ರಾಜ್ಯದಲ್ಲಿ ದೀಪಾವಳಿಗೆ ಪಟಾಕಿ ನಿಷೇಧ : ಸಿಎಂ ಬಿಎಸ್ ವೈ
ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆ ರಾಜ್ಯದಲ್ಲಿ ಬೆಳಕಿನ ಹಬ್ಬ ದೀಪಾವಳಿಗೆ ಪಟಾಕಿಯನ್ನು ನಿಷೇಧ ಮಾಡಿ ಅಧಿಕೃತ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಈ ಬಾರಿಯ ದೀಪಾವಳಿಕೆ ಯಾವುದೇ ರೀತಿಯ ಪಟಾಕಿಗೆ ಅವಕಾಶ ಇರುವುದಿಲ್ಲ.
ಕೊರೊನಾ ಸೋಂಕು ಹಿನ್ನೆಲೆ ಸರ್ಕಾರದಿಂದ ಪಟಾಕಿ ನಿಷೇಧ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲದೆ ಪಟಾಕಿ ನಿಷೇಧಿಸಿ ಸರ್ಕಾರದಿಂದ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸುವುದಾಗಿ ಬಿಎಸ್ ವೈ ತಿಳಿಸಿದರು.
ಶಾಲೆಗಳ ಪುನಾರಂಭ ಬಗ್ಗೆ ಸರ್ಕಾರದ ಪತ್ರಕ್ಕೆ ಸಿದ್ದು ಕೊಟ್ಟ ಉತ್ತರದಲ್ಲೇನಿದೆ ಗೊತ್ತಾ..?
ಇದೇ ವೇಳೆ ಬೈ ಎಲೆಕ್ಷನ್ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲಿ ನಾವು ನೂರಕ್ಕೆ ನೂರ ಗೆಲ್ಲಲಿದ್ದೇವೆ. ನಾನು ಹೇಳಬೇಕಾದರೆ ನೂರಾರು ಬಾರಿ ಲೆಕ್ಕಾಚಾರ ಹಾಕಿನೇ ನಾನು ಹೇಳೋದು.
ಇದುವರೆಗೂ ನಾನು ಹೇಳಿದ್ದು ಸುಳ್ಳಾಗಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಂತ್ರಿಮಂಡಲ ವಿಸ್ತರಣೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಬೈ ಎಲೆಕ್ಷನ್ ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ. ಫಲಿತಾಂಶ ಬಂದ ಬಳಿಕ ಫೋನ್ ಮೂಲಕ ಸಂಪರ್ಕ ಮಾಡಿ ವಿಸ್ತರಣೆ ಮಾಡಬಹುದಾ ನೋಡುತ್ತೇನೆ.
ಖಾಸಗಿ ಶಾಲೆ ಮುಖ್ಯಸ್ಥರು ಸೇರಿ ಇಡೀ ದಿನ ಸರಣಿ ಸಭೆ: ಶಾಲೆ ಆರಂಭಕ್ಕೆ ಸಿಗಲಿದ್ಯಾ ಗ್ರಿನ್ಸಿಗ್ನಲ್…?
ಇಲ್ಲ ಅಂದ್ರೆ 11ರಂದು ದೆಹಲಿಗೆ ಹೋಗಿ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರ ಜೊತೆ ಮಾತನಾಡುತ್ತೇನೆ ಎಂದು ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










