ಬೆಂಗಳೂರು : ಕೊರೊನಾ ಸೋಂಕು ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವಾರು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಇದೀಗ 7ರಿಂದ 9ನೇ ತರಗತಿವರೆಗಿನ ಪರೀಕ್ಷೆಗಳನ್ನು ಮಾ.31ರವರೆಗೆ ಶಿಕ್ಷಣ ಇಲಾಖೆ ಮುಂದೂಡಿದೆ. ಆದರೆ 10ನೇ ತರಗತಿಯ ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ನಿಗದಿತ ವೇಳಾಪಟ್ಟಿಯಂತೆ ಎಸ್ಸೆಸ್ಸೆಲ್ಸಿ ಪರೀಕ್ಷೆ
ಶಿಕ್ಷಣ ಇಲಾಖೆ 7ರಿಂದ 9ರವರೆಗಿನ ಪರೀಕ್ಷೆಗಳನ್ನು ಮಾತ್ರ ಮುಂದೂಡಿದ್ದು, ಪೂರ್ವ ನಿಗದಿತ ವೇಳಾಪಟ್ಟಿಯಂತೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದೆ. ವಿದ್ಯಾರ್ಥಿಗಳು ಪರೀಕ್ಷಾ ದಿನಾಂಕಗಳಂದು ಮಾತ್ರ ಪರೀಕ್ಷೆಗೆ ಹಾಜರಾಗಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಈಗಾಗಲೇ ಒಂದನೇ ತರಗತಿಯಿಂದ 6ನೇ ತರಗತಿವರೆಗಿನ ಎಲ್ಲ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ.
ಅಲ್ಲದೆ 7, 8 , 9 ಮತ್ತು 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ರಜೆಯನ್ನು ಘೋಷಿಸಲಾಗಿತ್ತು. ಪರೀಕ್ಷೆಯ ದಿನದಂದು ವೇಳಾಪಟ್ಟಿಯಂತೆ ಪರೀಕ್ಷೆಗೆ ಮಾತ್ರ ವಿದ್ಯಾರ್ಥಿಗಳು ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ ಕೊರೋನ ಭೀತಿ ರಾಜ್ಯದಲ್ಲಿ ಹೆಚ್ಚಾಗಿರುವುದಲ್ಲೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿರುವುದರಿಂದ 7ರಿಂದ 9ನೇ ತರಗತಿವರೆಗಿನ ಪರೀಕ್ಷೆಗಳನ್ನು ಮುಂದೂಡಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆದೇಶಿಸಿದೆ.