ಚಿಕ್ಕೋಡಿ : ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತೆ ಎಂದು ಕಾಂಗ್ರೆಸ್ ಪಕ್ಷದ ನೂತನ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಸತೀಶ್ ಜಾರಕಿಹೊಳಿ, ಶೈಕ್ಷಣಿಕ ಜಿಲ್ಲೆ ಚಿಕ್ಕೋಡಿಗೆ ಆಗಮಿಸಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ,ಡಿ.ಕೆ.ಶಿವಕುಮಾರ್ ಜೈಲಿಗೆ ಹೋಗಿ ಬಂದವರು. ಅವರಿಂದ ಹೇಗೆ ಪಕ್ಷ ಕಟ್ಟಲಾಗುತ್ತದೆ ಎಂಬ ರಾಮುಲು ಅವರ ಟೀಕೆಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ಹೋಗಿ ಬಂದಿದ್ದು ಒಂದು ಅಪ್ರಸ್ತುತ. ಡಿ.ಕೆ.ಶಿವಕುಮಾರ್ ಉತ್ಸಾಹಿ ಇದ್ದಾರೆ. ಪಕ್ಷ ಕಟ್ಟುವ ಛಲ ಅವರಲ್ಲಿದೆ. ನಾವೆಲ್ಲರೂ ಅವರ ಜೊತೆಗೆ ಕೆಲಸ ಮಾಡುತ್ತೇವೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಡಿಕೆಶಿ ಅವರ ಸಾಮರ್ಥ್ಯ ಹಾಗೂ ಪಕ್ಷ ಸೇವೆ ನೋಡಿ ಪಕ್ಷ ಅವರಿಗೆ ಜವಾಬ್ದಾರಿ ನೀಡಿದೆ. ಹಿಂದೆ ಇದ್ದ ಕಾಂಗ್ರೆಸ್ ಬೇರೆ, ಇಂದಿನ ಕಾಂಗ್ರೆಸ್ ಬೇರೆ. ಎಲ್ಲರೂ ಒಗ್ಗಟ್ಟಾಗಿ ಪಕ್ಷ ಕಟ್ಟುವ ಕೆಲಸ ಮಾಡುತ್ತೇವೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.








