ದಾವಣಗೆರೆ : ಅಹಿಂದ ಸಂಘಟನೆ ರೂವಾರಿ, ಹಿರಿಯ ರಾಜಕಾರಣಿ ಹಾಗೂ ಮಾಜಿ ಶಾಸಕ ಕೆ.ಮಲ್ಲಪ್ಪ( K. Mallappa ) ಅವರು ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಲ್ಲಪ್ಪನವರು (K. Mallappa) ಇಂದು ಬೆಳಿಗ್ಗೆ ದಾವಣಗೆರೆಯ ಆಂಜನೇಯ ಬಡಾವಣೆಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಮಾಯಕೊಂಡ ಹಾಗೂ ಹರಿಹರ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ವಿಧಾನಸೌಧ ಪ್ರವೇಸಿದ್ದ ಮಲ್ಲಪ್ಪ ಅವರು ಒಮ್ಮೆ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಕುಸ್ತಿ ಜೀರ್ಣೋದ್ಧಾರಕ ಸಂಘದ ಅಧ್ಯಕ್ಷರಾಗಿ ಹೆಸರು ವಾಸಿಯಾಗಿದ್ದ ಮಲ್ಲಪ್ಪ ಅವರು ಮಾಜಿ ಸಿಎಂ ಸಿದ್ದರಾಮಯ್ಯನವರ ಆಪ್ತರಾಗಿದ್ದರು. ಹೀಗಾಗಿ ಅಹಿಂದ ಸಂಘಟನೆಯ ಪ್ರಮುಖ ರೂವಾರಿ ಕೂಡ ಆಗಿದ್ದರು.
ಇದನ್ನೂ ಓದಿ : ಕೊರೊನಾ ವೈಫಲ್ಯ ಕಳಂಕ: ಅಸಮಾಧಾನ ಹೊರಹಾಕಿದ್ರಾ ಸಚಿವ ಶ್ರೀರಾಮುಲು..!
ಇನ್ನು ಕೆ.ಮಲ್ಲಪ್ಪ ಅವರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel