ವಿಜಯಪುರ : ದೊರೆಸ್ವಾಮಿ ಅವರು ನಕಲಿ ಸ್ವಾತಂತ್ರ‍್ಯ ಹೋರಾಟಗಾರ, ಪಾಕಿಸ್ತಾನದ ಏಜೆಂಟ್ ತರ ಮಾತನಾಡುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸ್ವಾತಂತ್ರ‍್ಯ ಹೋರಾಟದಲ್ಲಿ ಬಿಜೆಪಿಗರ ಪಾತ್ರವಿಲ್ಲ ಎಂಬ ಹೇಳಿಕೆಗೆ ತಿರುಗೇಟು ನೀಡುವ ಭರದಲ್ಲಿ ದೊರೆಸ್ವಾಮಿ ವಿರುದ್ಧ ವಿವಾದಾತ್ಮಕ ಮಾತುಗಳನ್ನಾಡಿದರು. ದೊರೆಸ್ವಾಮಿ ನಕಲಿ ಸ್ವಾತಂತ್ರ‍್ಯ ಹೋರಾಟಗಾರ, ಅವರು ಪಾಕಿಸ್ತಾನದ ಏಜೆಂಟ್ ತರ ವರ್ತಿಸುತ್ತಾರೆ. ನೆಹರೂ ಅವರನ್ನು ಪ್ರಧಾನಿ ಮಾಡಲು ಪಾಕಿಸ್ತಾನ ಹುಟ್ಟಿಕೊಂಡಿತು. ದೇಶಕ್ಕಾಗಿ ಎಲ್ಲರೂ ಹೋರಾಟ ಮಾಡಿದ್ದರೆ, ಕೆಲವರು ನಕಲಿ ಸ್ವಾತಂತ್ರ‍್ಯ ಹೋರಾಟಗಾರರಿದ್ದಾರೆ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದರು.
ಇನ್ನು ಸ್ವಾತಂತ್ರ‍್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಹಲವಾರು ಜನಪರ ಹೋರಾಟಗಳಲ್ಲಿ ಭಾಗಿಯಾಗುತ್ತಿದ್ದು, ಇದೀಗ ಸಿಎಎ ವಿರೋಧಿ ಹೋರಾಟದಲ್ಲಿಯೂ ಕಾಣಿಸಿಕೊಂಡಿದ್ದಾರೆ.