ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ನೀರುಪಾಲಾದ ಯುವಕರು..!
ಬೆಳಗಾವಿ : ಜೂಜಾಟದಲ್ಲಿ ಬಂಧವಾಗಿ ಪೋಲಿಸರಿಂದ ತಪ್ಪಿಸಿಕೊಳ್ಳಲು ಹೋದ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬಟಕುರ್ಕಿ ಬಳಿ ನಡೆದಿದೆ.
ಮಂಜು ಬಂಡಿವಡ್ಡರ, ಸಮೀರ ಬಟಕುರ್ಕಿ ಮೃತ ಯುವಕರಾಗಿದ್ದಾರೆ.
ಬಟಕುರ್ಕಿ ಗ್ರಾಮದ ಹೊರವಲಯದಲ್ಲಿ ಜೂಜಾಟದಲ್ಲಿ ತೊಡಗಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ.
ಈ ವೇಳೆ 6 ಜನರು ಪೊಲೀಸರಿಂದ ತಪ್ಪಿಸಿಕೊಳ್ಳೋ ಪ್ರಯತ್ನ ಮಾಡಿದ್ದಾರೆ. ತಪ್ಪಿಸಿಕೊಳ್ಳಲು 6 ಜನರು ನದಿಗೆ ಹಾರಿದ್ದಾರೆ.
ಇವರಲ್ಲಿ ನಾಲ್ವರು ಈಜಿ ದಡ ಸೇರಿದ್ರೆ ಇನ್ನೂ ಇಬ್ಬರು ಜಲಸಮಾಧಿಯಾಗಿದ್ದಾರೆ. ಮಲಪ್ರಭಾ ನದಿಯಲ್ಲಿ ಯುವಕರ ಶವ ಪತ್ತೆಯಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









