ನನಗೆ ಯಾವುದೇ ಸಂಕೋಚವಿಲ್ಲ, ಮುಜುಗರ ಇಲ್ಲ : ವಿಜಯೇಂದ್ರ
ಬೆಂಗಳೂರು : ನನಗೆ ಯಾವುದೇ ಸಂಕೋಚ ಇಲ್ಲ ಮುಜುಗರ ಇಲ್ಲ. ನಾನು ಮುಖ್ಯಮಂತ್ರಿ ಮಗನಾಗಿ, ಪಕ್ಷದ ಕಾರ್ಯಕರ್ತನಾಗಿ ನನ್ನ ಇತಿಮಿತಿಯಲ್ಲಿ ಪಕ್ಷಕ್ಕೆ ಬಲ ತುಂಬುವ ಕೆಲಸ ಮಾಡುತ್ತಿದ್ದೇನೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ವಿಜಯೇಂದ್ರ ಅವರು ಶನಿವಾರ ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯಕ್ಕೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ದೇಶ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ.
ಎಲ್ಲಾ ಸಮಸ್ಯೆಗಳನ್ನು ಎದುರಿಸುವ ಶಕ್ತಿ ಪ್ರಧಾನಿಗಳಿಗೆ ಸಿಗಲಿ. ಯಡಿಯೂರಪ್ಪರಿಗೆ ಸಮಸ್ಯೆಗಳನ್ನು ಎದುರಿಸಿವ ಶಕ್ತಿಯನ್ನು ಸಿಗಲಿ ಎಂದು ನಮ್ಮ ಕಾರ್ಯಕರ್ತರು ಹರಕೆ ಮಾಡಿಕೊಂಡಿದ್ರು. ಆ ಹರಕೆಯನ್ನು ನಾನು ಸಲ್ಲಿಸಿದ್ದೇನೆ ಎಂದು ಹೇಳಿದರು.
ಇದೇ ವೇಳೆ ವಿಜಯೇಂದ್ರ ಸೂಪರ್ ಸಿಎಂ ವಿಚಾರ ಬಗ್ಗೆ ಮಾತನಾಡಿ, ನನ್ನ ಬಗ್ಗೆ ಹಲವು ಮಾಧ್ಯಮದಲ್ಲಿ ಚರ್ಚೆಯಾಗಿದೆ. ರಾಜ್ಯದ ಬಿಜೆಪಿ ಉಪಾಧ್ಯಕ್ಷನಾಗಿ ನನ್ನ ಜವಾಬ್ದಾರಿ ಏನು ಅಂತ ಗೊತ್ತಿದೆ. ನನಗೆ ಯಾವುದೇ ಸಂಕೋಚ ಇಲ್ಲ ಮುಜುಗರ ಇಲ್ಲ.
ನಾನು ಮುಖ್ಯಮಂತ್ರಿ ಮಗನಾಗಿ, ಪಕ್ಷದ ಕಾರ್ಯಕರ್ತನಾಗಿ ನನ್ನ ಇತಿಮಿತಿಯಲ್ಲಿ ಪಕ್ಷಕ್ಕೆ ಬಲ ತುಂಬುವ ಕೆಲಸ ಮಾಡುತ್ತಿದ್ದೇನೆ. ಇನ್ನೊಬ್ಬರಿಗೆ ಸಮಸ್ಯೆ ಮಾಡುವ ಕೆಲಸ ಮಾಡುತ್ತಿಲ್ಲ.
ಅವರು ಅನೇಕ ಬಾರಿ ನನ್ನ ಹೆಸರನ್ನ ಪ್ರಸ್ತಾಪ ಮಾಡಿದ್ದಾರೆ. ಅದ್ರ ಬಗ್ಗೆ ಬಹಳ ತಲೆ ಕೆಡಿಸಿಕೊಳ್ಳುವ ಅವಕಾಶ ಇಲ್ಲ. ರಾಷ್ಟ್ರೀಯ ನಾಯಕರು ನಿನ್ನೆ ನೋಟಿಸ್ ಜಾರಿ ಮಾಡಿದ್ದಾರೆ. ಏನು ಉತ್ತರ ಕೊಡುತ್ತಾರೆ ನೋಡೋಣ ಎಂದು ಯತ್ನಾಳ್ ಗೆ ಟಾಂಗ್ ನೀಡಿದರು.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









