ಮ್ಯಾನ್ಮಾರ್ ನಲ್ಲಿ ಸೇನಾ ಕ್ರಾಂತಿ : ಒಂದು ವರ್ಷ ತುರ್ತುಪರಿಸ್ಥಿತಿ
ಬ್ಯಾಂಕಾಕ್ : ಮ್ಯಾನ್ಮಾರ್ ನಲ್ಲಿ ಸೇನೆ ಕ್ಷಿಪ್ರಕ್ರಾಂತಿ ನಡೆಸಿದ್ದು, ಒಂದು ವರ್ಷ ತುರ್ತು ಪರಿಸ್ಥಿತಿ ಘೋಷಣೆಯಾಗಿದೆ.
ಮ್ಯಾನ್ಮಾರ್ ಉಪಾಧ್ಯಕ್ಷರಾಗಿರುವ ಮೈನ್ ಸ್ವೀ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ಮ್ಯಾನ್ಮಾರ್ ಸೇನೆ ಒಂದು ವರ್ಷದ ಅವಧಿಗೆ ನೇಮಕ ಮಾಡಿದೆ.
ಅಲ್ಲದೆ ನಾಗರಿಕ ಹೋರಾಟಗಳ ನಾಯಕಿ ಆಂಗ್ ಸಾನ್ ಸೂಕಿ ಸೇರಿದಂತೆ ಹಲವು ಮುಖಂಡರನ್ನು ಸೇನೆ ಬಂಧಿಸಿದೆ.
ಈ ಹಿನ್ನೆಲೆ ಈ ಬಿಕಟ್ಟಿನ ಬಗ್ಗೆ ಚರ್ಚಿಸಲು ಮಂಗಳವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತುರ್ತು ಸಭೆ ಕರೆಯಲಾಗಿದೆ.
ಇನ್ನು 2008ರಲ್ಲಿ ಸಂವಿಧಾನದ ಕರಡು ಸಿದ್ಧಪಡಿಸಿದ್ದ ಸೇನೆಯು ರಾಷ್ಟ್ರೀಯ ತುರ್ತು ಪರಿಸ್ಥಿತಿ ಎದುರಾದರೆ, ಅಧ್ಯಕ್ಷರು ಸೇನಾ ಮುಖ್ಯಸ್ಥರಿಗೆ ಅಧಿಕಾರ ಹಸ್ತಾಂತರಿಸಬಹುದು ಎಂದು ಉಲ್ಲೇಖಿಸಿತ್ತು.
ಆ ಮೂಲಕ ಸೇನೆಯು ದೇಶದ ಮೇಲೆ ಸಂಪೂರ್ಣ ನಿಯಂತ್ರಣ ಹೊಂದಬಹುದಾಗಿದೆ.
ಅಂದಹಾಗೆ ಕಳೆದ ನವೆಂಬರ್ ನಲ್ಲಿ ನಡೆದ ಚುನಾವಣೆಯಲ್ಲಿ ಅಂಗ್ ಸಾನ್ ಸೂ ಕಿ ನೇತೃತ್ವದ ನ್ಯಾಷನಲ್ ಲೀಗ್ ಫಾರ್ ಡೆಮಾಕ್ರಸಿ ಪಕ್ಷ ಸಂಸತ್ ನ 476 ಸ್ಥಾನಗಳ ಪೈಕಿ 396ರಲ್ಲಿ ಜಯ ಗಳಿಸಿತ್ತು.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಫಲಿತಾಂಶ ಘೋಷಣೆಯಾದ ಬೆನ್ನಲ್ಲೇ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಸೇನೆ ಆರೋಪಿಸಿತ್ತು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









