ಬೆಂಗಳೂರು: ಕರ್ನಾಟಕದಲ್ಲಿ ಗ್ರಾಮ ಪಂಚಾಯತ್‍ಗಳಲ್ಲಿ ಬಿಜೆಪಿ ಸಾಧಿಸಿದ ಗೆಲುವಿಗೆ ದೇಶದ ಅಭಿವೃದ್ಧಿಯ ನೇತೃತ್ವ ವಹಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅತ್ಯುತ್ತಮ ಕಾರ್ಯಕ್ರಮಗಳನ್ನು ನೀಡುತ್ತಿದ್ದಾರೆ. ಮತ್ತೊಂದೆಡೆ ಸರ್ವರನ್ನು ಜೊತೆಗೊಯ್ಯುವ ಮಹತ್ವದ ಕಾರ್ಯವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ವಿಶ್ಲೇಷಿಸಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಬೆಂಗಳೂರಿನಲ್ಲಿ ನಡೆದ ಬಿಜೆಪಿಯ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅರುಣ್ ಸಿಂಗ್, ಗ್ರಾಮ ಪಂಚಾಯತ್‍ಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಗೆಲುವಿನ ಪ್ರಮಾಣ ಕುಸಿದಿದೆ. ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಇದಕ್ಕಾಗಿ ಪಕ್ಷದ ವತಿಯಿಂದ ಯಡಿಯೂರಪ್ಪ, ನಳಿನ್ ಕುಮಾರ್ ಮತ್ತು ಕಾರ್ಯಕರ್ತರನ್ನು ಅಭಿನಂದಿಸುವುದಾಗಿ ತಿಳಿಸಿದರು.

ಭಾರತೀಯ ಜನತಾ ಪಕ್ಷವು ಜನರ ಸೇವೆಗೆ ಬದ್ಧವಾದ ಪಕ್ಷ. ಇತರ ಪಕ್ಷಗಳಂತಲ್ಲ. “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಧ್ಯೇಯವಾಕ್ಯದೊಂದಿಗೆ ಅದು ಕಾರ್ಯ ನಿರ್ವಹಿಸುತ್ತದೆ. ಬಿಜೆಪಿ ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳಲ್ಲೂ ತನ್ನ ಗೆಲುವಿನ ಓಟವನ್ನು ಮುಂದುವರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಗ್ರಾಮ ಪಂಚಾಯತ್‍ಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ. ಅದರ ಸದುಪಯೋಗ ಆಗಬೇಕು, ದುರುಪಯೋಗ ಆಗದಿರಲಿ. ಯುವಕರು ಮತ್ತು ಮಹಿಳೆಯರು ಮೋರ್ಚಾಗಳನ್ನು ಬಲಪಡಿಸಬೇಕು ಎಂದು ಮನವಿ ಮಾಡಿದರು.

ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳನ್ನು ಬಡವರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಇತ್ತೀಚೆಗೆ ನಡೆದ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಗೆದ್ದಿದೆ. ಮುಂದಿನ ಚುನಾವಣೆಗಳಲ್ಲೂ ನಾವು ಅಭೂತಪೂರ್ವ ಗೆಲುವು ಸಾಧಿಸಬೇಕು. ವಿಧಾನಸಭಾ ಚುನಾವಣೆಯಲ್ಲೂ 140 ರಿಂದ 150 ಸ್ಥಾನಗಳನ್ನು ಗೆಲ್ಲುವ ಪ್ರತಿಜ್ಞೆ ನಮ್ಮದಾಗಲಿ ಎಂದು ತಿಳಿಸಿದರು.
ಸಾಧನೆ ಮಾತನಾಡಬೇಕು. ಮಾತೇ ಸಾಧನೆ ಆಗಬಾರದು. ಕರ್ನಾಟಕವನ್ನು ಅಭಿವೃದ್ಧಿ ಹೊಂದಿದ ನಾಡಾಗಿ ಪರಿವವರ್ತಿಸುವ ನಿರಂತರ ಪ್ರಯತ್ನ ನಮ್ಮದಾಗಲಿ. ಸ್ವಾರ್ಥರಹಿತ ಚಿಂತನೆಯ ಆರೆಸ್ಸೆಸ್ ಕಾರ್ಯಕರ್ತರು ನಮಗೆ ಮಾದರಿ ಆಗಲಿ ಎಂದು ಆಶಿಸಿದರು.
ಎಲ್ಲರಿಗೂ ಮನೆ ನಿರ್ಮಿಸಿ ಕೊಡುವುದು ಮತ್ತು ಮೂಲಸೌಕರ್ಯ ಕಲ್ಪಿಸುವ ಆಶಯ ಈಡೇರಲಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಮಾತನಾಡಿ, ಗ್ರಾಮ ಪಂಚಾಯತ್‍ಗಳಲ್ಲಿ 45 ಸಾವಿರ ಜನ ಬಿಜೆಪಿ ಬೆಂಬಲಿತರು ಆಯ್ಕೆಯಾಗಿದ್ದಾರೆ. ಗ್ರಾಮ ಸ್ವರಾಜ್ಯ ಪರಿಕಲ್ಪನೆಯಡಿ ಮೋದಿ ಮತ್ತು ಯಡಿಯೂರಪ್ಪ ಅವರ ಅತ್ಯುತ್ತಮ ಕಾರ್ಯವೈಖರಿಯೇ ಇದಕ್ಕೆ ಕಾರಣ ಎಂದರು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಕಾಂಗ್ರೆಸ್‍ಗೆ ಗೋಮಾತೆಯ ಶಾಪ ತಟ್ಟಿದೆ. ಹಸು ಮತ್ತು ಕರುವಿನ ಚಿಹ್ನೆಯಡಿ ಅಧಿಕಾರ ಪಡೆದಿದ್ದ ಕಾಂಗ್ರೆಸ್ಸಿಗರು ಗೋಹಂತಕರ ಪರವಾಗಿ ನಿಂತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಗೋಮಾಂಸ ತಿನ್ನುವುದಾಗಿ ಹೇಳುತ್ತಿದ್ದಾರೆ ಎಂದು ಟೀಕಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








