ಸಾಹುಕಾರ್ ಗೆ `ಸಿಡಿ’ಮದ್ದು ಶಾಕ್..! ( ramesh-jarkiholi)
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಮತ್ತೆ ಸಿಡಿ ಸ್ಫೋಟಗೊಂಡಿದೆ. ಬೆಳಗಾವಿ ಸಾಹುಕಾರ್ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಇದು ಸದ್ಯ ರಾಜ್ಯಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಠಿ ಮಾಡಿದೆ.
ಸಾಮಾಜಿಕ ಕಾರ್ಯಕರ್ತ, ನಾಗರಿಕ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ, ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ ಮಾಡಿದ್ದಾರೆ. ಅಲ್ಲದೆ ಈ ಬಗ್ಗೆ ತನಿಖೆ ನಡೆಸಿ ಸಂತ್ರಸ್ತೆಗೆ ನ್ಯಾಯಕೊಡಿಸುವಂತೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ದೂರು ನೀಡಿದ ಬಳಿಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ಪ್ರಭಾವಿ ನಾಯಕರ ವಿರುದ್ಧ ದೂರು ನೀಡುತ್ತಿದ್ದೇನೆ. ಸಂತೃಸ್ತೆಯ ಹೆಸರು ಬಹಿರಂಗ ಪಡಿಸುವುದಿಲ್ಲ. ಸಂತ್ರಸ್ತೆಗೆ ಬೆದರಿಕೆ ಇರುವ ಕಾರಣ ಮಹಿಳೆ ಬರುವುದಿಲ್ಲ ಎಂದು ತಿಳಿಸಿದ್ದಾರೆ.
ಇನ್ನು ಈ ಸಿಡಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ರಮೇಶ್ ಜಾರಕಿಹೊಳಿ ಅಜ್ಞಾತಕ್ಕೆ ತೆರಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.










