ಭಾರತದ ಸುಭದ್ರ ಅಡಿಪಾಯ ನಮ್ಮ ಸಂವಿಧಾನ : ಬಿ.ಎಸ್. ಯಡಿಯೂರಪ್ಪ
ಬೆಂಗಳೂರು : ಇಂದು ಸಂವಿಧಾನ ದಿನ ಹಿನ್ನೆಲೆ, ನಾಡಿನ ಸಮಸ್ತ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಭಾಶಯಗಳನ್ನು ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದ ಸುಭದ್ರ ಅಡಿಪಾಯ ನಮ್ಮ ಸಂವಿಧಾನ. 1949ರ ನವೆಂಬರ್ 26ರಂದು ನಮ್ಮ ಸಂವಿಧಾನವನ್ನು ಅಳವಡಿಸಿಕೊಳ್ಳಲಾಯಿತು.
ಸಂವಿಧಾನ ಕರಡು ಸಮಿತಿ ಅಧ್ಯಕ್ಷರಾದ ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನೆಗೆ ಕೊಡುಗೆ ನೀಡಿದ ಎಲ್ಲ ಮಹನೀಯರಿಗೆ ವಂದಿಸುತ್ತಾ, ನಾಡಿನ ಸಮಸ್ತ ಜನತೆಗೆ ಸಂವಿಧಾನ ದಿವಸದ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.
ಇನ್ನೂ ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣರವರು ಮಳೆಯ ನಡುವೆ ಬೆಳಗ್ಗೆ ನಗರದ ಯಶವಂತಪುರ ವೃತ್ತದಲ್ಲಿರುವ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿದರು.
ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿಗೆ ಬದ್ಧ: ಸಿಎಂ ಬಿ.ಎಸ್ ಯಡಿಯೂರಪ್ಪ ಭರವಸೆ
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಂಬೇಡ್ಕರ್ ಅವರು ಮಹಾಜ್ಞಾನಿಯಾಗಿದ್ದು, ಅವರ ದೂರದೃಷ್ಟಿಯ ಫಲವಾಗಿ ಜಗತ್ತಿನ ಸರ್ವಶ್ರೇಷ್ಠ ಸಂವಿಧಾನ ನಮ್ಮ ಮುಂದಿದೆ.
ಇಂತಹ ಸಂವಿಧಾನ ರಚನೆಯು ಬಾಬಾ ಸಾಹೇಬರ ನೇತೃತ್ವದಲ್ಲಿ ನಡೆದಿದೆ. ಈ ಕಾರಣಕ್ಕಾಗಿ ಇಡೀ ಭಾರತ ಅವರನ್ನು ಇಂದು ಸ್ಮರಿಸುತ್ತಿದೆ” ಎಂದರು. ಇಂದು ನಡ್ಡಾ-ಜಾರಕಿಹೊಳಿ ಭೇಟಿ; ಸಂಪುಟ ವಿಸ್ತರಣೆಯೋ, ಮಹಾ ಆಪರೇಶನ್ ಕಮಲ ಪ್ಲಾನ್..?
ಇದಲ್ಲದೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸುರೇಶ್ ಕುಮಾರ್ ಸೇರಿದಂತೆ ರಾಜಕೀಯ ಗಣ್ಯರು ಟ್ಟಿಟ್ಟರ್ ನಲ್ಲಿ ಸಂವಿಧಾನ ದಿನದ ಶುಭಕೋರಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









