deogo-maradona
ಲೆಜೆಂಡ್ ಫುಟ್ಬಾಲ್ ಆಟಗಾರ ಡಿಯಾಗೋ ಮರಡೋನಾ ನಿಧನಕ್ಕೆ ಕಂಬನಿ ಮಿಡಿದ ಸಿನಿ ತಾರೆಯರು
ಲೆಜೆಂಡ್ ಫುಟ್ಬಾಲ್ ಆಟಗಾರ ಡಿಯಾಗೋ ಮರಡೋನಾ ಅವರು ತಮ್ಮ 60ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಮರಡೋನಾ ನಿಧನದಿಂದ ಇಡೀ ಕ್ರೀಡಾ ಲೋಕ ದುಃಖ ಸಾಗರದಲ್ಲಿ ಮುಳುಗಿದೆ. ಮರಡೋನಾ ನಿಧನಕ್ಕೆ ಕ್ರೀಡಾ ದಿಗ್ಗಜರು , ಸಿನಿಮಾ ತಾರೆಯರು ಸಂತಾಪ ಸೂಚಿಸುತ್ತಿದ್ದಾರೆ. ಸ್ಯಾಂಡಲ್ ವುಡ್, ಬಾಲಿವುಡ್, ಟಾಲಿವುಡ್ ಸೇರಿದಂತೆ ಎಲ್ಲಾ ಭಾಷೆಯ ನಟ ನಟಿಯರು ಫುಟ್ ಬಾಲ್ ದಂತಕಥೆ ಡಿಯೋಗೋ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.
ಅದರಂತೆ ಬಾಲಿವುಡ್ ನಟ ಶಾರುಖ್ ಖಾನ್ ಈ ಬಗ್ಗೆ ಟ್ವೀಟ್ ಮಾಡಿದ್ದು, ‘ಡಿಯಾಗೊ
ಮರಡೋನಾ ನೀವು ಫುಟ್ಬಾಲ್ ಅನ್ನು ಮತ್ತಷ್ಟು ಸುಂದರಗೊಳಿಸಿದ್ದೀರಿ. ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ. ನೀವು ಈ ಜಗತ್ತನ್ನು ರಂಜಿಸಿದ್ದಂತೆ ಸ್ಪರ್ಗವನ್ನು ಆಕರ್ಷಿಸಿ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಶೋಕವ್ಯಕ್ತಪಡಿಸಿದ್ದಾರೆ.
ಇನ್ನೂ ಶಾರುಖ್ ಖಾನ್ ಅವರ ಟ್ವೀಟ್ ಅನ್ನು ರೀಟ್ವೀಟ್ ಮಾಡಿರುವ ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಅವರು, ‘2020ರಲ್ಲಿ ಮತ್ತೋರ್ವ ಲೆಜೆಂಡ್ ಅನ್ನು ಕಳೆದುಕೊಂಡಿದ್ದೇವೆ’ ಎಂದಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ : ದೇಶಾದ್ಯಂತ ಅನ್ನದಾತರಿಂದ ದೆಹಲಿ ಚಲೋ..!
ಇತ್ತ ಟಾಲಿವುಡ್ ನ ಪ್ರಿನ್ಸ್ ಮಹೇಶ್ ಬಾಬು ಟ್ವೀಟ್ ಮಾಡಿದ್ದು, ‘ಲೆಜೆಂಡ್ ಅನ್ನು ಕಳೆದುಕೊಂಡಿದ್ದೀವಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಸಂತಾಪ ಸೂಚಿಸಿದ್ದಾರೆ. ಇನ್ನೂ ಅನೇಕರು ಫುಟ್ ಬಾಲ್ ದಿಗ್ಗಜನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಅರ್ಜೆಂಟೀನಾದ ಖಾಸಗಿ ಆಸ್ಪತ್ರೆಯಲ್ಲಿ ಮರಡೋನಾ ಅವರು ಕೊನೆಯುಸಿರೆಳೆದಿದ್ದಾರೆ. 1986ವಿಶ್ವಕಪ್ ವಿಜೇತ ಮರಡೋನಾ. ಇವರು ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮರಡೋನಾ ಇತ್ತೀಚಿಗಷ್ಟೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಅವರ ನಿಧನ ಅಭಿಮಾನಿಗಳಿಗೆ ಆಘಾತ ತಂದಿದೆ.
deogo-maradona
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel