ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಆತ್ಮಹತ್ಯೆ
ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ನಿನ್ನೆ ರಾತ್ರಿ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರಿನ ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿರುವಂತ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ಜಯಶ್ರೀ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಹಿಂದೆಯೂ ನಟಿ ಜಯಶ್ರೀ ಹಲವು ಬಾರಿ ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆ ಸೋಶಿಯಲ್ ಮಿಡಿಯಾದಲ್ಲಿ ಬರೆದುಕೊಂಡಿದ್ದರು. ಖಿನ್ನತೆಗೆ ಹಾಗೂ ಈ ಜಗತ್ತಿಗೆ ವಿದಾಯ ಹೇಳುತ್ತಿದ್ದೇವೆ ಎಂದು ಫೇಸ್ ಬುಕ್ ನಲ್ಲಿ ಈ ಹಿಂದೆ ಜಯಶ್ರೀ ಬರೆದುಕೊಂಡಿದ್ದರು.
ಸ್ವಲ್ಪ ಸಮಯದ ಬಳಿಕ ಪೋಸ್ಟ್ ಡಿಲೀಟ್ ಮಾಡಿ, ನಾನು ಆರಾಮಾಗಿ ಸುರಕ್ಷಿತವಾಗಿದ್ದೀನಿ ಎಂದು ಮತ್ತೆ ಪೋಸ್ಟ್ ಮಾಡಿದ್ದರು. ಇದು ಭಾರಿ ಸದ್ದು ಮಾಡಿತ್ತು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಅವರೇ ಹೇಳಿಕೊಂಡಿರುವ ಪ್ರಕಾರ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಚಿಕ್ಕ ವಯಸ್ಸಿನಲ್ಲಿ ನಡೆದ ಒಂದು ಘಟನೆಯಿಂದ ಭಾರಿ ಖಿನ್ನತೆಗೆ ಒಳಗಾಗಿರುವುದಾಗಿ ಈ ಹಿಂದೆ ಫೇಸ್ ಬುಕ್ ಲೈವ್ ನಲ್ಲಿ ಜಯಶ್ರೀ ಹೇಳಿಕೊಂಡಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









