ಚಿಕ್ಕಬಳ್ಳಾಪುರದಲ್ಲಿ ಭಾರಿ ರಸ್ತೆ ಅಪಘಾತ : ನಾಲ್ಕು ಮಂದಿ ಸಾವು
ಚಿಕ್ಕಬಳ್ಳಾಪುರ : ಕಂಟೈನರ್ ಲಾರಿಯೊಂದು ಹೆದ್ದಾರಿ ಬದಿ ನಿಂತಿದ್ದ ಎರಡು ಕಾರು, ಒಂದು ಬೈಕ್‍ಗೆ ಡಿಕ್ಕಿ ಹೊಡೆದು ಹೊಟೇಲ್‍ಗೆ ನುಗ್ಗಿದ ಪರಿಣಾಮ ನಾಲ್ಕು ಜನರು ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಹೊರವಲಯದ ಚದುಲಪುರ ಕ್ರಾಸ್ ನಲ್ಲಿ ನಡೆದಿದೆ.
ಈ ಭೀಕರ ಅಪಘಾತದಲ್ಲಿ ಸ್ವಿಫ್ಟ್ ಕಾರಿನಲ್ಲಿದ್ದ ಗವಿಗಾನಹಳ್ಳಿ ನಿವಾಸಿಗಳಾದ 44 ವರ್ಷದ ವಕೀಲ ಯಮುನಾಚಾರ್, ಚಿಕ್ಕಬಳ್ಳಾಪುರ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್) ಗುಮಾಸ್ತ ಎಚ್.ವಿ.ವೆಂಕಟೇಶ್,
ಟಾಟಾ ನೆಕ್ಸಾನ್ ಕಾರಿನಲ್ಲಿದ್ದ ಬೆಂಗಳೂರಿನ ಬಾಣಸವಾಡಿ ನಿವಾಸಿ 47 ವರ್ಷದ ಕಲಾಂಜಿಯಂ, ದೊಡ್ಡಬಳ್ಳಾಪುರ ತಾಲೂಕಿನ ಲಿಂಗಪುರದ ನಿವಾಸಿ 25 ವರ್ಷದ ನಿತೇಶ್ ಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರಸ್ತೆ ಅಪಘಾತ | ಮದುವೆ ತೆರಳಿದ್ದ 6 ಮಂದಿ ಮಸಣಕ್ಕೆ
ಇನ್ನು ಘಟನೆಯಲ್ಲಿ 6 ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಕೈಕೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









