ಬಸವಕಲ್ಯಾಣ ಚುನಾವಣೆ : ಜೆಡಿಎಸ್ ಅಭ್ಯರ್ಥಿ ಘೋಷಣೆ
ಬೀದರ್ : ಬಸವಕಲ್ಯಾಣ ಚುನಾವಣೆ ಹಿನ್ನೆಲೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಮ್ಮ ಪಕ್ಷದ ಅಭ್ಯರ್ಥಿಯನ್ನ ಘೋಷಣೆ ಮಾಡಿದ್ದಾರೆ.
ಬಸವಕಲ್ಯಾಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ಬಸವಕಲ್ಯಾಣದಲ್ಕಿ ಜೆಡಿಎಸ್ ಏಳು ಬಾರಿ ಗೆದ್ದಿದೆ. ಸೈಯದ್ ಎಸ್ರಾಬ್ ವಲಿ ಖಾದ್ರಿ ಅವರನ್ನು ಬಸವಕಲ್ಯಾಣದ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದೇವೆ. ಇವರು ಈ ಮೊದಲು ಕಾಂಗ್ರೆಸ್ ನಲ್ಲಿದ್ದವರು. ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಹಾಗು ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಾಳೆ ಅಭ್ಯರ್ಥಿ ಘೋಷಣೆ ಮಾಡುತ್ತೇವೆ ಎಂದು ತಿಳಿಸದರು.
ಈ ಹಿಂದೆ ಉಪಚುನಾವಣೆಗೆ ಸ್ಪರ್ಧಿಸಲ್ಲ ಎಂಬ ಹೇಳಿಕೆ ನೀಡಿದ್ದ ಬಗ್ಗೆ ಪ್ರತಿಕ್ರಿಯಿಸಿ, ಅಭ್ಯರ್ಥಿಗಳನ್ನು ಹಾಕುವುದಿಲ್ಲ ಎಂದು ಘೋಷಣೆ ಮಾಡಿದ್ದು ನಿಜ. ಆದರೆ ಕಾರ್ಯಕರ್ತರನ್ನು ಒಗ್ಗಟ್ಟಾಗಿಡಬೇಕು. ಮುಂದಿನ ಸಾರ್ವತ್ರಿಕ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸಬೇಕೆಂಬ ಕಾರಣಕ್ಕೆ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತೀರ್ಮಾನಿಸಿದ್ದೇವೆ.
ರಾಯಚೂರು ಜಿಲ್ಲೆಯಲ್ಲಿ ಐದರಿಂದ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲಲು ಜೆಡಿಎಸ್ ಗೆ ಸಾಮಥ್ರ್ಯವಿದೆ. ಮುಸ್ಲಿಂ ಸಮಾಜ ನಮ್ಮ ಪಕ್ಷದ ಬಗ್ಗೆ ಬೇರೆ ರೀತಿಯ ಭಾವನೆ ಮೂಡಿಸಿದ್ದಾರೆ. ಹಾಗಾಗಿಯೇ ಇಡೀ ರಾಜ್ಯಕ್ಕೆ ಒಂದು ಸಂದೇಶ ರವಾನೆಯಾಗಬೇಕು ಎಂಬ ಕಾರಣಕ್ಕೆ ಬಸವಕಲ್ಯಾಣ ಕ್ಷೇತ್ರವನ್ನು ಸವಾಲಾಗಿ ಸ್ವೀಕರಿಸಿ ಮುಸ್ಲೀಂ ಅಭ್ಯರ್ಥಿಯನ್ನೇ ಕಣಕ್ಕಿಳಿಸಿದ್ದೇವೆ ಎಂದು ತಿಳಿಸಿದರು.










