ರಸ್ತೆ ಅಪಘಾತ | ಮದುವೆ ತೆರಳಿದ್ದ 6 ಮಂದಿ ಮಸಣಕ್ಕೆ
ಅಸ್ಸಾಂ : ನಿಂತಿದ್ದ ಲಾರಿಗೆ ಬೊಲೆರೋ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿರುವ ಘಟನೆ ಅಸ್ಸಾಂ ದಿಬ್ರುಗಢ್ ನ ಎನ್ ಎಚ್ 37ರಲ್ಲಿ ನಡೆದಿದೆ. .
ಮದುವೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೊಲೆರೊ ಹೆದ್ದಾರಿಯಲ್ಲಿ ನಿಂತ ಲಾರಿಗೆ ಡಿಕ್ಕಿ ಹೊಡೆದಿದೆ. ಪ್ರತಿ 100 ಸೆಕೆಂಡ್ ಗೆ 20 ವರ್ಷದೊಳಗಿನ ಒಬ್ಬರಿಗೆಹೆ ಚ್ ಐವಿ
ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಆರು ಜನ ಸಾವನ್ನಪ್ಪಿದ್ದು, ಕೆಲವರಿಗೆ ಗಾಯಗಳಾಗಿವೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಬಂದಿದ್ದು, ರಕ್ಷಣಾ ಕಾರ್ಯ ಕೈಗೊಂಡು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬಳಿಕ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಈ ಘಟನೆ ಕುರಿತು ಹೆದ್ದಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









