ಬಹುಭಾಷಾ ನಟಿ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ತಮನ್ನಾ ದಾಖಲಾಗಿದ್ದಾರೆ.
ಹೈದ್ರಾಬಾದ್ ನಲ್ಲಿ ವೆಬ್ ಸೀರಿಸ್ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದ ತಮನ್ನಾಗೆ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿತ್ತು.

ಬಳಿಕ ಪರೀಕ್ಷೆ ಮಾಡಿಸಿಕೊಂಡ ತಮನ್ನಾಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಸದ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ತಮನ್ನಾ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಸಿದ್ದಾರೆ.
ಸದ್ಯ ನಟಿ ತಮನ್ನಾ ಅನೇಕ ಚಿತ್ರಗಳಲ್ಲಿ ಬ್ಯುಸಿಯಿದ್ದು, ಗುಣಮುಖರಾಗಿ ಬಂದ ಕೂಡಲೇ ಮತ್ತೆ ಕೆಲಸ ಮುಂದುವರೆಸಲಿದ್ದಾರೆ.

ಬಾಲಿವುಡ್ ನ ಸೂಪರ್ ಹಿಟ್ ಅಂಧಾಧುನ್ ಸಿನಿಮಾದ ತೆಲುಗು ರಿಮೇಕ್ ನಲ್ಲಿಯೂ ತಮನ್ನಾ ಕಾಣಿಸಿಕೊಳ್ಳುತ್ತಿದ್ದಾರೆ.








