ಗದಗ : ಕ್ಷುಲ್ಲಕ ಕಾರಣಕ್ಕೆ ಕುತ್ತಿಗೆ ಸೀಳಿ ಕೊಲೆ murder
ಗದಗ: ಕೌಟುಂಬಿಕ ಜಗಳದ ಹಿನ್ನಲೆ ಯುವಕನೋರ್ವ ತನ್ನ ಸ್ವಂತ ಚಿಕ್ಕಪ್ಪನನ್ನೇ ಚಾಕುವಿನಿಂದ ಕುತ್ತಿಗೆಗೆ ಇರಿದು ಭರ್ಬರವಾಗಿ ಕೊಲೆ ಮಾಡಿರುವ ಘಟನೆ ಗದಗನ ಬೆಟಗೇರಿಯ ಕುರಹಟ್ಟಿ ಪೇಟೆಯಲ್ಲಿ ನಡೆದಿದೆ.
44 ವರ್ಷದ ಮಂಜುನಾಥ ಗದುಗಿನ ಕೊಲೆಯಾದ ವ್ಯಕ್ತಿಯಾಗಿದ್ದು, 23 ವರ್ಷದ ಪ್ರವೀಣ್ ಗದುಗಿನ ಕೊಲೆ ಆರೋಪಿಯಾಗಿದ್ದಾನೆ.
ಮೃತ ಮಂಜುನಾಥ್ ಗದುಗಿನ ಕೊಲೆ ಆರೋಪಿ ಪ್ರವೀಣ್ ಮನೆ ಬಳಿ ಗಲಾಟೆ ಮಾಡಿದ್ದರಂತೆ. ಇದೇ ಕಾರಣಕ್ಕೆ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ.
ಬೆಟಗೇರಿ ನಾಡ ಕಾರ್ಯಾಲಯ ಬಳಿ ಈ ಭೀಕರ ಹತ್ಯೆ ನಡೆದಿದೆ. ಜನರ ಮಧ್ಯೆಯೇ ಈ ಕೊಲೆ ನಡೆದಿದ್ದು, ಕೂಡಲೇ ಸ್ಥಳೀಯರು ಬೆಟಗೇರಿ ಪೆÇಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಗದಗನ ಬೆಟಗೇರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.