ರೈಲಿಗೆ ತಲೆಕೊಟ್ಟು ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಆತ್ಮಹತ್ಯೆ SL dharmegowda
ಚಿಕ್ಕಮಗಳೂರು, ಡಿಸೆಂಬರ್29: ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಅವರು ಚಿಕ್ಕಮಗಳೂರು ಜಿಲ್ಲೆ ಗುಣಸಾಗರದಲ್ಲಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಜೆಡಿಎಸ್ ಪಕ್ಷದಿಂದ ವಿಧಾನಪರಿಷತ್ ಸದಸ್ಯರಾಗಿದ್ದರು. SL dharmegowda

ಎಚ್. ಡಿ. ದೇವೇಗೌಡರ ಕುಟುಂಬಕ್ಕೆ ಆಪ್ತರಾಗಿದ್ದ ಧರ್ಮೇಗೌಡರು ಸೋಮವಾರ ರಾತ್ರಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗುಣಸಾಗರ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಸುಮಾರು 11:30 ರ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.
ನಿನ್ನೆ ರಾತ್ರಿ 7 ಗಂಟೆ ಸುಮಾರಿಗೆ ಮನೆಯಿಂದ ಒಬ್ಬರೇ ಕಾರಿನಲ್ಲಿ ತೆರಳಿದ್ದ ಧರ್ಮೇಗೌಡರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗನ್ಮ್ಯಾನ್, ಎಸ್ಕಾರ್ಟ್ ಸಿಬ್ಬಂದಿ ಮನೆಗೆ ಕಳುಹಿಸಿ ಅವರು ತಮ್ಮ ಕಾರಿನಲ್ಲಿ ಒಬ್ಬರೇ ತೆರಳಿದ್ದರು ಎಂದು ಹೇಳಲಾಗಿದೆ.

ತಡ ರಾತ್ರಿಯಾದರೂ ವಾಪಸಾಗದ ಹಿನ್ನೆಲೆಯಲ್ಲಿ ಅವರಿಗಾಗಿ ಹುಡುಕಾಟ ಶುರುವಾಗಿದ್ದು, ಈ ವೇಳೆ ಗುಣಸಾಗರ ಬಳಿ ಧರ್ಮೇಗೌಡರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಸಿ.ಟಿ.ರವಿ, ಚಿಕ್ಕಮಗಳೂರು ಎಸ್ಪಿ ಭೇಟಿ ನೀಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
https://twitter.com/SaakshaTv/status/1343586719208071168?s=19
https://twitter.com/SaakshaTv/status/1343587039950721026?s=19








