ನವದೆಹಲಿ, ಮೇ 22 : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆರ್ಭಟ ಹೆಚ್ಚಾಗುತ್ತಿದ್ದು, ಇವತ್ತು ಒಂದೇ ದಿನ ಬರೋಬ್ಬರಿ 6,088 ಮಂದಿ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ಸೋಂಕಿತರ ಸಂಖ್ಯೆ ದೇಶದಲ್ಲಿ 1,18,447ಕ್ಕೆ ತಲುಪಿದೆ.
ಕಳೆದ 24 ಗಂಟೆಯಲ್ಲಿ 148 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ದೇಶದಲ್ಲಿ ಈವರೆಗೆ ಕೊರೊನಾ ಸೋಂಕಿಗೆ 3,583 ಮಂದಿ ಬಲಿಯಾಗಿದ್ದಾರೆ. ಈವರೆಗೂ ಒಟ್ಟು 48,533 ಮಂದಿ ಕೊರೊನಾಗೆ ಚಿಕಿತ್ಸೆ ಪಡೆದು ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 66,330 ಸೋಂಕಿತರು ಇನ್ನೂ ಕೊರೊನಾದಿಂದ ಬಳಲುತ್ತಿದ್ದಾರೆ.
ಇನ್ನು ಮಹಾರಾಷ್ಟ್ರದಲ್ಲಿ ಕೊರೊನಾ ಅಬ್ಬರ ಮುಂದುವರಿದಿದ್ದು, ಅತೀ ಹೆಚ್ಚು ಸೋಂಕು ಹರಡಿರುವ ರಾಜ್ಯಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿಯೇ ಇದೆ. ಒಂದೇ ದಿನ ರಾಜ್ಯದಲ್ಲಿ 2 ಸಾವಿರಕ್ಕೂ ಅಧಿಕ ಹೊಸ ಕೊರೊನಾ ಪ್ರಕರಣ ವರದಿಯಾಗಿದೆ. ಈವರೆಗೆ 41,642 ಮಂದಿ ಸೋಂಕಿಗೆ ತುತ್ತಾಗಿದ್ದು, 1,454 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಅದರಲ್ಲೂ ಮುಂಬೈ ಒಂದರಲ್ಲೇ ಈವರೆಗೆ 25 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿದೆ.
ಎರಡನೇ ಸ್ಥಾನದಲ್ಲಿ ತಮಿಳುನಾಡು
ಕೊರೊನಾ ಹರಡಿರುವ ರಾಜ್ಯಗಳ ಪೈಕಿ ತಮಿಳುನಾಡು ಎರಡನೇ ಸ್ಥಾನದಲ್ಲಿದ್ದು, ಈವರೆಗೆ 13,967 ಮಂದಿಗೆ ಕೊರೊನಾ ತಗುಲಿದ್ದು, 95 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.
ಇತ್ತ ಗುಜರಾತ್ ನಲ್ಲಿ 12,910 ಮಂದಿ ಸೋಂಕಿಗೆ ತುತ್ತಾಗಿದ್ದು, 773 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ದೆಹಲಿಯಲ್ಲಿ 11,659 ಮಂದಿ ಕೊರೊನಾಗೆ ತುತ್ತಾಗಿದ್ದು, 194 ಮಂದಿ ಮೃತಪಟ್ಟಿದ್ದಾರೆ. ಸುಮಾರು 5,567 ಮಂದಿ ಸೋಂಕಿನಿAದ ಗುಣವಾಗಿದ್ದಾರೆ.
ರಾಜಸ್ಥಾನದಲ್ಲಿ 6,227 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, 151 ಮಂದಿ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶದಲ್ಲಿ 5,981 ಮಂದಿ ಸೋಂಕಿಗೆ ತುತ್ತಾಗಿದ್ದು, 271 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಉತ್ತರ ಪ್ರದೇಶದಲ್ಲಿ ಸೋಂಕಿತರ ಸಂಖ್ಯೆ 5,515ಕ್ಕೆ ಏರಿಕೆಯಾಗಿದ್ದು, 138 ಮಂದಿ ಮೃತಪಟ್ಟಿದ್ದಾರೆ.
ಇನ್ನು ಆಂಧ್ರಪ್ರದೇಶದಲ್ಲಿ 2,605 ಮಂದಿಗೆ ಸೋಂಕು ತಗುಲಿದ್ದು, 54 ಮಂದಿ ಸಾವನ್ನಪ್ಪಿದ್ದಾರೆ. . ತೆಲಂಗಾಣದಲ್ಲಿ 1,699 ಮಂದಿ ಕೊರೊನಾಗೆ ತುತ್ತಾಗಿದ್ದು, 45 ಮಂದಿಯನ್ನು ಹೆಮ್ಮಾರಿಗೆ ಬಲಿ ಪಡೆದಿದೆ. ಕೇರಳದಲ್ಲಿ 691 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 4 ಮಂದಿ ಮೃತಪಟ್ಟಿದ್ದಾರೆ.
ಕರ್ನಾಟಕದಲ್ಲಿ ಈವರೆಗೆ 1,605 ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ 41ರಲ್ಲಿಯೇ ಇದೆ. ಒಟ್ಟು 571 ಮಂದಿ ಸೋಂಕಿನಿAದ ಗುಣಮುಖರಾಗಿ ಮನೆ ಸೇರಿದ್ದಾರೆ.








