ಐಸಿಸಿ ಏಕದಿನ ರ್ಯಾಂಕಿಂಗ್ : ಅಗ್ರಸ್ಥಾನದಲ್ಲೇ ಮುಂದುವರಿದ `ಕಿಂಗ್’ ಕೊಹ್ಲಿ
ದುಬೈ : ಐಸಿಸಿ ಏಕದಿನ ರ್ಯಾಂಕಿಂಗ್ ಪ್ರಕಟವಾಗಿದ್ದು, ಬ್ಯಾಟಿಂಗ್ ವಿಭಾಗದಲ್ಲಿ ಟೀ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.
ಎರಡನೇ ಸ್ಥಾನವನ್ನ ಹಿಟ್ ಮ್ಯಾನ್ ರೋಹಿತ್ ಶರ್ಮಾ ಉಳಿಸಿಕೊಂಡಿದ್ದಾರೆ. ಬೌಲರ್ ಗಳ ವಿಭಾಗದಲ್ಲಿ ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬೂಮ್ರಾ 3ನೇ ಸ್ಥಾನದಲ್ಲಿದ್ದಾರೆ.
ಐಸಿಸಿಯ ಬ್ಯಾಟಿಂಗ್ ವಿಭಾಗದಲ್ಲಿ ಕಳೆದ ಆಸ್ಟ್ರೇಲಿಯಾ ಪ್ರವಾಸದಲ್ಲಿ 3 ಪಂದ್ಯಗಳಿಂದ 2 ಅರ್ಧಶತಕ ಸಿಡಿಸಿದ್ದ ವಿರಾಟ್ ಕೊಹ್ಲಿ ಅಗ್ರಸ್ಥಾನವನ್ನು ಉಳಿಸಿಕೊಂಡಿದ್ದರೆ,
ರೋಹಿತ್ ಶರ್ಮಾ ಟೂರ್ನಿಯಲ್ಲಿ ಆಡದಿದ್ದರೂ ಎರಡನೇ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮೂರನೇ ಸ್ಥಾನದಲ್ಲಿ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಇದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಬೌಲರ್ ಗಳ ಲಿಸ್ಟ್ ನಲ್ಲಿ ಮೊದಲ ಮೂರು ಸ್ಥಾನಗಳನ್ನು ಟ್ರೆಂಟ್ ಬೌಲ್ಟ್, ಮುಜೀಬ್ ಉರ್ ರಹಮಾನ್ ಮತ್ತು ಜಸ್ಪ್ರೀತ್ ಬುಮ್ರಾ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಆಲ್ ರೌಂಡರ್ ಶ್ರೇಯಾಂಕದಲ್ಲಿ ಶಕಿಬ್ ಮೊದಲಸ್ಥಾನದಲ್ಲಿ, ನಬಿ ಎರಡನೇ ಸ್ಥಾನದಲ್ಲಿ, ವೋಕ್ಸ್ ಮೂರನೇ ಸ್ಥಾನದಲ್ಲಿ, ಸ್ಟೋಕ್ಸ್ ಮತ್ತು ಇಮದ್ ವಾಸೀಮ್ ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










