ADVERTISEMENT
Saturday, July 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಂಪುಟ ಸರ್ಕಸ್ಸೋ..ನಾಯಕತ್ವ ಬದಲಾವಣೆಯೋ; ದಿಲ್ಲಿಯಿಂದ ಪಟ್ಟಿ ಬರಬೇಕು ಎಂದಿದ್ದೇಕೆ ಬಿಎಸ್‍ವೈ..!

Namratha Rao by Namratha Rao
November 19, 2020
in Newsbeat, Politics, ರಾಜಕೀಯ
Former CM B S Yediyurappa-travelled-delhi saaksha tv

Former CM B S Yediyurappa-travelled-delhi saaksha tv

Share on FacebookShare on TwitterShare on WhatsappShare on Telegram

bs yadiyurappa

ಸಂಪುಟ ಸರ್ಕಸ್ಸೋ..ನಾಯಕತ್ವ ಬದಲಾವಣೆಯೋ; ದಿಲ್ಲಿಯಿಂದ ಪಟ್ಟಿ ಬರಬೇಕು ಎಂದಿದ್ದೇಕೆ ಬಿಎಸ್‍ವೈ..!

Related posts

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

July 18, 2026
ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

July 18, 2026

ಬೆಂಗಳೂರು: ರಾಜ್ಯ ಸಚಿವ ವಿಸ್ತರಣೆ ಅಥವಾ ಪುನಾರಚನೆಗೆ ಕೈಹಾಕಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಹೈಕಮಾಂಡ್ ಕೊಡುವ ಗ್ರೀನ್ ಸಿಗ್ನಲ್ ಹಗೂ ಪಟ್ಟಿಗಾಗಿ ಎದುರು ನೋಡುತ್ತಿದ್ದಾರೆ. ನಿನ್ನೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ ಮಾಡಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಸಂಬಂಧ ಸಂಭವನೀಯರ ಪಟ್ಟಿ ಕೊಟ್ಟು ಬೆಂಗಳೂರಿಗೆ ವಾಪಸ್ಸಾಗಿರುವ ಸಿಎಂ ಯಡಿಯೂರಪ್ಪ, ದೆಹಲಿಯಿಂದ ಪಟ್ಟಿ ಬಂದ ಬಳಿಕವೇ ಮುಂದಿನ ಪ್ರಕ್ರಿಯೆ ಪ್ರಾರಂಭಿಸಬಹುದು ಎಂದು ತಿಳಿಸಿದ್ದಾರೆ.
ಸಂಪುಟ ವಿಸ್ತರಣೆ ಸಂಬಂಧ ಪಕ್ಷದ ವರಿಷ್ಠರ ಜತೆ ಚರ್ಚಿಸಿ ಬಂದಿದ್ದೇನೆ. ಎರಡು, ಮೂರು ದಿನಗಳಲ್ಲಿ ದೆಹಲಿಯಿಂದ ಪಟ್ಟಿ ಬರಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಹಲವಾರು ಮಹಿಳಾ ನಾಯಕಿಯರಿಗೆ ಉಡುಪಿ ಸೀರೆ ಉಡುಗೊರೆ ನೀಡಿದ ಸಂಸದೆ ಶೋಭಾ ಕರಂದ್ಲಾಜೆ

ನಿನ್ನೆ ಸಂಪುಟ ವಿಸ್ತರಣೆ ಸಬಂಧ ದೆಹಲಿಗೆ ಸಿಎಂ ಯಡಿಯೂರಪ್ಪ ಹೋಗಿದ್ದರೂ ಗೃಹ ಸಚಿವ ಅಮಿತ್ ಶಾ ಭೇಟಿಗೆ ಅವಕಾಶ ಸಿಕ್ಕಿರಲಿಲ್ಲ. ಈ ಹಿಂದೆಯೂ ದಿಲ್ಲಿಗೆ ಹೋಗಿದ್ದ ಬಿಎಸ್‍ವೈ, ಜೆ.ಪಿ ನಡ್ಡಾ ಭೇಟಿ ಮಾಡಿ ಕೇವಲ ಪಟ್ಟಿಕೊಟ್ಟು ಬಂದಿದ್ದರು. ಪ್ರಧಾನಿ ನರೇಂದ್ರ ಮೋದಿ ಜತೆಗೆ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿ ಚರ್ಚಿಸಿದ್ದಾಗಿ ಯಡಿಯೂರಪ್ಪ ಹೇಳಿದ್ದರು. ಆಗ ಅಮಿತ್ ಶಾ ಅನಾರೋಗ್ಯದ ಕಾರಣ ಬಿಎಸ್‍ವೈ ಭೇಟಿಗೆ ಅವಕಾಶ ಸಿಕ್ಕಿರಲಿಲ್ಲ.bs yadiyurappa

ಬಿಜೆಪಿ ಹೈಕಮಾಂಡ್ ನಿರುತ್ಸಾಹವೋ..ನಾಯಕತ್ವ ಬದಲಾವಣೆಯ ಮುನ್ಸೂಚನೆಯೋ..!
ಜೆ.ಪಿ ನಡ್ಡಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದರೂ, ಅಂತಿಮ ಮುದ್ರೆ ಬೀಳಬೇಕೆಂದರೆ ಅಮಿತ್ ಶಾ ಗ್ರೀನ್ ಸಿಗ್ನಲ್ ಕೊಡಬೇಕು. ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಕಳೆದ ಕೆಲ ತಿಂಗಳಿಂದ ನಡೆಯುತ್ತಿರುವ ಸರ್ಕಸ್ ಬಗ್ಗೆ ಅಮಿತ್ ಶಾ ಆಸಕ್ತಿ ತೋರಿದಂತೆ ಕಾಣುತ್ತಿಲ್ಲ. ಕಳೆದ ತಿಂಗಳು ಬಿಹಾರ ಚುನಾವಣೆ ಕಾರಣ ಅಮಿತ್ ಶಾ ಸಂಪುಟ ವಿಸ್ತರಣೆ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ.
ಈಗ ಆರ್.ಆರ್ ನಗರ, ಶಿರಾ ಕ್ಷೇತ್ರದಲ್ಲೂ ಬಿಎಸ್‍ವೈ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ. ಮುನಿರತ್ನ ಸೇರಿದಂತೆ ಕೆಲ ಶಾಸಕರಿಂದ ಸಂಪುಟ ಸೇರಲು ಒತ್ತಡವೂ ಹೆಚ್ಚುತ್ತಿದೆ. ಆದರೂ, ರಾಜ್ಯದಲ್ಲಿ ಸಂಪುಟ ವಿಸ್ತರಣೆಯ ಬೆಳವಣಿಗೆ ಬಗ್ಗೆ ಬಿಜೆಪಿ ಹೈಕಮಾಂಡ್ ಗಂಭೀರವಾಗಿ ತೆಗೆದುಕೊಂಡಂತೆ ಕಾಣುತ್ತಿಲ್ಲ.

ಮತ್ತೊಂದು ಮೂಲಗಳ ಪ್ರಕಾರ, ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಯಡಿಯೂರಪ್ಪ ಕಾದು ಕುಳಿತಿದ್ದರೂ, ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡದೆ ಸುಮ್ಮನಿರುವುದು ನಾಯಕತ್ವ ಬದಲಾವಣೆಯ ಮುನ್ಸೂಚನೆಯೇ ಎಂಬ ಮಾತುಗಳು ಕೇಳಿ ಬರುತ್ತಿವೆ. ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪ ಕೆಳಗಿಳಿದ ಮೇಲೆಯೇ ಮುಂದಿನ ಹೆಜ್ಜೆ ಇಡೋಣ ಎಂಬ ತೀರ್ಮಾನಕ್ಕೆ ಬಿಜೆಪಿ ವರಿಷ್ಠರು ಚಿಂತನೆ ನಡೆಸಿರಬಹುದು. ಹೀಗಾಗಿ ಯಡಿಯೂರಪ್ಪ ಅವರ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕಸರತ್ತಿಗೆ ಹೈಕಮಾಂಡ್ ಮಣೆ ಹಾಕುತ್ತಿಲ್ಲ ಎನ್ನಲಾಗುತ್ತಿದೆ.bs yadiyurappa
ಮತ್ತೊಂದು ವಿಚಾರ ಗಮನಿಸಲೇಬೇಕೆಂದರೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ. ರಾಜ್ಯದಲ್ಲಿ ಇಷ್ಟೆಲ್ಲಾ ಬೆಳವಣಿಗೆ ನಡೆಯುತ್ತಿದ್ದರು ಬಿ.ಎಲ್ ಸಂತೋಷ್ ಸುಳಿವೇ ಸಿಗದಿರುವುದು ಕೂಡ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಆಪ್ ಆಧಾರಿತ ಹೊಯ್ಸಳ ಕ್ಯಾಬ್ ಸೇವೆಗೆ ಚಾಲನೆ
ಗೃಹ ಕಚೇರಿ ಕೃಷ್ಣಾದಲ್ಲಿ `ಹೊಯ್ಸಳ ಕ್ಯಾಬ್’ ಸೇವೆಗೆ ಚಾಲನೆ ನೀಡಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕನ್ನಡತಿ ಸುಧಾ ಉಮಾಶಂಕರ್ ಅವರು ಆಪ್ ಆಧಾರಿತ ಹೊಯ್ಸಳ ಕ್ಯಾಬ್ ಸೇವೆ ಆರಂಭಿಸಿರುವುದು ಸ್ವಾಗತಾರ್ಹ. ಈವರೆಗೂ ನಗರಗಳಿಗೆ ಸೀಮಿತವಾಗಿದ್ದ ಆಪ್ ಆಧಾರಿತ ಕ್ಯಾಬ್ ಸೇವೆ ಇನ್ನು ಮುಂದೆ ರಾಜ್ಯದ ಎಲ್ಲ ಭಾಗಕ್ಕೂ ದೊರೆಯಲಿದೆ. 5 ಸಾವಿರ ಕ್ಯಾಬ್ ಸೇವೆಯಿಂದ 5 ಸಾವಿರ ಜನರಿಗೆ ಉದ್ಯೋಗ ಸಿಗಲಿದೆ ಎಂದು ಹೇಳಿದರು.
ನಂತರ ಮಾತನಾಡಿದ ಸುಧಾ ಉಮಾಶಂಕರ್, ವಿದೇಶ ಹಾಗೂ ಹೊರ ರಾಜ್ಯದ ಕ್ಯಾಬ್ ಸಂಸ್ಥೆಗಳಿವೆ. ಇಲ್ಲಿಯೂ ಒಂದು ಕ್ಯಾಬ್ ಸಂಸ್ಥೆ ಇರಬೇಕು. ಬೇರೆ ಕಂಪನಿಗಳು ಹೆಚ್ಚಿನ ದರದಲ್ಲಿ ಸೇವೆ ಒದಗಿಸುತ್ತಿವೆ. ಕೆಲವರಿಗೆ ಭಾಷೆಯ ಸಮಸ್ಯೆ ಕಾಡುತ್ತಿದೆ. ಹೀಗಾಗಿ ನಮ್ಮ ರಾಜ್ಯದ್ದೇ ಒಂದು ಕ್ಯಾಬ್ ಸಂಸ್ಥೆ ಇರಬೇಕು ಎಂಬ ಉದ್ದೇಶದಿಂದ ಈ ಸಾಹಸಕ್ಕೆ ಕೈಹಾಕಿದ್ದೇವೆ. ನನ್ನ ಕನಸು ಈಗ ನನಸಾಗಿದೆ ಎಂದು ತಿಳಿಸಿದರು.

ಕಳೆದ ಒಂದು ವರ್ಷದಿಂದ ಯೋಜನೆ ರೂಪಿಸಿ ವ್ಯವಸ್ಥಿತವಾಗಿ ಕಾರ್ಯರೂಪಕ್ಕೆ ತರುತ್ತಿದ್ದೇವೆ. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಬೆಂಬಲ ಸೂಚಿಸಿರುವುದು ಸಂತಸ ತಂದಿದೆ. ಡಿಸೆಂಬರ್ ಮೊದಲ ವಾರದಿಂದ ಕ್ಯಾಬ್ ಸೇವೆ ಕಾರ್ಯಾರಂಭವಾಗಲಿದೆ ಎಂದು ಹೇಳಿದರು.

bs yadiyurappa

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bs yadiyurappacabinatedehli
ShareTweetSendShare
Join us on:

Related Posts

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

by Shwetha
July 18, 2026
0

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ನೀವು ಕೇವಲ ಪಿಯುಸಿ ಪಾಸಾಗಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಪಡೆಯಬೇಕೆಂದು ಬಯಸುತ್ತಿದ್ದರೆ ನಿಮಗಾಗಿ ಒಂದು...

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by Shwetha
July 18, 2026
0

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ದೇಶದ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಆಡಳಿತಾರೂಢ ಎನ್‌ಡಿಎ ಹಾಗೂ ವಿರೋಧ ಪಕ್ಷಗಳ ಒಕ್ಕೂಟದ ನಡುವೆ ತೀವ್ರ ವಾಕ್ಸಮರ...

ಮೊಟ್ಟೆ ದರದಲ್ಲಿ ನಿರಂತರ ಏರಿಕೆ; ಉತ್ಪಾದನೆ ಕುಸಿತದಿಂದ ಗ್ರಾಹಕರಿಗೆ ಬೆಲೆ ಬರೆ

ಮೊಟ್ಟೆ ದರದಲ್ಲಿ ನಿರಂತರ ಏರಿಕೆ; ಉತ್ಪಾದನೆ ಕುಸಿತದಿಂದ ಗ್ರಾಹಕರಿಗೆ ಬೆಲೆ ಬರೆ

by Shwetha
July 18, 2026
0

ರಾಜ್ಯದಲ್ಲಿ ಕೋಳಿ ಮೊಟ್ಟೆಯ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಗ್ರಾಹಕರಿಗೆ ಹೆಚ್ಚುವರಿ ಹೊರೆ ಉಂಟಾಗಿದೆ. ಕೆಲವೇ ವಾರಗಳ ಹಿಂದೆ 5 ರಿಂದ 6 ರೂಪಾಯಿಗೆ ದೊರೆಯುತ್ತಿದ್ದ ಮೊಟ್ಟೆ ಇದೀಗ...

ಅಧಿಕಾರಕ್ಕಿಂತ ನಿಯಮವೇ ದೊಡ್ಡದು ಚಾಮುಂಡಿ ಬೆಟ್ಟಕ್ಕೆ ಬಂದರೂ ದರ್ಶನ ಪಡೆಯದೆ ಮರಳಿದ ಸಚಿವ ಯತೀಂದ್ರ :ಯತೀಂದ್ರ ಸಿದ್ದರಾಮಯ್ಯ ಅವರ ಸರಳತೆಗೆ ಮೈಸೂರು ಜನತೆ ಫಿದಾ

ಅಧಿಕಾರಕ್ಕಿಂತ ನಿಯಮವೇ ದೊಡ್ಡದು ಚಾಮುಂಡಿ ಬೆಟ್ಟಕ್ಕೆ ಬಂದರೂ ದರ್ಶನ ಪಡೆಯದೆ ಮರಳಿದ ಸಚಿವ ಯತೀಂದ್ರ :ಯತೀಂದ್ರ ಸಿದ್ದರಾಮಯ್ಯ ಅವರ ಸರಳತೆಗೆ ಮೈಸೂರು ಜನತೆ ಫಿದಾ

by Shwetha
July 18, 2026
0

ಸಾಂಸ್ಕೃತಿಕ ನಗರಿ ಮೈಸೂರಿನ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಿನ್ನೆ ಮೊದಲ ಆಷಾಢ ಶುಕ್ರವಾರದ ಶುಭ ಸಂದರ್ಭದಲ್ಲಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರು ತೋರಿದ ಸೌಜನ್ಯದ ನಡೆ...

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ  :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

by Shwetha
July 18, 2026
0

ದೇಶದ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram