ನಟ ರಾಘವೇಂದ್ರ ರಾಜ್ ಕುಮಾರ್ ಆರೋಗ್ಯದಲ್ಲಿ ಏರು ಪೇರು – ಆಸ್ಪತ್ರೆಗೆ ದಾಖಲು
ಬೆಂಗಳೂರು, ಫೆಬ್ರವರಿ16 : ನಟ ರಾಘವೇಂದ್ರ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರು ಪೇರು ಆಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿನಿಮಾ ಶೂಟಿಂಗ್ ವೇಳೆ ರಾಘವೇಂದ್ರ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರು ಪೇರು ಆಗಿದ್ದು, ಕೂಡಲೇ ಅವರನ್ನು ನಗರದ ರಾಜಾಜಿನಗರ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ರಾಘವೇಂದ್ರ ರಾಜ್ ಕುಮಾರ್ ಅವರು ಇಂದು ಬೆಳಕು ಸಿನಿಮಾದ ಶೂಟಿಂಗ್ ಗೆ ಹಾಜರಾಗಿದ್ದ ಸಂದರ್ಭದಲ್ಲಿ ಅವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಯಶವಂತಪುರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಅವರಿಗೆ ಯಾವುದೇ ಗಂಭೀರ ಸಮಸ್ಯೆ ಇಲ್ಲ ಮತ್ತು ತಡರಾತ್ರಿ ಅಥವಾ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.








