ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ : ಬಿಜೆಪಿ ಶಾಸಕರಲ್ಲಿ ಭಿನ್ನಮತ ಇರೋದು ನಿಜ ಅಂದ್ರು ತಿಪ್ಪಾರೆಡ್ಡಿ
ಚಿತ್ರದುರ್ಗ : ಬೆಂಗಳೂರಿನ ಯಶವಂತಪುರದ ಅಪಾರ್ಟ್ ಮೆಂಟ್ ನಲ್ಲಿ ನಡೆದ ರಹಸ್ಯ ಸಭೆ ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಸಿಎಂ ಬಿಎಸ್ ವೈ ಅವರನ್ನು ಕೆಳಗಿಳಿಸಲು ಈ ಸಭೆಯಲ್ಲಿ ರಣತಂತ್ರ ರೂಪಿಸಲಾಗಿದೆ ಎಂದು ಹೇಳಲಾಗುತ್ತಿದ್ದು, ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿರುವುದನ್ನು ಸ್ವತಃ ಪಕ್ಷದ ಶಾಸಕರೇ ಒಪ್ಪಿಕೊಂಡಿದ್ದಾರೆ.
ಬಿಜೆಪಿ ಶಾಸಕರಲ್ಲಿ ಬೇಸರ, ಭಿನ್ನಮತ ಇರುವುದು ನಿಜ. ಶಾಸಕರಿಗೆ ಸರ್ಕಾರದ ಸ್ಪಂದನೆ ಇಲ್ಲ ಎಂಬ ಭಾವನೆ ಇದೆ. ಅಲ್ಲದೆ ಮುಖ್ಯಮಂತ್ರಿಗಳಿಂದ ಹಿರಿಯ ಶಾಸಕರ ಕಡೆಗಣನೆಯಾಗುತ್ತಿದೆ ಎಂದುView Post ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಕಿಡಿಕಾರಿದರು. ‘ಮೂರು ವರ್ಷ ಅಧಿಕಾರದಲ್ಲಿರುತ್ತೇವೆ ಎಂದು ಮನಸ್ಸಿಗೆ ಬಂದಂತೆ ಆಡಳಿತ ನಡೆಸಲಾಗುತ್ತಿದೆ. ಅವರಿಗೆ ಬೇಕಾದವರಿಗೆ ಮಂತ್ರಿ ಸ್ಥಾನಮಾನ ನೀಡುತ್ತಿದ್ದಾರೆ. ಸಾಮಾಜಿಕ ನ್ಯಾಯದ ಪರಿಕಲ್ಪನೆ ಇಲ್ಲದ ಮಂತ್ರಿಮಂಡಲ ರಚನೆ ಮಾಡಲಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಇದೇ ವೇಳೆ ಅನೇಕ ಸಮಾಜದ ಶಾಸಕರಿಗೆ ಸ್ಥಾನ ತಪ್ಪಿಸಿ ಎಷ್ಟು ದಿನ ಸರ್ಕಾರ ನಡೆಸಲು ಸಾಧ್ಯ ಎಂದು ಪ್ರಶ್ನಿಸಿದ ತಿಪ್ಪಾರೆಡ್ಡಿ, ಕೆಲವರು ಮೂರು ವರ್ಷ ಅಧಿಕಾರ ನಡೆಸಿ ಹೋಗಬಹುದು. ನಮ್ಮದು ಮುಗೀತು ಎಂದು ಕೊಂಡಿದ್ದಾರೆ ಎಂದು ಸಿಎಂ ವಿರುದ್ಧ ಮಾತನಾಡಿದರು.
ಇನ್ನು ಚಿತ್ರದುರ್ಗ ಜಿಲ್ಲೆಗೆ ಹೊರಗಿನವರೇ ಉಸ್ತುವಾರಿ ಸಚಿವರಾಗುವುದರಿಂದ ಅಭಿವೃದ್ಧಿ ಕಡೆಗಣನೆ ಮಾಡಲಾಗುತ್ತಿದೆ. ಕಳೆದ ಬಜೆಟ್ ನಲ್ಲೂ ಜಿಲ್ಲೆಗೆ 1 ರೂ. ಪ್ರೋಗ್ರಾಂ ಇದೆಯಾ ಎಂದು ತಿಪ್ಪಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ








