ಬಾಕ್ಸಿಂಗ್ ಡೇ ಟೆಸ್ಟ್ ಗೆ ಟೀಂ ಇಂಡಿಯಾ ಪ್ರಕಟ : ರಾಹುಲ್ ಗಿಲ್ಲ ಸ್ಥಾನ
ಮೆಲ್ಬರ್ನ್ : ಆಸ್ಟ್ರೇಲಿಯಾ ವಿರುದ್ಧ ನಾಳೆ ನಡೆಯಲಿರುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೆ ಭಾರತದ ತಂಡ ಪ್ರಕಟವಾಗಿದ್ದು, ನಿರೀಕ್ಷೆಯಂತೆ ಕೆಲ ಬದಲಾವಣೆಗಳು ಆಗಿವೆ. ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ತಂಡವನ್ನು ಮುನ್ನಡೆಸಲಿದ್ದಾರೆ.
ಎರಡನೇ ಟೆಸ್ಟ್ ಪಂದ್ಯದಲ್ಲಿ ಶುಭಮನ್ ಗಿಲ್ ಮತ್ತು ವೇಗಿ ಮಹಮ್ಮದ್ ಸಿರಾಜ್ ಟೆಸ್ಟ್‍ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದೇ ವೇಳೆ ಕಳಪೆ ಪ್ರದರ್ಶನ ತೋರಿದ ಪೃಥ್ವಿ ಶಾ, ಮತ್ತು ಸಹಾ ತಂಡದಿಂದ ಹೊರಬಿದ್ದಿದ್ದಾರೆ.
ಅದೇ ರೀತಿ ಮೊಹಮ್ಮದ್ ಶಮಿ ಬದಲಿಗೆ ಮತ್ತೋರ್ವ ವೇಗಿ ಮಹಮ್ಮದ್ ಸಿರಾಜ್ ತಂಡ ಸೇರಿಕೊಂಡಿದ್ದಾರೆ. ನಿರೀಕ್ಷೆಯಂತೆ ರವೀಂದ್ರ ಜಡೇಜಾ ಹಾಗು ರಿಷಬ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ಕನ್ನಡಿಗ ಕೆ.ಎಲ್ ರಾಹುಲ್ ಮತ್ತೆ ಅವಕಾಶ ವಂಚಿತರಾಗಿದ್ದಾರೆ.
ಬ್ಯಾಟಿಂಗ್ ವಿಭಾಗದಲ್ಲಿ ಮಯಾಂಕ್ ಅಗರ್ ವಾಲ್, ಶುಬ್ ಮನ್ ಗಿಲ್, ಪೂಜಾರಾ, ಅಜಿಂಕ್ಯ ರಹಾನೆ, ಹನುಮ ವಿಹಾರಿ ಸ್ಥಾನ ಪಡೆದಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಜಸ್ಪ್ರೀತ್ ಬೂಮ್ರಾ, ಸಿರಾಜ್ ಸ್ಥಾನ ಪಡೆದಿದ್ದರೇ ಆಲ್ ರೌಂಡರ್ ಆಗಿ ಜಡೇಜಾ ಕಣಕ್ಕಿಳಿಯಲಿದ್ದಾರೆ. ರಿಶಭ್ ಪಂತ್ ವಿಕೆಟ್ ಕೀಪಿಂಗ್ ನಿರ್ವಹಿಸಲಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









