ಭ್ರಷ್ಟಾಧಿಕಾರಿಗೆ ಚಳಿ ಬಿಡಿಸಿದ ಎಸಿಬಿ ಅಧಿಕಾರಿಗಳು..!
ಚಾಮರಾಜನಗರ : ಲಂಚಕ್ಕಾಗಿ ಬೇಡಿಕೆಯಿಟ್ಟ ತೋಟಗಾರಿಕಾ ಹಿರಿಯ ಸಹಾಯಕ ನಿರ್ದೇಶಕರು ಎಸಿಬಿ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ.
ಹನಿ ನೀರಾವರಿ ಯೋಜನೆಯ ಫಲಾನುಭವಿಗಳಿಗೆ ಸಬ್ಸಿಡಿ ಹಣ ಮಂಜುರಾತಿಗೆ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.
ಖಚಿತ ಮಾಹಿತಿ ಮೇರೆಗೆ ರೇಡ್ ಮಾಡಿದ ಎಸಿಬಿ ಅಧಿಕಾರಿಗಳು ಭ್ರಷ್ಟಾಧಿಕಾರಿಯನ್ನ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಗುಂಡ್ಲುಪೇಟೆಯ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶಿವಲಿಂಗಪ್ಪ ಎಸಿಬಿ ಬಲೆಗೆ ಸಿಕ್ಕಿ ಬಿದ್ದ ಅಧಿಕಾರಿಯಾಗಿದ್ದಾರೆ.
ಹನಿನೀರಾವರಿ ಯೋನೆಯ ಸಲಕರಣೆಗಳ ವಿತರಕ ಕಡಬೂರು ಮಂಜು ಎಂಬಾತರ ಬಳಿ 50 ಸಾವಿರ ರೂಪಾಯಿ ಹಣಕ್ಕೆ ಬೇಡಿಕೆಯಿಟ್ಟಿದ್ದರು.
ಮಂಜು ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಅದ್ರಂತೆ ದಾಳಿ ನಡೆಸಿ ಶಿವಲಿಂಗಪ್ಪರನ್ನ ವಶಕ್ಕೆ ಪಡೆಯಲಾಗಿದೆ.
ಇನ್ನೂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈ ಸಂಬಂಧ ಪರಿಶೀಲನೆ ನಡೆಸಲಾಗ್ತಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









