ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆರೋಗ್ಯ ಕ್ಷೇತ್ರದ ಆಮೂಲಾಗ್ರ ಬದಲಾವಣೆಗೆ ಖಾಸಗಿ ಸಹಯೋಗ :  ಡಾ.ಕೆ.ಸುಧಾಕರ್

admin by admin
March 17, 2021
in Newsbeat, State, ರಾಜ್ಯ
Dr. K. Sudhakar
Share on FacebookShare on TwitterShare on WhatsappShare on Telegram

ಆರೋಗ್ಯ ಕ್ಷೇತ್ರದ ಆಮೂಲಾಗ್ರ ಬದಲಾವಣೆಗೆ ಖಾಸಗಿ ಸಹಯೋಗ :  ಡಾ.ಕೆ.ಸುಧಾಕರ್

 ಬೆಂಗಳೂರು : ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯ ಹೆಚ್ಚಿಸುವುದು ಸೇರಿದಂತೆ ಸೇವೆಯಲ್ಲಿ ಆಮೂಲಾಗ್ರ ಸುಧಾರಣೆ ತರಲು ಖಾಸಗಿ ಸಹಭಾಗಿತ್ವದ ವ್ಯವಸ್ಥೆ ತರಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆಯಡಿ (ಸಿಎಸ್ ಆರ್) ಕಾರ್ಯಕ್ರಮ ರೂಪಿಸಿ ಅನುಷ್ಠಾನಗೊಳಿಸಲು ಸಿಎಸ್ ಆರ್ ಸಮಿತಿ ರಚಿಸಿದೆ. ವಿಧಾನಸೌಧದಲ್ಲಿ, ಸಮಿತಿಯ ಮುಖ್ಯಸ್ಥೆಯಾಗಿ ನೇಮಕಗೊಂಡ ಗೀತಾಂಜಲಿ ಕಿರ್ಲೋಸ್ಕರ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ವಾಗತ ಕೋರಿದರು.

ಈ ವೇಳೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆ ತರಲು, ಕೋವಿಡ್ ಬಂದ ಹಂತದಲ್ಲೇ ಆಮೂಲಾಗ್ರ ಬದಲಾವಣೆ ತಂದು ಮೂಲಸೌಕರ್ಯ ಹೆಚ್ಚಿಸಲು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆಯಡಿ ಅಭಿವೃದ್ಧಿ ತರಲಾಗುತ್ತಿದೆ. ನಮ್ಮಲ್ಲಿ ಅನೇಕ ಕಂಪನಿಗಳಿದ್ದು, 2014-15 ನೇ ಸಾಲಿನಲ್ಲಿ ಈ ಕಂಪನಿಗಳು ಸಿಎಸ್ ಆರ್ ಗೆ 4-5 ಸಾವಿರ ಕೋಟಿ ರೂ. ಹೂಡಿಕೆ ಮಾಡುತ್ತಿದ್ದವು. ಕಳೆದ ವರ್ಷ ಇದು ದುಪ್ಪಟ್ಟಾಗಿದೆ. ಇದರಿಂದಾಗಿ ಸಾಮಾಜಿಕ ಚಟುವಟಿಕೆಗೆ ಒತ್ತು ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಆರೋಗ್ಯ ಕ್ಷೇತ್ರ ಸಿಎಸ್ ಆರ್ ನಿಂದ ಅಭಿವೃದ್ಧಿಯಾಗಬೇಕು. ಮುಖ್ಯವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೇರಬೇಕು ಎಂಬ ಉದ್ದೇಶವನ್ನು ಕಂಪನಿಗಳಿಗೆ ತಿಳಿಸಲಾಗಿದೆ. ಈ ಬಗ್ಗೆ ಗೀತಾಂಜಲಿ ಕಿರ್ಲೋಸ್ಕರ್ ಅವರನ್ನು ಕೇಳಿದಾಗ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

ಅನೇಕ ಕಂಪನಿಗಳು ಜನೋಪಕಾರಿ ಕೆಲಸಗಳನ್ನು ಮಾಡುತ್ತಿವೆ. ಆರೋಗ್ಯ ಕ್ಷೇತ್ರಕ್ಕೆ 25% ರಷ್ಟು ಖರ್ಚು ಮಾಡಬೇಕು ಎಂದು ಕೇಂದ್ರ ಸರ್ಕಾರ ಕಾನೂನಿನಲ್ಲಿ ತಿದ್ದುಪಡಿ ತಂದಿದೆ. ಸಮುದಾಯ ಆರೋಗ್ಯ ಕೇಂದ್ರ, ಪಿಎಚ್ ಸಿಗಳನ್ನು ಅಭಿವೃದ್ಧಿಪಡಿಸಬೇಕಿದೆ. ಆರೋಗ್ಯ ಮಾತ್ರವಲ್ಲದೆ, ಸ್ವಚ್ಛತೆ ಮೊದಲಾದ ಕೆಲಸಗಳಿಗೆ ಹಣ ಖರ್ಚು ಮಾಡಬಹುದು. ಈ ಹೊಸ ಸಮಿತಿಯು ಒಂದು ತಜ್ಞರ ತಂಡವಾಗಿ ಸರ್ಕಾರೊಂದಿಗೆ ಕಾರ್ಯನಿರ್ವಹಿಸಲಿದೆ. ಈಗಿನ ಸ್ಥಿತಿಯಲ್ಲಿ ಸಿಎಸ್ ಆರ್ ಹಣ ಅಗತ್ಯ ಎಂದರು.

ರಾಜ್ಯದಲ್ಲಿ 2,500 ಪಿಎಚ್ ಸಿಗಳಿದ್ದು, ಇದನ್ನು ಮೇಲ್ದರ್ಜೆಗೇರಿಸಲು ಸಾವಿರಾರು ಕೋಟಿ ರೂ. ಬೇಕು. ಇದಕ್ಕಾಗಿ ಸಿಎಸ್ ಆರ್ ಅಗತ್ಯ. 40% ಐಟಿ ರಫ್ತು ಕರ್ನಾಟಕದಿಂದಲೇ ಆಗುತ್ತಿದೆ. ಇದಲ್ಲದೆ, ಬೇರೆ ಕ್ಷೇತ್ರದ ಕಂಪನಿಗಳೂ ಇವೆ. ಈ ಎಲ್ಲ ಕಂಪನಿಗಳೊಂದಿಗೆ ಈ ಸಮಿತಿ ಮಾತುಕತೆ ನಡೆಸಲಿದೆ. ಇದು ಹೆಚ್ಚು ಫಲ ಕೊಡಲಿದೆ ಎಂದರು.

ಮೊದಲ ಹಂತದಲ್ಲಿ ಗ್ರಾಮೀಣ ಪ್ರದೇಶಗಳ ಪಿಎಚ್ ಸಿಗಳ ಅಭಿವೃದ್ಧಿಗೆ ಸಂಪೂರ್ಣ ಒತ್ತು ನೀಡಲಾಗಿದೆ. ಇಂತಹ ಸುಮಾರು 900 ಪಿಎಚ್ ಸಿಗಳಿವೆ ಎಂದರು.

ಪ್ರಧಾನಿ ಸಭೆ

ಪ್ರಧಾನಿ ನರೇಂದ್ರ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ಸಭೆಯಲ್ಲಿ, ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿ ವತಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಲಾಯಿತು.

ರಾಜ್ಯದಲ್ಲಿ ಈ ವರೆಗೆ 9.61 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, 12 ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ 2020ರ ಆಗಸ್ಟ್ ನಿಂದ ಅಕ್ಟೋಬರ್ ವರೆಗೆ ಕೋವಿಡ್ 19 ಸೋಂಕು ತೀವ್ರಗೊಂಡಿತ್ತು. ನವೆಂಬರ್ ನಿಂದ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗತೊಡಗಿತು. ಡಿಸೆಂಬರ್ ನಲ್ಲಿ ಇನ್ನೂ ಹೆಚ್ಚಿನ ಇಳಿಕೆಯಾಯಿತು.

ಆದರೆ ಕಳೆದ 10 ದಿನಗಳಲ್ಲಿ ಕೋವಿಡ್ 19 ಪ್ರಕರಣಗಳು ಮತ್ತೆ ಏರುಗತಿಯಲ್ಲಿವೆ. ಪಾಸಿಟಿವಿಟಿ ರೇಟ್ ಮಾರ್ಚ್ 15 ರಂದು ಶೇ. 1.65ರಷ್ಟು ವರದಿಯಾಗಿದೆ.

ಪ್ರಕರಣಗಳ ಸಂಖ್ಯೆಯು ಬೆಂಗಳೂರು ಹಾಗೂ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳ ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಹೆಚ್ಚಾಗಿದೆ.

ಪ್ರಕರಣಗಳು ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಪರೀಕ್ಷಾ ಪ್ರಮಾಣವನ್ನು ಸಹ ಹೆಚ್ಚಿಸಲಾಗಿದೆ.

ಮಾರ್ಚ್ 15 ರಂದು ತಜ್ಞರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗಿದೆ:
ಕೋವಿಡ್ 19 ರ ವಿರುದ್ಧ ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಜಾಗೃತಿ ಅಭಿಯಾನ ಹಮ್ಮಿಕೊಳ್ಳುವುದು.

ಮಾಸ್ಕ್ ಧಾರಣೆ ಕಡ್ಡಾಯಗೊಳಿಸುವುದು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜನಸಂದಣಿಯಾಗದಂತೆ ಮುನ್ನೆಚ್ಚರಿಕೆ ವಹಿಸುವ ಕುರಿತು ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮದುವೆ ಮತ್ತು ಇತರ ಸಮಾರಂಭಗಳಲ್ಲಿ ಮಾರ್ಗಸೂಚಿಯಲ್ಲಿ ನಿಗದಿಪಡಿಸಿದ್ದಕ್ಕಿಂತ ಹೆಚ್ಚಿನ ಜನ ಸೇರದಂತೆ ಮುನ್ನೆಚ್ಚರಿಕೆ ವಹಿಸುವುದು.

Dr. K. Sudhakar

ಕೋವಿಡ್ ಸೋಂಕಿತರಿಗಾಗಿ ಹೆಚ್ಚುವರಿ ಹಾಸಿಗೆಗಳು, ಐಸಿಯು ಗಳನ್ನು ಮೀಸಲಿಡಲು ಕ್ರಮ ಕೈಗೊಳ್ಳಲಾಗುತ್ತಿದೆ.

ಬೆಂಗಳೂರಿನಲ್ಲಿ 3 ಕೋವಿಡ್ ಕೇರ್ ಸೆಂಟರ್ ಗಳನ್ನು ಸ್ಥಾಪಿಸಲು ನಿರ್ಧಾರ.
ಇದರೊಂದಿಗೆ ರಾಜ್ಯದಲ್ಲಿರುವ 3500 ಕ್ಕೂ ಹೆಚ್ಚಿನ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲಾಗುವುದು.

ಪ್ರತಿ ದಿನ 3 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ.
ಭಾರತ ಸರ್ಕಾರದ ನೀತಿಯಂತೆ ಆರೋಗ್ಯ ಕೇಂದ್ರಗಳಲ್ಲಿ ಮಾತ್ರ ಲಸಿಕೆ ನೀಡಬೇಕಾಗಿದೆ. ವೃದ್ಧಾಶ್ರಮಗಳಲ್ಲಿ, ಅಪಾರ್ಟ್ ಮೆಂಟ್ ಗಳಲ್ಲಿ ಹಾಗೂ ದುರ್ಗಮ ಪ್ರದೇಶಗಳಲ್ಲಿ ಲಸಿಕೆ ಅಭಿಯಾನ ಕೈಗೊಳ್ಳಲು ಅನುಮತಿ ಕೋರಲಾಯಿತು.

ಇಂತಹ ಸ್ಥಳಗಳಲ್ಲಿ ಲಸಿಕೆ ಕೇಂದ್ರದಲ್ಲಿ ಒದಗಿಸುವ ಎಲ್ಲ ಸೌಲಭ್ಯಗಳು, ಅಂಬ್ಯುಲೆನ್ಸ್ ಹಾಗೂ ಸಾಕಷ್ಟು ಸಂಖ್ಯೆಯ ಆರೋಗ್ಯ ಕಾರ್ಯಕರ್ತರನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗುವುದು ಎಂಬ ಅಂಶವನ್ನು ಮಾನ್ಯ ಪ್ರಧಾನಿಯವರ ಗಮನಕ್ಕೆ ತರಲಾಯಿತು.

ರಾಜ್ಯದಲ್ಲಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಲಾಗುತ್ತಿದ್ದು, ಪ್ರಧಾನಿಯವರ ಮಾರ್ಗದರ್ಶನದಂತೆ ಕ್ರಮ ವಹಿಸಲಾಗುವದು.

Tags: bangaloreCorona VirusSudakar
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram