ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರಿಗೆ ಜನ್ಮದಿನದ ಸಂಭ್ರಮ
ಮಂಗಳೂರು : ಪುಣ್ಯ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು, ಪದ್ಮ ವಿಭೂಷಣ, ಪರಮ ಪೂಜ್ಯ ಶ್ರೀ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಇಂದು 72ನೇ ವರ್ಷದ ಜನ್ಮದಿನದ ಸಂಭ್ರಮ.
ಈ ಹಿನ್ನೆಲೆ ರಾಜ್ಯದ ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಪೂಜ್ಯ ಖಾವಂದರಿಗೆ ಶುಭಾಶಯಗಳನ್ನು ಕೋರುತ್ತಿದ್ದಾರೆ.
ಆತ್ಮನಿರ್ಭರ್ ಭಾರತ ನಮ್ಮ ಅವಶ್ಯಕತೆಗಳಿಗೆ ಇತರ ದೇಶಗಳೆಡೆ ನೋಡಬೇಕಾಗಿಲ್ಲ – ಎಐಎಸ್ಎನ್ಎಂಎ
ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಟ್ವಿಟ್ಟರ್ ನಲ್ಲಿ ಧರ್ಮಾಧಿಕಾರಿಗೆ ಶುಭಾಶಯ ತಿಳಿಸಿದ್ದು, ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರ ಜನ್ಮದಿನದಂದು ಅವರಿಗೆ ಭಕ್ತಿಪೂರ್ವಕ ಶುಭಕಾಮನೆಗಳು.
ಶ್ರೀ ಮಂಜುನಾಥ ಸ್ವಾಮಿಯು ತಮಗೆ ಉತ್ತಮ ಆರೋಗ್ಯವನ್ನು, ಶಿಕ್ಷಣ, ಸ್ತ್ರೀಶಕ್ತಿ, ಗ್ರಾಮೀಣಾಭಿವೃದ್ಧಿ ಮೊದಲಾದ ಹಲವಾರು ಕ್ಷೇತ್ರಗಳಲ್ಲಿ ನಿಮ್ಮ ಸೇವಾಕೈಂಕರ್ಯ ಇನ್ನೂ ದೀರ್ಘಕಾಲ ಯಶಸ್ವಿಯಾಗಿ ಮುಂದುವರಿಯುವಂತೆ ಹರಸಲಿ ಎಂದು ಬರೆದುಕೊಂಡಿದ್ದಾರೆ.
ಇನ್ನು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪುಣ್ಯ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು, ಪದ್ಮ ವಿಭೂಷಣ ಶ್ರೀ ವೀರೇಂದ್ರ ಹೆಗ್ಗಡೆ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









