ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆಯ ( Bihar Election ) ಮೊದಲ ಹಂತದ ಮತದಾನ ಅಕ್ಟೋಬರ್ 28 ರಂದು ನಡೆಯಲಿದೆ. ಮತ್ತೊಮ್ಮೆ ಅಧಿಕಾರಕ್ಕೇರಲು ನಿತೀಶ್ ಕುಮಾರ್ ಭಾರಿ ಕಸರತ್ತುಗಳನ್ನು ನಡೆಸುತ್ತಿದ್ದಾರೆ.
ಇತ್ತ ಕಾಂಗ್ರೆಸ್, ಆರ್ ಜೆಡಿ ಮೈತ್ರಿಕೂಟ, ಎನ್ ಡಿಎ ಮೈತ್ರಿ ಕೂಟಕ್ಕೆ ಟಕ್ಕರ್ ಕೊಡಲು ನಾನಾ ತಂತ್ರಗಳನ್ನು ರೂಪಿಸಿದೆ. ಈ ಮಧ್ಯೆ ಚುನಾವಣಾ ಪೂರ್ವ ನಡೆಸಿದ ಸಮೀಕ್ಷೆ ಹೊರಬಿದ್ದಿದ್ದು, ಎನ್ ಡಿಎ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು ಸಾಧಿಸಿಲಿದೆ ಎಂದು ಎಬಿಪಿ-ಸಿವೋಟರ್ ( C-Voter Survey) ನಡೆಸಿದ ಸಮೀಕ್ಷೆ ತಿಳಿಸಿದೆ.
ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷಕ್ಕೆ ಬಿಜೆಪಿ ಸಾಥ್ ನೀಡಿದ್ದು, ಬಿಜೆಪಿ ಜೆಡಿಯು ಪಕ್ಷಗಳು ಸಮನಾಗಿ ಸೀಟು ಹಂಚಿಕೊಂಡು ಅಖಾಡಕ್ಕಿಳಿದಿವೆ.
ಇದನ್ನೂ ಓದಿ : ಇದು ಜನಪ್ರತಿನಿಧಿಗಳ ಸರ್ಕಾರವೇ ಅಲ್ಲ : ಸಿದ್ದರಾಮಯ್ಯ ವಾಗ್ದಾಳಿ
243 ವಿಧಾನಸಭಾ ಸ್ಥಾನಗಳ ಪೈಕಿ ಈ ಮೈತ್ರಿಕೂಟಕ್ಕೆ ಜನರು ಜೈ ಎನ್ನಲಿದ್ದು, 135-159 ಸೀಟುಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಸಮೀಕ್ಷೆ ತಿಳಿಸಿದೆ.
ಇನ್ನು 243 ವಿಧಾನಸಭಾ ಸ್ಥಾನಗಳ ಪೈಕಿ, ಆರ್ ಜೆಡಿ, ಕಾಂಗ್ರೆಸ್ ಮತ್ತು ಇತರೆ ಪಕ್ಷಗಳ ಮಹಾಮೈತ್ರಿ 77-98 ಸ್ಥಾನಗಳನ್ನು ಪಡೆಯುವ ಮೂಲಕ ಅಧಿಕಾರದಿಂದ ದೂರ ಉಳಿಯಲಿದೆ ಎಬಿಪಿ-ಸಿವೋಟರ್ ಸಮೀಕ್ಷೆ ಭವಿಷ್ಯ ನುಡಿದಿದೆ.
ಎಬಿಪಿ-ಸಿವೋಟರ್ ಸಮೀಕ್ಷೆ ಪ್ರಕಾರ, ಎನ್ ಡಿಎ ಮೈತ್ರಿಕೂಟ ಶೇ.43, ಕಾಂಗ್ರೆಸ್ ಮಹಾಮೈತ್ರಿಕೂಟ ಶೇ.35, ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ ಶೇ.4 ರಷ್ಟು, ಇತರರು ಶೇ.18ರಷ್ಟು ಮತಗಳನ್ನು ಗಳಿಸಲಿವೆ.
ಅದರಲ್ಲೂ ಈ ಚುನಾವಣೆಯಲ್ಲಿ ಬಿಜೆಪಿ 73 ರಿಂದ 81 ಸ್ಥಾನಗಳನ್ನು ಪಡೆಯುವ ಮೂಲಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದೆ ಎಬಿಪಿ-ಸಿವೋಟರ್ ಸಮೀಕ್ಷೆ ತಿಳಿಸಿದೆ.
ಇದನ್ನೂ ಓದಿ : ಪ್ರೀತಿ ವಿಶ್ವಾಸವನ್ನು ಹಣ, ಅಧಿಕಾರದ ಆಸೆಗೆ ಮಾರಿಕೊಳ್ಳೋಲ್ಲ: ಕುಸುಮಾ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel