budget : ಬಜೆಟ್ ನಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ : ಸಿಎಂ
ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ರಾಜ್ಯ ಬಜೆಟ್ ಮಂಡಿಸಲಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯ ತಿಳಿಸಿದ್ರು.
ಬಳಿಕ ಈ ಬಜೆಟ್ ನಲ್ಲಿ ಮಹಿಳೆಯರಿಗತೆ ಹೆಚ್ಚಿನ ಆದ್ಯತೆ ನೀಡಿದ್ದೇನೆ ಎಂದು ಬಿಎಸ್ ಯಡಿಯೂರಪ್ಪ ತಿಳಿಸಿದ್ರು.
ಇನ್ನು ಮಧ್ಯಾಹ್ನ 12.5ಕ್ಕೆ ಬಜೆಟ್ ಮಂಡಿಸಲಿದ್ದೇನೆ. ಅದಕ್ಕೂ ಮುನ್ನ ಸಚಿವ ಸಂಪುಟದ ಸಭೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ರು.
ಇದಕ್ಕು ಮುನ್ನ ಸಿಎಂ ಮನೆಯಿಂದ ಹೊರಬರುತ್ತಿದ್ದಂತೆ ಕೃಷಿ ಸಚಿವ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಸಿರು ಶಾಲು ಹಾಕಿದ್ರು.
ಇದಾದ ಬಳಿಕ ಅವರು ನೇರವಾಗಿ ರಾಘವೇಂದ್ರ ಮಠಕ್ಕೆ ತೆರಳಿದ್ರು. ಈ ವೇಳೆ ಅವರಿಗೆ ಕೃಷಿ ಸಚಿವ ಬಿಸಿ ಪಾಟೀಲ್, ಎಸ್ ಟಿ ಸೋಮಶೇಖರ್ ಸೇರಿದಂತೆ ಹಲವರು ಸಾಥ್ ನೀಡಿದ್ರು.