನ ಬಿಕ್ಕಟ್ಟು ಕೊನೆಗೊಳಿಸಿ, ಆಡಳಿತದ ಕಡೆ ಗಮನಕೊಟ್ಟು ರಾಜ್ಯವನ್ನು ಉಳಿಸಿ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ಆಡಳಿತ ಕ್ಕಿಂತ ‘ಸಂಪುಟ’ ಸರ್ಕಸ್ ಮುಖ್ಯನಾ : ಸರ್ಕಾರಕ್ಕೆ ಎಸ್ ಆರ್ ಪಾಟೀಲ್ ಪ್ರಶ್ನೆ
ಮತ್ತೊಂದು ಟ್ವೀಟ್ ನಲ್ಲಿ ಹಿಂದೆಲ್ಲ ಬಿಜೆಪಿ ನಾಯಕರು, ಹೈಕಮಾಂಡ್ ಸಂಸ್ಕøತಿ ಮೂಲನಿವಾಸಿಗಳು-ವಲಸೆಗಾರರು ಕುಟುಂಬ ರಾಜಕಾರಣ ಎಂಬೀತ್ಯಾದಿ ಪದಗಳನ್ನು ಜೋಡಿಸಿ ಹಗಲು ರಾತ್ರಿ ನಮ್ಮ ವಿರುದ್ಧ ಟೀಕೆ ಮಾಡುತ್ತಿದ್ದರು.
ಈಗ ಅದೇ ಆರೋಪಗಳನ್ನು ಪರಸ್ಪರ ಮಾಡ್ಕೊಂಡು ಬತ್ತಲಾಗುತ್ತಿದ್ದಾರೆ ಎಂದು ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಕುಟುಕಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










