ಮಂಗಳೂರು, ಮೇ 16 : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ‘ಅಂಫಾನ್’ ಎಂಬ ಹೆಸರಿನ ಚಂಡಮಾರುತ ಸೃಷ್ಟಿಯಾಗಿದೆ.
ಸದ್ಯದ ಮಾಹಿತಿ ಪ್ರಕಾರ ಚಂಡಮಾರುತ ಮೇ. 18ರಂದು ತೀವ್ರ ಸ್ವರೂಪ ಪಡೆಯಲಿದ್ದು, ಕರಾವಳಿ ಭಾಗದಲ್ಲಿ ಭೀತಿ ಉಂಟಾಗಿದೆ. ಈಗಾಗಲೇ ರಾಜ್ಯದ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಚಂಡಮಾರುತ ಮುಂಬರುವ ಮುಂಗಾರು ಪ್ರವೇಶದ ಮೇಲೆ ಪರಿಣಾಮ ಬೀರಬಹುದು ಎಂದು ಹವಾಮಾನ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಿದ್ದರೆ, ಅರಬ್ಬಿ ಸಮುದ್ರದಲ್ಲಿ ನಿಮ್ನ ಒತ್ತಡ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಗುಡುಗು, ಸಿಡಿಲು ಸಹಿತ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.
1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ
ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿ ಪ್ರವೇಶದ ವಯೋಮಿತಿಯನ್ನು 60 ದಿನಗಳವರೆಗೆ ಸಡಿಲಗೊಳಿಸಿದೆ. ಇದುವರೆಗೆ ಜೂನ್ 1ರೊಳಗೆ ಮಗುವಿಗೆ 6 ವರ್ಷ ವಯಸ್ಸು ಪೂರ್ಣವಾಗಿರಬೇಕು...








