ರೈತರ ಹೋರಾಟಕ್ಕೆ ನಾವು ಬೆಂಬಲ ಕೊಡಲ್ಲ : ಆರ್.ಶಂಕರ್
ಬೆಂಗಳೂರು : ರೈತರು ಕೈಗೊಂಡಿರುವ ಹೋರಾಟವನ್ನು ಕೈಬಿಡಬೇಕು. ಹೋರಾಟಕ್ಕೆ ನಾವು ಬೆಂಬಲ ಕೊಡುವುದಿಲ್ಲ ಎಂದು ಸಚಿವ ಆರ್.ಶಂಕರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸಮಸ್ಯೆ ಪರಿಹಾರಕ್ಕೆ ನಾನು ಮತ್ತು ಕೃಷಿ ಸಚಿವರು ಒಟ್ಟಾಗಿ ಕೆಲಸ ಮಾಡುತ್ತೇವೆ.
ರೈತರ ಪರವಾಗಿ ಕೆಲಸ ಮಾಡುವುದಕ್ಕೆ ನಾವು ಸಿದ್ಧವಾಗಿದ್ದೇವೆ. ಆದ್ರೆ ರೈತರು ಕೈಗೊಂಡಿರುವ ಹೋರಾಟವನ್ನು ಕೈಬಿಡಬೇಕು.
ಹೋರಾಟಕ್ಕೆ ನಾವು ಬೆಂಬಲ ಕೊಡುವುದಿಲ್ಲ. ಯಾರದ್ದೋ ಮಾತು ಕೇಳಿ ಪ್ರತಿಭಟನೆ ಮಾಡೋದು ಸರಿಯಲ್ಲ. ರೈತರ ಪರ ಕೆಲಸ ಮಾಡೋಕೆ ನಮ್ಮ ಇಲಾಖೆ ಇದೆ ಎಂದು ತಿಳಿಸಿದರು.
ಇದೇ ವೇಳೆ ತೋಟಗಾರಿಕಾ ಮತ್ತು ರೇಷ್ಮೆ ಖಾತೆ ಬಗ್ಗೆ ಮಾತನಾಡಿ, ಸಚಿವನಾಗಿ ಅಧಿಕಾರ ಸ್ವೀಕರಿಸಿದ ಮೇಲೆ ಇಂದು ಸಭೆ ಮಾಡಿದ್ದೇನೆ. ತೋಟಗಾರಿಕೆ ಅವಲಂಬಿತ ರೈತರ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ.
ಬೆಳೆಗಳ ಮಾರಾಟ, ಸಂಗ್ರಹಣೆ, ಸೇರಿದಂತೆ ಎಲ್ಲಾ ವಿಚಾರವಾಗಿ ಸಭೆ ಮಾಡಿದ್ದೇನೆ. ರೇಷ್ಮೆ ಇಲಾಖೆ ಅಧಿಕಾರಿಗಳ ಜೊತೆಯೂ ಸಭೆ ಮಾಡಿದ್ದೇನೆ.
ರೇಷ್ಮೆ ಬೆಳೆಗಾರರ ಸಂಕಷ್ಟ, ಅವರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದಿದ್ದೇನೆ. ಕೃಷಿ ದೇವೋಭವ ಆಗುವಂತೆ ನಾವು ಕೆಲಸ ಮಾಡಬೇಕು ಎಂದು ಹೇಳಿದರು.
ರೈತರ ಜೀವದ ಜೊತೆ ಚೆಲ್ಲಾಟ ಆಡದೇ ರೈತರ ಪರ ಅಭಿವೃದ್ಧಿ ಕೆಲಸ ಮಾಡುತ್ತೇವೆ. ಇಲಾಖೆಗೆ ಬೇಕಾದ ಯೋಜನೆಗೆ ಅನುದಾನ ಕೊಡುವಂತೆ ಸಿಎಂಗೆ ಮನವಿ ಮಾಡುತ್ತೇನೆ.
ರೈತರ ಆದಾಯ ದ್ವಿಗುಣ ಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ. ಕೇಂದ್ರದ ಜೊತೆಯೂ ಸಂಪರ್ಕದಲ್ಲಿದ್ದು, ಅಭಿವೃದ್ಧಿಗೆ ಕೆಲಸ ಮಾಡುತ್ತೇವೆ ಎಂದು ಆರ್ ಶಂಕರ್ ಹೇಳಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









