ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

`ರೈತ ಪರ’ ಟ್ವೀಟ್ ಮಾಡಿ ಸದ್ದು ಮಾಡ್ತಿರೋ ರಿಹಾನಾ ಯಾರು ಗೊತ್ತಾ..?

admin by admin
February 4, 2021
in Newsbeat, Saaksha Special, ಎಸ್ ಸ್ಪೆಷಲ್
rihanna
Share on FacebookShare on TwitterShare on WhatsappShare on Telegram

Related posts

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

August 19, 2026
ರಾಜ್ಯಪಾಲರಿಗೆ ಹೈಕೋರ್ಟ್ ಶಾಕ್: ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ಆದೇಶ ರದ್ದು, ಮರುನೇಮಕಕ್ಕೆ ಸೂಚನೆ!

ರಾಜ್ಯಪಾಲರಿಗೆ ಹೈಕೋರ್ಟ್ ಶಾಕ್: ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ಆದೇಶ ರದ್ದು, ಮರುನೇಮಕಕ್ಕೆ ಸೂಚನೆ!

August 19, 2026

`ರೈತ ಪರ’ ಟ್ವೀಟ್ ಮಾಡಿ ಸದ್ದು ಮಾಡ್ತಿರೋ ರಿಹಾನಾ ಯಾರು ಗೊತ್ತಾ..?

ಸದ್ಯ ದೇಶದಲ್ಲಿ ರೈತರ ಪ್ರತಿಭಟನೆ ಜೋರಾಗಿದೆ. ಕೇಂದ್ರ ವಿರುದ್ಧ ಸಮರ ಸಾರಿರುವ ಅನ್ನದಾತರು ದೆಹಲಿಯ ಗಡಿಯಲ್ಲಿ ಸುಮಾರು ದಿನಗಳಿಂದ ಕೊರೆಯುವ ಚಳಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲ ಕಿಡಿಗೇಡಿಗಳು, ಈ ಪ್ರತಿಭಟನೆಗೆ ಕಪ್ಪು ಚುಕ್ಕೆ ತರುವಂತಹ ಕೆಲಸಗಳನ್ನ ಮಾಡಿದ್ದಾರೆ. ಇವರು ರೈತರಲ್ಲ ಭಯೋತ್ಪಾದಕರು ಅಂತಾ ಹೇಳಿಕೆಗಳು ಬರುತ್ತಿವೆ. ಇನ್ನೊಂದೆಡೆ ರೈತರ ಪರ, ರೈತ ಹೋರಾಟಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

ಈ ಮಧ್ಯೆ ಜಗತ್ತಿನ ಪ್ರಖ್ಯಾತ ಪಾಪ್ ಗಾಯಕಿ ರಿಹಾನಾ, ರೈತ ಪ್ರತಿಭಟನೆಗೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿದ್ದು, ಸದ್ಯ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇಷ್ಟು ದಿನ ದೇಶದಲ್ಲಿ ಮಾತ್ರ ಸದ್ದು ಮಾಡುತ್ತಿದ್ದ ರೈತ ಪ್ರತಿಭಟನೆ ಸುದ್ದಿ, ಇದೀಗ ಜಾಗತೀಕ ಸುದ್ದಿಯಾಗಿದೆ. ಇನ್ನು ಗಾಯಕಿ ರಿಹಾನಾ, ಮಾಡಿದ ಟ್ವೀಟ್ ಗೆ ಜಾಗತೀಕವಾಗಿ ಬೆಂಬಲ ವ್ಯಕ್ತವಾಗುತ್ತಿದ್ದರೂ, ನಮ್ಮ ಕೆಲ ಸೆಲಬ್ರೆಟಿಗಳು ಇದು ನಮ್ಮ ವಿಚಾರ, ನಿಮಗ್ಯಾಕೆ ಅನ್ನೋ ರೀತಿ ರೀ ಟ್ವೀಟ್ ಗಳನ್ನ ಮಾಡುತ್ತಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ರಿಹಾನಾ ಬಗ್ಗೆ ಚರ್ಚೆ ಆಗುತ್ತಿದೆ.

rihanna

ಹಾಗಾದ್ರೆ ಈ ರಿಹಾನಾ ಯಾರು..? ಆಕೆ ಮಾಡಿದ್ದ ಟ್ವೀಟ್ ನಲ್ಲ ಏನಿದೆ ಅನ್ನೋ ಒಂದಿಷ್ಟು ಮಾಹಿತಿ ಇಲ್ಲಿದೆ.

ರಿಹಾನಾ ತಮ್ಮ ಟ್ವೀಟ್ ನಲ್ಲಿ `ಈ ವಿಷಯದ ಕುರಿತು ನಾವೇಕೆ ಮಾತಾಡಬಾರದು?’ ಇಷ್ಟೇ ಬರೆದದ್ದು. ಜತೆಗೆ ಸಿಎನ್ ಎನ್ ಸುದ್ದಿಸಂಸ್ಥೆ ಭಾರತದಲ್ಲಿ ನಡೆಯುತ್ತಿರುವ ರೈತ ಹೋರಾಟದ ಕುರಿತು ಮಾಡಿರುವ ವಿಸ್ತ್ರತ ವರದಿಯ ಲಿಂಕ್ ಶೇರ್ ಮಾಡಿದ್ದರು. ನೋಡನೋಡುತ್ತಿದ್ದಂತೆ ಅದು ಲಕ್ಷಾಂತರ ರೀಟ್ವೀಟ್ ಗಳಾದವು. #Rihanna ಮತ್ತು #FarmersProtest ಹ್ಯಾಶ್ ಟ್ಯಾಗ್ ಗಳು ಜಾಗತಿಕ ಟ್ರೆಂಡ್ ಆದವು.

ಅಂದಹಾಗೆ ರಿಹಾನಾ…! ಜಗತ್ತಿನ ಪ್ರಖ್ಯಾತ ಪಾಪ್ ಗಾಯಕಿಯರಲ್ಲಿ ಒಬ್ಬರು. ಟ್ವಿಟ್ಟರ್ ಒಂದರಲ್ಲೇ ಆಕೆಯ ಅನುಯಾಯಿಗಳ ಸಂಖ್ಯೆ ಹತ್ತು ಕೋಟಿ ದಾಟಿದೆ. ಒಂಭತ್ತು ಗ್ರಾಮಿ ಅವಾರ್ಡ್, ಹದಿಮೂರು ಅಮೆರಿಕನ್ ಮ್ಯೂಸಿಕ್ ಅವಾರ್ಡ್, ಹನ್ನೆರಡು ಬಿಲ್ ಬೋರ್ಡ್ ಮ್ಯೂಸಿಕ್ ಅವಾರ್ಡ್ ಜತೆಗೆ ಆರು ಗಿನ್ನೆಸ್ ದಾಖಲೆಗಳು ಈಕೆಯ ಮಡಿಲಲ್ಲಿವೆ.
ಇದಿಷ್ಟಲ್ಲದೇ ಟೈಂ ಮ್ಯಾಗಜೀನ್ ನ ಜಗತ್ತಿನ ಅತಿಹೆಚ್ಚು ಪ್ರಭಾವಶಾಲಿ ಸೆಲೆಬ್ರಿಟಿಗಳಲ್ಲಿ ಈಕೆ ಹಲವಾರು ವರ್ಷ ಖಾಯಂ ಸ್ಥಾನ ಪಡೆದಿದ್ದಾರೆ. ಆಕೆಯ ಆಸ್ತಿಯ ಒಟ್ಟು ಮೌಲ್ಯ ಬರೋಬ್ಬರಿ 600 ಮಿಲಿಯನ್ ಡಾಲರ್.!

ಇನ್ನು ರಿಹಾನಾ ಹುಟ್ಟುತ್ತಾ ಶ್ರೀಮಂತಳೇನಲ್ಲ.. ಬಡತನ, ಕುಡುಕ ತಂದೆ, ಸಾಮಾಜಿಕ ನಿಂದನೆ ಎಲ್ಲವೂ ರಿಹಾನಾಳನ್ನ ಭಾದಿಸಿವೆ. ರಿಹಾನಾ ಕೆರೆಬಿಯನ್ ದ್ವೀಪ ಸಮೂಹದ ಬಾರ್ಬಡೋಸ್ ಎಂಬ ದೇಶದವರು. ಕುಡುಕ ಅಪ್ಪ ದಿನವೂ ಈಕೆಯ ತಾಯಿಯನ್ನು ಹೊಡೆಯುತ್ತಿದ್ದ. ಅಮ್ಮ ಅಕೌಂಟೆಂಟ್, ಅಪ್ಪ ವೇರ್ ಹೌಸ್ ಒಂದರ ಸೂಪರ್ ವೈಜರ್. ಸಣ್ಣ ವಯಸ್ಸಿನಲ್ಲೇ ರಿಹಾನ ಬಟ್ಟೆ ವ್ಯಾಪಾರ ಮಾಡುತ್ತಿದ್ದಳು. ಕುಡುಕ ಅಪ್ಪ ಕೊಕೈನ್ ಗೆ ಅಡಿಕ್ಟ್ ಆಗಿದ್ದ. ಪ್ರತಿನಿತ್ಯ ಮನೆ ರಣರಂಗವಾಗುತ್ತಿತ್ತು. ಕೊನೆಗೊಂದು ದಿನ ಈಕೆಗೆ ಹದಿನಾಲ್ಕು ವರ್ಷವಾಗಿದ್ದಾಗ ಅಪ್ಪ-ಅಮ್ಮ ಬೇರೆಯಾದರು.

rihanna

ಸಣ್ಣವಯಸ್ಸಿನಿಂದ ಸಂಗೀತದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದ ರಿಹಾನಾ 2003ರಲ್ಲಿ ತನ್ನ ಇಬ್ಬರು ಗೆಳತಿಯರೊಂದಿಗೆ ಸೇರಿ ಸಣ್ಣ ತಂಡ ಮಾಡಿಕೊಂಡು ಸಂಗೀತಾಭ್ಯಾಸ ಆರಂಭಿಸಿದಳು. ಅಮೆರಿಕದ ಮ್ಯೂಸಿಕ್ ಪೆÇ್ರಡ್ಯೂಸರ್ ಇವಾನ್ ರೋಜರ್ಸ್ ಎಂಬಾತ  ಈ ತಂಡವನ್ನ ಗುರುತಿಸಿ ಪ್ರೋತ್ಸಾಹ ನೀಡಿದ. ಆ ನಂತರ ರಿಹಾನಾಳ ಬದುಕಲ್ಲಿ ನಡೆದಿದ್ದೆಲ್ಲ ಪವಾಡ. ಆಕೆ ಮುಟ್ಟಿದ್ದೆಲ್ಲ ಚಿನ್ನವಾಯ್ತು, ಸಂಗೀತ ಜಗತ್ತು ಅವಳನ್ನು ಆರಾಧಿಸಿತು. ಹಣ, ಪ್ರಶಸ್ತಿ, ಖ್ಯಾತಿ ಎಲ್ಲವೂ ಆಕೆಯನ್ನು ಮುತ್ತಿಕೊಂಡವು. 2008ರ ಫೆಬ್ರವರಿ 22 ರಂದು ಅಂದಿನ ಬಾರ್ಬಡೋಸ್ ಸರ್ಕಾರ ರಿಹಾನಾಗೆ ಗೌರವ ನೀಡಲೆಂದು ರಿಹಾನಾ ಡೇ ಆಚರಿಸಿತು.

ಸಣ್ಣ ವಯಸ್ಸಿನಲ್ಲೇ ಇಷ್ಟೆಲ್ಲಾ ಸಾಧನೆ ಮಾಡಿ ಅಪಾರ ಪ್ರಮಾಣ ಅಭಿಮಾನಿಗಳನ್ನ ಹೊಂದಿರುವ ರಿಹಾನಾ ಈಗ ಭಾರತೀಯ ರೈತರ ಪರವಾಗಿ ಮಾತನಾಡಿದ್ದಾರೆ, ಅದು ಈಗ ಜಾಗತಿಕ ಸುದ್ದಿ.
ಅಂದಹಾಗೆ ರಿಹಾನಾ ಈ ರೀತಿಯಲ್ಲಿ ಜಾಗತಿಕ ವಿದ್ಯಮಾನಗಳಿಗೆ ಸ್ಪಂದಿಸುವುದು ಹೊಸದೇನೂ ಅಲ್ಲ. ಈ ಹಿಂದೆ ಸೂಡಾನ್, ನೈಜೀರಿಯಾಗಳಲ್ಲಿ ನಡೆಯುತ್ತಿರುವ ಸಾಮಾಜಿಕ ನ್ಯಾಯದ ಹೋರಾಟಗಳನ್ನು ಆಕೆ ಬೆಂಬಲಿಸಿದ್ದರು. ಟ್ರಂಪ್ ಅಧ್ಯಕ್ಷರಾದ ನಂತರ ನಡೆದ ಐತಿಹಾಸಿಕ ಮಹಿಳಾ ರ್ಯಾಲಿಯಲ್ಲಿ ರಿಹಾನಾ ಭಾಗವಹಿಸಿದ್ದರು. ಹಲವಾರು ದೇಶಗಳ ಜನರಿಗೆ ವೀಸಾ ನಿಬರ್ಂಧಿಸಿದ ಟ್ರಂಪ್ ಸರ್ಕಾರದ ನಡೆಯನ್ನೂ ಅವರು ಹಿಂದೆ ಕಟುವಾಗಿ ಟೀಕಿಸಿದ್ದರು.

ಇದೀಗ ರಿಹಾನಾ ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಬಗ್ಗೆ ಮಾತನಾಡಿದ್ದು, ರೈತರ ಪ್ರತಿಭಟನೆ ಜಾಗತೀಕ ಸುದ್ದಿಯಾಗಿದೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: FarmersProtestrihanna
ShareTweetSendShare
Join us on:

Related Posts

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

ರಾಜ್ಯಪಾಲರಿಗೆ ಹೈಕೋರ್ಟ್ ಶಾಕ್: ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ಆದೇಶ ರದ್ದು, ಮರುನೇಮಕಕ್ಕೆ ಸೂಚನೆ!

ರಾಜ್ಯಪಾಲರಿಗೆ ಹೈಕೋರ್ಟ್ ಶಾಕ್: ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ಆದೇಶ ರದ್ದು, ಮರುನೇಮಕಕ್ಕೆ ಸೂಚನೆ!

by Shwetha
August 19, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಅಲ್ಲದೆ,...

ಸಿಐಡಿ ಕ್ಲೀನ್ ಚಿಟ್ ಕೊಟ್ಟಿದೆ, ಬಿ ನಾಗೇಂದ್ರ ಸಂಪುಟ ಸೇರ್ಪಡೆ ಸಮರ್ಥಿಸಿಕೊಂಡ ಗೃಹ ಸಚಿವರು : 52 ವರ್ಷ ಕಚೇರಿಯಲ್ಲಿ ರಾಷ್ಟ್ರಧ್ವಜ ಹಾರಿಸದವರು ನಮಗೆ ದೇಶಪ್ರೇಮದ ಪಾಠ ಮಾಡಬೇಕಿಲ್ಲ-ಪ್ರಿಯಾಂಕ್ ಖರ್ಗೆ

ಸಿಐಡಿ ಕ್ಲೀನ್ ಚಿಟ್ ಕೊಟ್ಟಿದೆ, ಬಿ ನಾಗೇಂದ್ರ ಸಂಪುಟ ಸೇರ್ಪಡೆ ಸಮರ್ಥಿಸಿಕೊಂಡ ಗೃಹ ಸಚಿವರು : 52 ವರ್ಷ ಕಚೇರಿಯಲ್ಲಿ ರಾಷ್ಟ್ರಧ್ವಜ ಹಾರಿಸದವರು ನಮಗೆ ದೇಶಪ್ರೇಮದ ಪಾಠ ಮಾಡಬೇಕಿಲ್ಲ-ಪ್ರಿಯಾಂಕ್ ಖರ್ಗೆ

by Shwetha
August 19, 2026
0

ಬೆಂಗಳೂರು: ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣದಲ್ಲಿ ಸಿಐಡಿ ತನಿಖೆಯಿಂದ ಕ್ಲೀನ್‌ಚಿಟ್ ಸಿಕ್ಕಿರುವ ಹಿನ್ನೆಲೆಯಲ್ಲಿಯೇ ಅವರನ್ನು ಮತ್ತೆ ರಾಜ್ಯ ಸಚಿವ...

‘ವಂದೇ ಮಾತರಂ’ ಮೊದಲ ಎರಡು ಪ್ಯಾರಾಗಳಷ್ಟೇ ಹಾಡುತ್ತೇವೆ: ಬಿ.ಕೆ. ಹರಿಪ್ರಸಾದ್

‘ವಂದೇ ಮಾತರಂ’ ಮೊದಲ ಎರಡು ಪ್ಯಾರಾಗಳಷ್ಟೇ ಹಾಡುತ್ತೇವೆ: ಬಿ.ಕೆ. ಹರಿಪ್ರಸಾದ್

by Shwetha
August 19, 2026
0

ಕಾಂಗ್ರೆಸ್ ಪಕ್ಷದ ಯಾವುದೇ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ 'ವಂದೇ ಮಾತರಂ' ಅನ್ನು ಸಂಪೂರ್ಣವಾಗಿ ಹಾಡುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕೆಪಿಸಿಸಿ ನಾಯಕ ಬಿ.ಕೆ. ಹರಿಪ್ರಸಾದ್...

ನಾನು ಮೊದಲ ಬಾರಿ ಶಾಸಕನಾದಾಗ ಅಮಿತ್ ಷಾ ಇನ್ನೂ ಮಗು, ನನಗೆ ದೇಶಭಕ್ತಿ ಪಾಠ ಮಾಡ್ತಾರಾ: ಖರ್ಗೆ ಗರಂ, ಸೋನಿಯಾ ಗಾಂಧಿ ನಿಂದಿಸಿದ ಬಿಜೆಪಿಗೆ ಖಾರವಾದ ತಿರುಗೇಟು

ನಾನು ಮೊದಲ ಬಾರಿ ಶಾಸಕನಾದಾಗ ಅಮಿತ್ ಷಾ ಇನ್ನೂ ಮಗು, ನನಗೆ ದೇಶಭಕ್ತಿ ಪಾಠ ಮಾಡ್ತಾರಾ: ಖರ್ಗೆ ಗರಂ, ಸೋನಿಯಾ ಗಾಂಧಿ ನಿಂದಿಸಿದ ಬಿಜೆಪಿಗೆ ಖಾರವಾದ ತಿರುಗೇಟು

by Shwetha
August 19, 2026
0

ಪಣಜಿ : ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಅಪಮಾನ ಮಾಡಿದ್ದಾರೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram