ಕೋಡಿಹಳ್ಳಿ ಚಂದ್ರಶೇಖರ್ ಹೇಳಿಕೆ ಖಂಡನೀಯ : ಹೆಚ್ ಡಿಕೆ ಪರ ಸಿಎಂ ಬ್ಯಾಟ್
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ಬಗ್ಗೆ ಕೋಡಿಹಳ್ಳಿ ಚಂದ್ರಶೇಖರ್ ರವರು ಅತ್ಯಂತ ಲಘುವಾಗಿ ಮಾತನಾಡಿರುವುದು ಕೂಡ ಖಂಡನೀಯ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ, ಅವಶ್ಯಕ ಸೇವೆಯಡಿ ಬರುವ ಸಾರಿಗೆ ಸಂಸ್ಥೆಯ ನೌಕರರು ಮುಷ್ಕರ ನಡೆಸುತ್ತಿರುವುದು ಅತ್ಯಂತ ದುರದುಷ್ಟಕರ ಸಂಗತಿ.
ಈ ಮುಷ್ಕರದಿಂದ ರಾಜ್ಯದೆಲ್ಲೆಡೆ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಈಗಾಗಲೇ ಸಾರಿಗೆ ಸಂಸ್ಥೆಯ ನೌಕರರ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸಲು ಸಾರಿಗೆ ಸಚಿವ ಲಕ್ಷ್ಮಣ್ ಸವದಿಯವರಿಗೆ ಸಲಹೆ-ಸೂಚನೆಗಳನ್ನು ನೀಡಿದ್ದೇನೆ.
ಸಾರಿಗೆ ಸಚಿವರೂ ಸಹ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ನಿರಂತರವಾಗಿ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರು ದುರುದ್ದೇಶದಿಂದ ಕೆಲವು ಸಾರಿಗೆ ನೌಕರರನ್ನು ಎತ್ತಿಕಟ್ಟಿ ಮುಷ್ಕರ ನಡೆಸಲು ಮತ್ತು ರಾಜ್ಯದ ವಿವಿಧೆಡೆ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್‍ಗಳ ಮೇಲೆ ಕಲ್ಲು ತೂರಾಟ ನಡೆಸಲು ಪ್ರಚೋದಿಸಿದ್ದಾರೆ.
https://www.youtube.com/watch?v=PJXAUYUadFg
ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟಾಗಲು ಕಾರಣಕರ್ತರಾಗಿರುತ್ತಾರೆ. ಅಲ್ಲದೇ ಮಾಜಿ ಮುಖ್ಯ ಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ಬಗ್ಗೆ ಕೋಡಿಹಳ್ಳಿ ಚಂದ್ರಶೇಖರ್ ರವರು ಅತ್ಯಂತ ಲಘುವಾಗಿ ಮಾತನಾಡಿರುವುದು ಕೂಡ ಖಂಡನೀಯ ಎಂದು ಆಕ್ರೋಶ ಹೊರಹಾಕಿದ್ದಾರೆ.
ಇನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಕೂಡಲೇ ಸತ್ಯಾಗ್ರಹವನ್ನು ನಿಲ್ಲಿಸಿ ಕರ್ತವ್ಯಕ್ಕೆ ಮರಳಿ. ನಂತರ ಸಾರಿಗೆ ಸಚಿವರ ಜೊತೆ ಚರ್ಚೆಗೆ ಬರಬೇಕೆಂದು ಸಿಎಂ ಮನವಿ ಮಾಡಿಕೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









