ನಾಲ್ಕನೇ ಟಿ20 ಪಂದ್ಯ : ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಇಂಗ್ಲೆಂಡ್
ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ದುಕೊಂಡಿದೆ.
ಈಗಾಗಲೇ ಐದು ಪಂದ್ಯಗಳ ಟಿ-ಟ್ವೆಂಟಿ ಸರಣಿಯಲ್ಲಿ ಭಾರತ 1-2ರಿಂದ ಹಿನ್ನಡೆಯಲ್ಲಿದೆ. ಹೀಗಾಗಿ ಭಾರತ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಇನ್ನೊಂದೆಡೆ ಇಂಗ್ಲೆಂಡ್ ತಂಡ ಸರಣಿ ಗೆಲ್ಲುವ ತವಕದಲ್ಲಿದೆ. ಟೆಸ್ಟ್ ಸರಣಿಯ ಸೋಲಿಗೆ ಸೇಡು ತೀರಿಸಿಕೊಳ್ಳಲು ಇಂಗ್ಲೆಂಡ್ ಗೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ.
ಇನ್ನು ಟೀಮ್ ಇಂಡಿಯಾದಲ್ಲಿ ಬದಲಾವಣೆ ಮಾಡಲಾಗಿದ್ದು, ಇಶಾನ್ ಕಿಶಾನ್ ಅವರನ್ನ ಕೈ ಬಿಟ್ಟು, ಸೂರ್ಯಕುಮಾರ್ ಯಾದವ್ ಗೆ ಚಾನ್ಸ್ ನೀಡಲಾಗಿದೆ. ಯಜುವೆಂದ್ರ ಚಹಾಲ್ ಬದಲಿಗೆ ರಾಹುಲ್ ಚಹಾರ್ ಗೆ ಕಣಕ್ಕಿಳಿದಿದ್ದಾರೆ.
ತಂಡಗಳು ಹೀಗಿವೆ :
ಭಾರತ
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಕೆ.ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಶರ್ದುಲ್ ಠಾಕೂರ್, ರಾಹುಲ್ ಚಾಹರ್.
ಇಂಗ್ಲೆಂಡ್ ತಂಡ
ಇಯಾನ್ ಮೊರ್ಗಾನ್ (ನಾಯಕ) ಜೋಸ್ ಬಟ್ಲರ್, ಜೇಸನ್ ರಾಯ್, ಡೇವಿಡ್ ಮಲಾನ್, ಜೋನಿ ಬೇರ್ ಸ್ಟೋವ್, ಬೆನ್ ಸ್ಟೋಕ್ಸ್, ಸ್ಯಾಮ್ ಕುರನ್, ಕ್ರಿಸ್ ಜೋರ್ಡಾನ್, ಜೋಫ್ರಾ ಆರ್ಚೆರ್, ಆದೀಲ್ ರಶೀದ್, ಮಾರ್ಕ್ ವುಡ್.









