ಬೆಂಗಳೂರು : ಇಂದು ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು, ನಾಡಿನ ಜನರಿಗೆ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಹೆಚ್ ಡಿಡಿ, ಈ ವರ ಮಹಾಲಕ್ಷ್ಮಿ ವ್ರತವು ನಿಮಗೆ ಜೀವನದ ಎಲ್ಲ ಸವಾಲುಗಳನ್ನು ಧೈರ್ಯದಿಂದ ಎದುರಿಸುವ ಶಕ್ತಿಯನ್ನು ಒದಗಿಸಲಿ, ಕಷ್ಟದ ಕಾರ್ಮೋಡಗಳು ಸರಿದು ಆಯುರಾರೋಗ್ಯ, ಸಂಪತ್ತು, ಸುಖ, ಶಾಂತಿ, ನೆಮ್ಮದಿ ನಿಮ್ಮದಾಗಲಿ ಎಂದು ಹಾರೈಸಿದ್ದಾರೆ.
https://twitter.com/H_D_Devegowda/status/1289047792866844672?s=20
ಹೆಚ್ ಡಿಕೆ ಟ್ವೀಟ್ ನಲ್ಲಿ..
“ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು. ತಮ್ಮೆಲ್ಲರಿಗೂ ಲಕ್ಷ್ಮೀದೇವಿ ಸುಖ, ಸಮೃದ್ಧಿ ನೀಡಲಿ ಎಂದು ಕೇಳಿಕೊಳ್ಳುತ್ತೇನೆ. ಕೊರೊನಾ ಸಂಕಷ್ಟದ ಈ ಸಮಯದಲ್ಲಿ ನಾವೆಲ್ಲರೂ ನಮ್ಮ ಮನೆಯೊಳಗಡೆಯೇ ಇದ್ದು ಮನೆಯವರೊಂದಿಗೆ ವರಮಹಾಲಕ್ಷ್ಮಿ ಹಬ್ಬ ಆಚರಿಸೋಣ” ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
https://twitter.com/hd_kumaraswamy/status/1289057291371556864?s=20








