ಕೋಲಾರ kolar | ಆಕಸ್ಮಿಕ ಬೆಂಕಿ ಬಾಳೆ ತೋಟ ಸಂಪೂರ್ಣ ಭಸ್ಮ
ಕೋಲಾರ : ಆಕಸ್ಮಿಕವಾಗಿ ಬೆಂಕಿ ಬಿದ್ದು ಸುಮಾರು 5 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ತೋಪ ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ಕೋಲಾರದ ಕಾಕಿನತ್ತ ಗ್ರಾಮದಲ್ಲಿ ನಡೆದಿದೆ.
ಕಾಕಿನತ್ತ ಗ್ರಾಮದಲ್ಲಿ ಕೃಷ್ಣಪ್ಪ ಎಂಬ ರೈತ ತಮ್ಮ ಐದು ಎಕರೆ ಜಮೀನಿನಲ್ಲಿ ಬಾಳೆ ಬೆಳೆದಿದ್ದರು.
ಕಳೆದ ರಾತ್ರಿ ಕಿಡಿಗೇಡಿಗಳು ಪಕ್ಕದ ಜಮೀನಿನಲ್ಲಿದ್ದ ಹುಲ್ಲಿಗೆ ಬೆಂಕಿ ಹೊತ್ತಿಸಿದ್ದು, ಬೆಂಕಿಯ ಕೆನ್ನಾಲಿ ಬಾಳೆ ತೋಟಕ್ಕೂ ವ್ಯಾಪಿಸಿ ಬೆಳೆ ನಾಶವಾಗಿದೆ.
ಬಾಳೆ ತೋಟ ಮಾತ್ರವಲ್ಲದೆ ಬಾಳೆ ತೋಟದಲ್ಲಿ ಅಳವಡಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಡ್ರಿಪ್ ಹಾಗೂ ಸ್ಪಿಂಕ್ಲರ್ ಗಳು ಸಹ ಬೆಂಕಿಗಾಹುತಿಯಾಗಿವೆ.
ಇದರಿಂದ ರೈತ ಕೃಷ್ಣಪ್ಪ ಸಂಕಷ್ಟಕ್ಕೀಡಾಗಿದ್ದು, ಪರಿಹಾರಕ್ಕಾಗಿ ಮನವಿ ಮಾಡಿದ್ದಾರೆ.
ಇನ್ನ ವಿಷಯ ತಿಳಿದು ಸ್ಥಳಕ್ಕೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಂಜುನಾಥ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪರಿಹಾರ ನೀಡುವ ಭರವಸೆ ನೀಡಿದ್ದಾರೆ.