ಭಾರತ್ ಬಂದ್ | ಮಸೂದೆಯಿಂದ ರೈತರಿಗೆ ಅನುಕೂಲ ಎಂದ ಸಿಎಂ
ಬೆಂಗಳೂರು : ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈರ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ. ಈ ಹಿನ್ನೆಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿ, ವಿರೋಧ ಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ.
ಭಾರತ್ ಬಂದ್ ಹಿನ್ನೆಲೆ ಇಂದು ಸಂಪೂರ್ಣ ಭಾರತ್ ಬಂದ್ ಆಗಿದ್ದು ನೂತನ ಕಾಯ್ದೆಗಳು ವಿರೋಧಿಸಿ ದೇಶದ್ಯಾಂತ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಅಲ್ಲದೇ ಕಾಯ್ದೆ ವಾಪಸ್ ಪಡೆಯುವಂತೆ ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಯಡಿಯೂರಪ್ಪ, ಕೃಷಿ ಕ್ಷೇತ್ರದಲ್ಲಿ ಸುಧಾರಣೆ ತರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಕೃಷಿ ಮಸೂದೆಗಳನ್ನು ಜಾರಿಗೆ ತಂದಿದೆ. ಭಾರತ್ ಬಂದ್ | ರಾಜಧಾನಿ ಬೆಂಗಳೂರಲ್ಲಿ ನೀರಸ, ಕೆಲ ಜಿಲ್ಲೆಗಳಿಗೆ ತಟ್ಟಿದ ಬಂದ್ ಬಿಸಿ..!
ಕೃಷಿ ಉತ್ಪನ್ನಗಳನ್ನು ಸರ್ಕಾರ ಖರೀದಿಸುವ ಪ್ರಕ್ರಿಯೆ, ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಖಚಿತವಾಗಿ ಮುಂದುವರಿಯಲಿದೆ. ಜೊತೆಗೆ ರೈತರಿಗೆ ಹೆಚ್ಚಿನ ಅವಕಾಶ, ಆಯ್ಕೆ ಮತ್ತು ಆದಾಯ ಹೆಚ್ಚಿಸಲು ನೂತನ ಕಾಯ್ದೆ ನೆರವಾಗಲಿದೆ.
ಇನ್ನೊಂದು ಟ್ವೀಟ್ ಮಾಡಿ, ರಾಜಕೀಯ ಅಸ್ತಿತ್ವಕ್ಕಾಗಿ ಕೇಂದ್ರ ಸರ್ಕಾರದ ಕೃಷಿ ಸುಧಾರಣೆಗಳನ್ನು ವಿರೋಧಿಸುತ್ತಿರುವ ಪ್ರತಿಪಕ್ಷಗಳು ಹಿಂದೆ ಅದರ ಪರವಾಗಿದ್ದವು.
ಈಗ ಮಸೂದೆ ವಿರುದ್ಧ ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ರೈತರಿಗೆ ಆಗುವ ಅನುಕೂಲತೆಗಳನ್ನು ತಪ್ಪಿಸಲು ನಡೆಸುತ್ತಿರುವ ವಿರೋಧವನ್ನು ಒಪ್ಪಲಾಗದು. ಇದರ ವಿರುದ್ಧ ಬಿಜೆಪಿ ಜನಜಾಗೃತಿ ನಡೆಸಲಿದೆ ಎಂದು ತಿಳಿಸಿದ್ದಾರೆ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









