ಧರ್ಮೇಗೌಡ ಆತ್ಮಹತ್ಯೆಗೆ ಕಾಂಗ್ರೆಸ್ ನಾಯಕರ ಸಂತಾಪ
ಬೆಂಗಳೂರು : ವಿಧಾನ ಪರಿಷತ್ ನ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ಅವರು ಚಿಕ್ಕಮಗಳೂರು ಜಿಲ್ಲೆ ಗುಣಸಾಗರದಲ್ಲಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ರಾಜ್ಯ ಕಾಂಗ್ರೆಸ್ ನಾಯಕರು ಆಘಾತ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ವಿಧಾನ ಪರಿಷತ್ ಉಪಸಭಾಪತಿ ಎಸ್ ಎಲ್ ಧರ್ಮೇಗೌಡ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.
ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಶೋಕತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಕಂಬನಿ ಮಿಡಿದಿದ್ದಾರೆ..
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕೂಡ ಟ್ವಿಟ್ಟರ್ ನಲ್ಲಿ ಸಂತಾಪ ಸೂಚಿಸಿದ್ದು, ಧರ್ಮೇಗೌಡ ಅವರ ಸಾವಿನ ಸುದ್ದಿ ಕೇಳಿ ಆಘಾತವಾಗಿದೆ.
ಸಜ್ಜನ ಸ್ವಭಾವದ ರಾಜಕಾರಣಿ ಎಂದೇ ಗುರುತಿಸಿಕೊಂಡಿದ್ದ ಅವರು ಈ ರೀತಿ ಅಂತ್ಯ ಕಂಡಿರುವುದು ನೋವಿನ ಸಂಗತಿ. ಅವರ ಕುಟುಂಬ ಹಾಗೂ ಬಂಧುಮಿತ್ರರಿಗೆ ಈ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.
ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ, ವಿಧಾನ ಪರಿಷತ್ ಉಪ ಸಭಾಪತಿ ಧರ್ಮೇಗೌಡ ಅವರ ಸಾವಿನ ಸುದ್ದಿ ನಿಜಕ್ಕೂ ಬರಸಿಡಿಲಿನ ಆಘಾತ ತಂದಿದೆ.
ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಳ್ಳುವ ಆತುರದ ನಿರ್ಧಾರ ಕೈಗೊಳ್ಳಬಾರದಿತ್ತು. ಅವರ ಕೆಟ್ಟ ನಿರ್ಧಾರ ಎಲ್ಲರಿಗೂ ನೋವು ತಂದಿದೆ. ಅವರ ಕುಟುಂಬದ ಶೋಕದಲ್ಲಿ ನಾನು ಭಾಗಿ. ಧರ್ಮೇಗೌಡರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel